AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಅತ್ಯಧಿಕ ಟೆಸ್ಟ್ ಸರಣಿ ಗೆದ್ದ ತಂಡ ಯಾವುದು ಗೊತ್ತಾ?

India vs New zealand: ಭಾರತದ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನ್ಯೂಝಿಲೆಂಡ್ ತಂಡ ಐತಿಹಾಸಿಕ ಸರಣಿ ಗೆಲುವು ದಾಖಲಿಸಿದೆ. ಈ ಸರಣಿ ಗೆಲುವಿನೊಂದಿಗೆ ಕಿವೀಸ್ ಪಡೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದ ವಿಶ್ವದ 6ನೇ ತಂಡ ಎನಿಸಿಕೊಂಡಿದೆ.

ಭಾರತದಲ್ಲಿ ಅತ್ಯಧಿಕ ಟೆಸ್ಟ್ ಸರಣಿ ಗೆದ್ದ ತಂಡ ಯಾವುದು ಗೊತ್ತಾ?
IND vs NZ
ಝಾಹಿರ್ ಯೂಸುಫ್
|

Updated on:Oct 27, 2024 | 9:53 AM

Share

ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದಿರುವುದು ಕೇವಲ 6 ತಂಡಗಳು ಮಾತ್ರ. ಈ ಆರು ತಂಡಗಳ ವಿರುದ್ಧ ಟೀಮ್ ಇಂಡಿಯಾ ತವರಿನಲ್ಲಿ 17 ಬಾರಿ ಸರಣಿ ಸೋತಿದೆ. ಇವುಗಳಲ್ಲಿ ಮೂರು ತಂಡಗಳು ತಲಾ ಒಂದು ಬಾರಿ ಮಾತ್ರ ಗೆಲುವಿನ ನಗೆ ಬೀರಿದೆ. ಇನ್ನುಳಿದ ಮೂರು ತಂಡಗಳು ಒಂದಾನೊಂದು ಕಾಲದಲ್ಲಿ ಭಾರತದ ವಿರುದ್ಧ ಪಾರುಪತ್ಯ ಮೆರೆದಿತ್ತು ಎಂಬುದೇ ಸತ್ಯ. ಹಾಗಿದ್ರೆ ಭಾರತದಲ್ಲಿ ಅತೀ ಹೆಚ್ಚು ಬಾರಿ ಟೆಸ್ಟ್ ಸರಣಿ ಗೆದ್ದ ತಂಡ ಯಾವುದು? ಎಂಬ ಪ್ರಶ್ನೆ ಮೂಡುವುದು ಸಹಜ. ಆ ಪ್ರಶ್ನೆಗೆ ಇಲ್ಲಿದೆ ಉತ್ತರ…

ವೆಸ್ಟ್ ಇಂಡೀಸ್: ಭಾರತದಲ್ಲಿ ಅತ್ಯಧಿಕ ಟೆಸ್ಟ್ ಸರಣಿಗಳನ್ನು ಗೆದ್ದ ತಂಡಗಳ ಪೈಕಿ ವೆಸ್ಟ್ ಇಂಡೀಸ್ ಅಗ್ರಸ್ಥಾನದಲ್ಲಿದೆ. ಟೀಮ್ ಇಂಡಿಯಾದ ಟೆಸ್ಟ್ ಕೆರಿಯರ್​ನ ಆರಂಭಿಕ ದಿನಗಳಲ್ಲಿ ವಿಂಡೀಸ್ ಪಡೆ ಪಾರುಪತ್ಯ ಮೆರೆದಿದ್ದರು. ಪರಿಣಾಮ ತವರಿನಲ್ಲಿ ಭಾರತ ತಂಡವು 1948, 1958, 1966, 1974, ಮತ್ತು 1983 ರಲ್ಲಿ ಟೆಸ್ಟ್ ಸರಣಿ ಸೋತಿತ್ತು.

ಇಂಗ್ಲೆಂಡ್: ವೆಸ್ಟ್ ಇಂಡೀಸ್ ಬಳಿಕ ಭಾರತದ ವಿರುದ್ಧ ತವರಿನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು ಇಂಗ್ಲೆಂಡ್. 1933 ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದಿದ್ದ ಇಂಗ್ಲೆಂಡ್ ಆ ಬಳಿಕ 1974, 1979, 1984, ಮತ್ತು 2012 ಜಯ ಸಾಧಿಸಿದ್ದರು.

ಆಸ್ಟ್ರೇಲಿಯಾ: ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ಬಳಿಕ ಟೀಮ್ ಇಂಡಿಯಾ ವಿರುದ್ಧ ತವರಿನಲ್ಲಿ ಸೆಟೆದು ನಿಂತ ತಂಡ ಆಸ್ಟ್ರೇಲಿಯಾ. 1956, 1959, 1969, ಮತ್ತು 2004 ರಲ್ಲಿ ಆಸ್ಟ್ರೇಲಿಯಾ ತಂಡವು ಭಾರತದಲ್ಲಿ ಐತಿಹಾಸಿಕ ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದ್ದರು.

ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್: ಭಾರತದಲ್ಲಿ ಏಕೈಕ ಟೆಸ್ಟ್ ಸರಣಿ ಗೆದ್ದ ತಂಡಗಳ ಪೈಕಿ ಪಾಕಿಸ್ತಾನ್ (1986) ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ (1999) ದ್ವಿತೀಯ ಸ್ಥಾನದಲ್ಲಿದೆ. ಇದೀಗ ಈ ಪಟ್ಟಿಗೆ ನ್ಯೂಝಿಲೆಂಡ್ (2024) ಸೇರ್ಪಡೆಯಾಗಿದೆ.

ಇದನ್ನೂ ಓದಿ: ಝಿಂಬಾಬ್ವೆ ಅಬ್ಬರಕ್ಕೆ ಟೀಮ್ ಇಂಡಿಯಾದ ವಿಶ್ವ ದಾಖಲೆ ಉಡೀಸ್

ಅಂದರೆ ಭಾರತದಲ್ಲಿ ಅತ್ಯಧಿಕ ಟೆಸ್ಟ್ ಸರಣಿಗಳನ್ನು ಗೆದ್ದ ದಾಖಲೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳ ಹೆಸರಿನಲ್ಲಿದೆ. ಈ ತಂಡಗಳು ಒಟ್ಟು 5 ಬಾರಿ ಭಾರತಕ್ಕೆ ಸರಣಿ ಸೋಲಿನ ರುಚಿ ತೋರಿಸಿದೆ.

ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲದ ದೇಶಗಳು:

  • ಶ್ರೀಲಂಕಾ
  • ಬಾಂಗ್ಲಾದೇಶ್
  • ಐರ್ಲೆಂಡ್
  • ಅಫ್ಘಾನಿಸ್ತಾನ್
  • ಝಿಂಬಾಬ್ವೆ

Published On - 9:53 am, Sun, 27 October 24

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?