AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VVS Laxman: ಎನ್‌ಸಿಎ ಮುಖ್ಯಸ್ಥರಾಗಿ ವಿವಿಎಸ್ ಲಕ್ಷ್ಮಣ್ ಅಧಿಕಾರಾವಧಿ ವಿಸ್ತರಣೆ

VVS Laxman: ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿದ್ದಾಗ ಲಕ್ಷ್ಮಣ್ ಅವರನ್ನು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯರಾಗಿ ಆಯ್ಕೆ ಮಾಡಿದ್ದರು. ಅದರಂತೆ ಲಕ್ಷ್ಮಣ್‌ ಅವರ ಮೂರು ವರ್ಷಗಳ ಒಪ್ಪಂದವು ಈ ಸೆಪ್ಟೆಂಬರ್‌ನಲ್ಲಿ ಅಂತ್ಯಗೊಳಲಿದೆ. ಆದರೆ ಸದ್ಯಕ್ಕೆ ಹೊರಬಿದ್ದಿರುವ ಮಾಹಿತಿ ಪ್ರಕಾರ ಲಕ್ಷ್ಮಣ್ ಇನ್ನೂ ಒಂದು ವರ್ಷ ಇದೇ ಹುದ್ದೆಯಲ್ಲಿ ಮುಂದುವರೆಯಲ್ಲಿದ್ದಾರೆ.

VVS Laxman: ಎನ್‌ಸಿಎ ಮುಖ್ಯಸ್ಥರಾಗಿ ವಿವಿಎಸ್ ಲಕ್ಷ್ಮಣ್ ಅಧಿಕಾರಾವಧಿ ವಿಸ್ತರಣೆ
ವಿವಿಎಸ್ ಲಕ್ಷ್ಮಣ್
ಪೃಥ್ವಿಶಂಕರ
|

Updated on: Aug 15, 2024 | 9:36 PM

Share

ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್ ವಿವಿಎಸ್ ಲಕ್ಷ್ಮಣ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಅಂದರೆ ಎನ್‌ಸಿಎ ಮುಖ್ಯಸ್ಥರಾಗಿ ಮುಂದುವರೆಯಲ್ಲಿದ್ದಾರೆ. ವಿವಿಎಸ್ ಲಕ್ಷ್ಮಣ್ ಅವರ ಅಧಿಕಾರಾವಧಿಯನ್ನು ಬಿಸಿಸಿಐ ಒಂದು ವರ್ಷದವರೆಗೆ ವಿಸ್ತರಿಸಿದೆ ಎಂದು ವರದಿಯಾಗಿದೆ. ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿದ್ದಾಗ ಲಕ್ಷ್ಮಣ್ ಅವರನ್ನು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯರಾಗಿ ಆಯ್ಕೆ ಮಾಡಿದ್ದರು. ಅದರಂತೆ ಲಕ್ಷ್ಮಣ್‌ ಅವರ ಮೂರು ವರ್ಷಗಳ ಒಪ್ಪಂದವು ಈ ಸೆಪ್ಟೆಂಬರ್‌ನಲ್ಲಿ ಅಂತ್ಯಗೊಳಲಿದೆ. ಆದರೆ ಸದ್ಯಕ್ಕೆ ಹೊರಬಿದ್ದಿರುವ ಮಾಹಿತಿ ಪ್ರಕಾರ ಲಕ್ಷ್ಮಣ್ ಇನ್ನೂ ಒಂದು ವರ್ಷ ಇದೇ ಹುದ್ದೆಯಲ್ಲಿ ಮುಂದುವರೆಯಲ್ಲಿದ್ದಾರೆ.

ಒಂದು ವರ್ಷ ಅಧಿಕಾರವದಿ ವಿಸ್ತರಣೆ

ಇದೀಗ ಒಂದು ವರ್ಷ ಅಧಿಕಾರವದಿ ವಿಸ್ತರಣೆ ಮಾಡಿಕೊಂಡಿರುವ ವಿವಿಎಲ್ ಲಕ್ಷ್ಮಣ್ ಅವರಿಗೆ ಎನ್‌ಸಿಎಯಲ್ಲಿ ಹಿರಿಯ ಭಾರತೀಯ ಕೋಚಿಂಗ್ ತಂಡವು ಸಹಾಯ ಮಾಡುವ ಸಾಧ್ಯತೆಯಿದೆ. ಇದರಲ್ಲಿ ಶಿತಾಂಶು ಕೊಟಕ್, ಸಾಯಿರಾಜ್ ಬಹುತುಲೆ ಮತ್ತು ಹೃಷಿಕೇಶ್ ಕಾನಿಟ್ಕರ್ ಅವರಂತಹ ದೊಡ್ಡ ಹೆಸರುಗಳಿವೆ. ತನ್ನ ಮೊದಲ ಮೂರು ವರ್ಷಗಳ ಅವಧಿಯಲ್ಲಿ ಲಕ್ಷ್ಮಣ್, ಆಟಗಾರರ ಗಾಯದ ನಿರ್ವಹಣೆ, ಆಟಗಾರರ ಪುನರ್ವಸತಿ, ತರಬೇತಿ ಕಾರ್ಯಕ್ರಮಗಳು ಮತ್ತು ಹಿರಿಯ-ಕಿರಿಯ ತಂಡಗಳೊಂದಿಗೆ ಮಹಿಳಾ ಕ್ರಿಕೆಟ್‌ಗೆ ಉತ್ತಮ ಮಾರ್ಗಸೂಚಿಯನ್ನು ರೂಪಿಸಿದ್ದಾರೆ. ವಿವಿಎಸ್ ಲಕ್ಷ್ಮಣ್ ಅವರಿಗಿಂತ ಮೊದಲು ರಾಹುಲ್ ದ್ರಾವಿಡ್ ಈ ಸ್ಥಾನವನ್ನು ಅಲಂಕರಿಸಿದ್ದರು.

ವಿವಿಎಸ್ ಲಕ್ಷ್ಮಣ್ ಅಂತಾರಾಷ್ಟ್ರೀಯ ವೃತ್ತಿಜೀವನ

ವಿವಿಎಸ್ ಲಕ್ಷ್ಮಣ್ ತಮ್ಮ ಅಂತರಾಷ್ಟ್ರೀಯ ವೃತ್ತಿ ಜೀವನದಲ್ಲಿ ಟೀಂ ಇಂಡಿಯಾ ಪರ 134 ಟೆಸ್ಟ್ ಮತ್ತು 86 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ, ಅವರು 45.97 ರ ಸರಾಸರಿಯಲ್ಲಿ 56 ಅರ್ಧ ಶತಕಗಳು ಮತ್ತು 17 ಶತಕಗಳ ಸಹಾಯದಿಂದ 8781 ರನ್‌ಗಳನ್ನು ಬಾರಿಸಿದ್ದಾರೆ. ಹಾಗೆಯೇ ಏಕದಿನದಲ್ಲಿ 30.76 ರ ಸರಾಸರಿಯಲ್ಲಿ 10 ಅರ್ಧ ಶತಕ ಮತ್ತು 6 ಶತಕಗಳನ್ನೊಳಗೊಂಡಂತೆ 2338 ರನ್ ಬಾರಿಸಿದ್ದರು. ಇದಲ್ಲದೆ ಅವರು ಅನೇಕ ಸಂದರ್ಭಗಳಲ್ಲಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿಯೂ ಕೆಲಸ ಮಾಡಿದ್ದಾರೆ.

ಹೊಸ ಎನ್‌ಸಿಎ ಕ್ಯಾಂಪಸ್

ಪ್ರಸ್ತುತ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಕೆಲಸ ಮಾಡುತ್ತಿದೆ. ಆದರೆ ಹೊಸ ಎನ್‌ಸಿಎ ಕ್ಯಾಂಪಸ್ ಬೆಂಗಳೂರಿನ ಹೊರಹೊಲಯದಲ್ಲಿ ನಿರ್ಮಾಣಗೊಂಡಿದೆ. ವರದಿಯ ಪ್ರಕಾರ ಮುಂದಿನ ತಿಂಗಳು ಈ ಹೊಸ ಎನ್‌ಸಿಎ ಕ್ಯಾಂಪಸ್  ಉದ್ಘಾಟನೆಯೂ ಆಗಬಹುದು. ಈ ಹೊಸ ಎನ್‌ಸಿಎ ಕ್ಯಾಂಪಸ್‌ನಲ್ಲಿ 3 ಅಂತಾರಾಷ್ಟ್ರೀಯ ಮಟ್ಟದ ಮೈದಾನಗಳು, 100 ಪಿಚ್‌ಗಳು, 45 ಒಳಾಂಗಣ ಪಿಚ್‌ಗಳು, ಒಲಿಂಪಿಕ್ ಗಾತ್ರದ ಪೂಲ್ ಮತ್ತು ಆಧುನಿಕ ಪುನರ್ವಸತಿ ಕೇಂದ್ರ ಸಿದ್ಧವಾಗಿದೆ. ಈ ಹೊಸ ಎನ್‌ಸಿಎ ಕ್ಯಾಂಪಸ್‌ನಲ್ಲಿ ಕ್ರಿಕೆಟಿಗರನ್ನು ಹೊರತುಪಡಿಸಿ ನೀರಜ್ ಚೋಪ್ರಾ ಸೇರಿದಂತೆ ಇತರ ಎಲ್ಲಾ ಒಲಿಂಪಿಕ್ ಅಥ್ಲೀಟ್‌ಗಳು ಸಹ ಅಭ್ಯಾಸ ಮಾಡಲು ಸಾಧ್ಯವಾಗುತ್ತದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!