AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCBಗೆ ಸೋಲು… ತಲೆಕೆಳಗಾದ ಸೆಹ್ವಾಗ್ ಲೆಕ್ಕಾಚಾರ

IPL 2025 RCB vs PBKS Final: ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 190 ರನ್ ಕಲೆಹಾಕಿದರೆ, ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 184 ರನ್ ಬಾರಿಸಿ 6 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

RCBಗೆ ಸೋಲು… ತಲೆಕೆಳಗಾದ ಸೆಹ್ವಾಗ್ ಲೆಕ್ಕಾಚಾರ
Virender Sehwag
ಝಾಹಿರ್ ಯೂಸುಫ್
|

Updated on: Jun 04, 2025 | 1:55 PM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-18 ರಲ್ಲಿ ಪಂಜಾಬ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಬೇಕೆಂದು ಬಯಸಿದವರಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಕೂಡ ಒಬ್ಬರು. ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸೆಹ್ವಾಗ್, ಈ ಬಾರಿ ನಾನು ಪಂಜಾಬ್ ಕಿಂಗ್ಸ್ ತಂಡ ಗೆಲ್ಲಬೇಕೆಂದು ಬಯಸುತ್ತೇನೆ. ಅದಕ್ಕಾಗಿ ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬೆಂಬಲಿಸುವುದಾಗಿ ತಿಳಿಸಿದ್ದರು.

ಸೆಹ್ವಾಗ್ ಇಂತಹದೊಂದು ಹೇಳಿಕೆ ನೀಡಲು ಮುಖ್ಯ ಕಾರಣ, ಅವರು ಈ ಬಾರಿ ಬೆಂಬಲಿಸಿದ ತಂಡಗಳು ಸೋಲನುಭವಿಸಿರುವುದು.  ಈ ಟ್ರೆಂಡ್ ಅನ್ನು ಮುಂದುವರೆಸಲು ಟೀಮ್ ಇಂಡಿಯಾದ ಮಾಜಿ ಆಟಗಾರ ಫೈನಲ್ ಪಂದ್ಯದಲ್ಲಿ ನನ್ನ ಬೆಂಬಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಂದಿದ್ದರು.

ಇದಕ್ಕೂ ಮುನ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೆಹ್ವಾಗ್ ಪಂಜಾಬ್ ಕಿಂಗ್ಸ್ ತಂಡ ಗೆಲ್ಲಲಿದೆ ಎಂದಿದ್ದರು. ಆದರೆ ಗೆದ್ದಿದ್ದು ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಗೆಲ್ಲಲಿದೆ ಎಂದು ತಿಳಿಸಿದ್ದರು. ಆದರೆ ಗೆದ್ದಿರುವುದು ಮುಂಬೈ ಇಂಡಿಯನ್ಸ್.

ಇನ್ನು ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲ್ಲಲಿದೆ ಎಂದು ಸೆಹ್ವಾಗ್ ಭವಿಷ್ಯ ನುಡಿದ್ದರು. ಆದರೆ ಗೆದ್ದಿದ್ದು ಪಂಜಾಬ್ ಕಿಂಗ್ಸ್. ಇಲ್ಲಿ ತನ್ನ ಭವಿಷ್ಯವೆಲ್ಲವೂ ಉಲ್ಟಾ ಆದ ಕಾರಣ, ಅವರು ಆರ್​​ಸಿಬಿ ಗೆಲ್ಲಲಿದೆ ಎಂದಿದ್ದರು.

ಈ ಬಾರಿ ಐಪಿಎಲ್​ ಫೈನಲ್​ನಲ್ಲಿ ಆರ್​ಸಿಬಿ ಗೆಲ್ಲಲಿದೆ. ಆದರೆ ನನಗೆ ಗೆಲ್ಲಬೇಕಿರುವುದು ಪಂಜಾಬ್ ಕಿಂಗ್ಸ್ ತಂಡ. ಹೀಗಾಗಿ ನಾನು ಆರ್​ಸಿಬಿ ತಂಡಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದೇನೆ. ನಾನು ಬೆಂಬಲಿಸಿದ ತಂಡ ಸೋಲುವ ಕಾರಣ, ಅದೇ ಟ್ರೆಂಡ್ ಅನ್ನು ಮುಂದುವರೆಸುವುದಾಗಿ ವೀರೇಂದ್ರ ಸೆಹ್ವಾಗ್ ಕ್ರಿಕ್​ಬಝ್ ಸಂದರ್ಶನದಲ್ಲಿ ಹೇಳಿದ್ದರು.

ಆದರೆ ವೀರೇಂದ್ರ ಸೆಹ್ವಾಗ್ ಅವರ ಲೆಕ್ಕಾಚಾರ ಕೊನೆಗೂ ತಲೆಕೆಳಗಾಗಿದೆ. ಇದೇ ಮೊದಲ ಬಾರಿಗೆ ಅವರು ಗೆಲ್ಲಲಿ ಎಂದು ಹೇಳಿದ ತಂಡವೇ ಜಯ ಸಾಧಿಸಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಇದನ್ನೂ ಓದಿ: IPL 2025 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?

ಅಂದಹಾಗೆ ವೀರೇಂದ್ರ ಸೆಹ್ವಾಗ್ ಪಂಜಾಬ್ ಕಿಂಗ್ಸ್ ತಂಡಕ್ಕೆ ಬೆಂಬಲ ಸೂಚಿಸಲು ಮುಖ್ಯ ಕಾರಣ ಅವರು ಈ ಹಿಂದೆ ಪಂಜಾಬ್ ಪಡೆಯ ನಾಯಕರಾಗಿ ಕಾಣಿಸಿಕೊಂಡಿದ್ದರು. ಆ ಬಳಿಕ ತಂಡದ ಮೆಂಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಹೀಗಾಗಿಯೇ ಸೆಹ್ವಾಗ್ ಪಂಜಾಬ್ ಕಿಂಗ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವುದನ್ನು ಎದುರು ನೋಡಿದ್ದರು. ಆದರೆ ಅಂತಿಮ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟ್ರೋಫಿ ಎತ್ತಿ ಹಿಡಿದಿದೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ