Asia cup 2022: ಏಷ್ಯಾಕಪ್​ಗೂ ಮುನ್ನ ಟೀಮ್ ಇಂಡಿಯಾದಲ್ಲಿ ದೊಡ್ಡ ಬದಲಾವಣೆ: ಹೊಸ ಕೋಚ್

VVS Laxman: ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿ 2022ಕ್ಕೆ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅಲಭ್ಯತೆಯಿರುವ ಕಾರಣ ಇದೀಗ ಹೊಸ ಕೋಚ್ ನೇಮಕ ಮಾಡಲಾಗಿದೆ. ವಿವಿಎಸ್ ಲಕ್ಷ್ಮಣ್ ಅವರನ್ನು ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

Asia cup 2022: ಏಷ್ಯಾಕಪ್​ಗೂ ಮುನ್ನ ಟೀಮ್ ಇಂಡಿಯಾದಲ್ಲಿ ದೊಡ್ಡ ಬದಲಾವಣೆ: ಹೊಸ ಕೋಚ್
IND vs AUS
Follow us
TV9 Web
| Updated By: Vinay Bhat

Updated on: Aug 25, 2022 | 7:46 AM

ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ಬಹುನಿರೀಕ್ಷಿತ ಏಷ್ಯಾಕಪ್ 2022 (Asia cup 2022) ಟೂರ್ನಿ ಆರಂಭಕ್ಕೆ ಇನ್ನೇನು ಕೇವಲ ಎರಡು ದಿನಗಳಷ್ಟೆ ಬಾಕಿಯಿದೆ. ಆಗಸ್ಟ್ 27ಕ್ಕೆ ಚಾಲನೆ ಸಿಗಲಿದ್ದು ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ತಂಡ ಮುಖಾಮುಖಿ ಆಗಲಿದೆ. ಭಾರತ ಆ. 28 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (India vs Pakistan) ವಿರುದ್ಧ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಆದರೆ, ಇದಕ್ಕೂ ಮುನ್ನವೇ ಭಾರತಕ್ಕೆ ಆಘಾತ ಉಂಟಾಯಿತು. ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿತು. ಇದೀಗ ದ್ರಾವಿಡ್ ಭಾರತ ತಂಡದೊಂದಿಗೆ ದುಬೈಗೆ ಪ್ರಯಾಣ ಬೆಳೆಸಿಲ್ಲ. ಅವರನ್ನು ಐಸೋಲೇಷನ್‌ನಲ್ಲಿ ಇರಿಸಲಾಗಿದೆ.

ದ್ರಾವಿಡ್ ಅಲಭ್ಯತೆಯಿರುವ ಕಾರಣ ತಂಡಕ್ಕೆ ಇದೀಗ ಹೊಸ ಕೋಚ್ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರನ್ನು ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಆಡಲಿರುವ ಭಾರತ ತಂಡಕ್ಕೆ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ”ಇತ್ತೀಚೆಗಷ್ಟೆ ಜಿಂಬಾಬ್ವೆ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಆಡಿದ ಭಾರತ ತಂಡಕ್ಕೂ ವಿವಿಎಸ್ ಲಕ್ಷ್ಮಣ್ ಕೋಚ್ ಆಗಿ ತೆರಳಿದ್ದರು. ಇದೀಗ ದ್ರಾವಿಡ್ ಅವರು ಕೋವಿಡ್‌ ನಿಂದಾಗಿ ತಂಡದೊಂದಿಗೆ ಏಷ್ಯಾಕಪ್​ಗೆ ತೆರಳುತ್ತಿಲ್ಲ. ಹೀಗಾಗಿ ಲಕ್ಷ್ಮಣ್ ಅವರನ್ನು ಹಂಗಾಮಿ ಕೋಚ್ ಆಗಿ ನೇಮಕ ಮಾಡಲಾಗಿದೆ,” ಎಂದು ಶಾ ಹೇಳಿದ್ದಾರೆ.

ಇದನ್ನೂ ಓದಿ
Image
Hardik Pandya: ಖಾಸಗಿ ಜೆಟ್‌, ದುಬಾರಿ ಕಾರು; ಹಾರ್ದಿಕ್ ಪಾಂಡ್ಯರ ಐಷಾರಾಮಿ ಜೀವನದ ವಿಡಿಯೋ ನೋಡಿ
Image
ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ; ಪ್ರಿಯಾಂಕ್ ಪಾಂಚಾಲ್​ಗೆ ನಾಯಕತ್ವ
Image
ಇಂಜುರಿಂದ ಗುಣಮುಖರಾದ ರಹಾನೆಗೆ ನಾಯಕತ್ವ; ಶ್ರೇಯಸ್, ಶಾರ್ದೂಲ್, ಜೈಸ್ವಾಲ್​ಗೂ ತಂಡದಲ್ಲಿ ಸ್ಥಾನ
Image
Asia Cup 2022: ಏಷ್ಯಾಕಪ್​ಗೆ ಟೀಂ ಇಂಡಿಯಾ ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಆಯ್ಕೆ..!

ಇತ್ತ ಬಿಸಿಸಿಐ ವೈದ್ಯಕೀಯ ಸಮಿತಿ, ”ದ್ರಾವಿಡ್ ಅವರು ಕೋವಿಡ್‌ನಿಂದ ಚೇತರಿಸಿಕೊಂಡ ನಂತರ ಹಾಗೂ ನೆಗೆಟಿವ್ ವರದಿ ಬಂದ ನಂತರ ದುಬೈಗೆ ತೆರಳಿ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ,” ಎಂದು ತಿಳಿಸಿದೆ. ಏಷ್ಯಾಕಪ್​ಗಾಗಿ ಈಗಾಗಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸೇರಿದಂತೆ ಇತರೆ ಆಟಗಾರರು ದುಬೈಗೆ ತಲುಪಿದ್ದಾರೆ. ಕೆಲ ಆಟಗಾರರು ಜಿಂಬಾಬ್ವೆ ಪ್ರವಾಸದಿಂದಲೇ ನೇರವಾಗಿ ಯುಎಇಗೆ ಶಿಫ್ಟ್ ಆಗಿದ್ದಾರೆ.

ಈ ಬಾರಿ ಏಷ್ಯಾಕಪ್ ಟೂರ್ನಿಗಿಂತ ಹೆಚ್ಚು ಕ್ರೇಜ್ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯಕ್ಕಿದೆ. ಆಗಸ್ಟ್‌ 28ರಂದು ನಡೆಯಲಿರುವ ಸಾಂಪ್ರದಾಯಿಕ ಎದುರಾಳಿಗಳ ನಡುವಣ ಕದನ ವೀಕ್ಷಿಸಲು ಕ್ರಿಕೆಟ್‌ ಅಭಿಮಾನಿಗಳಂತು ಬಹಳ ಕಾತುರದಿಂದ ಎದುರು ನೋಡುತ್ತಿದ್ದಾರೆ. ಇದರ ಜೊತೆಗೆ ಈ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಕೊಹ್ಲಿ ಕೂಡ ಈಗಾಗಲೇ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಜಿಮ್​​​ ಹಾಗೂ ಒಳಾಂಗಣ ಕ್ರೀಡಾಂಗಣದಲ್ಲಿ ಬೆವರು ಸುರಿಸುತ್ತಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಕೊಹ್ಲಿ​​ 100ನೇ ಟಿ20 ಅಂತರರಾಷ್ಟ್ರೀಯ ಪಂದ್ಯವನ್ನು ಕೂಡ ಆಡಿದ ಸಾಧನೆ ಮಾಡುವರು. ಜೊತೆಗೆ ಈ ರೆಕಾರ್ಡ್ ನಿರ್ಮಿಸುವ ಎರಡನೇ ಭಾರತೀಯ ಆಟಗಾರನಾಗಲಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಲೋಕೇಶ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್.

ಸ್ಟ್ಯಾಂಡ್‌ಬೈ: ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ದೀಪಕ್ ಚಹಾರ್.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ