IND vs SA: ಭಾರತ ತಂಡದ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ
India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 4 ಪಂದ್ಯಗಳ ಟಿ20 ಸರಣಿಯು ನವೆಂಬರ್ 8 ರಿಂದ ಶುರುವಾಗಲಿದೆ. ಸೌತ್ ಆಫ್ರಿಕಾದಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರ ಭಾರತ ತಂಡವನ್ನು ಈಗಾಗಲೇ ಘೋಷಿಸಲಾಗಿದೆ. ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಗಾಗಿ ತೆರಳಲಿದ್ದು, ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಅಲಭ್ಯರಾಗಲಿದ್ದಾರೆ.
ಹೀಗಾಗಿ ಸೌತ್ ಆಫ್ರಿಕಾ ವಿರುದ್ದದ ಸರಣಿಗಾಗಿ ವಿವಿಎಸ್ ಲಕ್ಷ್ಮಣ್ ಅವರನ್ನು ಕೋಚ್ ಆಗಿ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ನವೆಂಬರ್ 8 ರಿಂದ ಆರಂಭವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಮುಖ್ಯ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ವಿವಿಎಸ್ ಲಕ್ಷ್ಮಣ್ ಅವರೊಂದಿಗೆ ಸಾಯಿರಾಜ್ ಬಹುತುಲೆ, ಹೃಷಿಕೇಶ್ ಕಾನಿಟ್ಕರ್ ಮತ್ತು ಸುಭದೀಪ್ ಘೋಷ್ ಅವರು ಕೋಚಿಂಗ್ ಸಿಬ್ಬಂದಿಯ ಭಾಗವಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?
ಈ ಹಿಂದೆ ಕೂಡ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ತಾತ್ಕಾಲಿಕ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಂಡಿದ್ದರು. ರಾಹುಲ್ ದ್ರಾವಿಡ್ ಅವರ ಅನುಪಸ್ಥಿತಿಯ ವೇಳೆ ಲಕ್ಷ್ಮಣ್ ಅವರನ್ನು ಹಲವು ಸರಣಿಗಳಿಗೆ ಕೋಚ್ ಆಗಿ ನೇಮಿಸಲಾಗಿತ್ತು. ಇದೀಗ ಎನ್ಸಿಎ ಮುಖ್ಯಸ್ಥನ ಹುದ್ದೆಯಲ್ಲಿ ಮುಂದುವರೆದಿರುವ ಲಕ್ಷ್ಮಣ್ ಅವರು ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ವೇಳೆ ತಂಡದ ಕೋಚಿಂಗ್ ಜವಾಬ್ದಾರಿಯನ್ನು ಹೆಗಲೇರಿಸಿಕೊಳ್ಳಲಿದ್ದಾರೆ.
ಭಾರತ vs ಸೌತ್ ಆಫ್ರಿಕಾ ಸರಣಿ ಯಾವಾಗ ಶುರು?
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 4 ಪಂದ್ಯಗಳ ಟಿ20 ಸರಣಿಯು ನವೆಂಬರ್ 8 ರಿಂದ ಶುರುವಾಗಲಿದೆ. ಸೌತ್ ಆಫ್ರಿಕಾದಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರ ಭಾರತ ತಂಡವನ್ನು ಈಗಾಗಲೇ ಘೋಷಿಸಲಾಗಿದೆ. ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…
ತಂಡಗಳು | ದಿನಾಂಕ | ಸಮಯ | ಸ್ಥಳ |
1ನೇ ಟಿ20, ಸೌತ್ ಆಫ್ರಿಕಾ vs ಭಾರತ | ಶುಕ್ರವಾರ, 8 ನವೆಂಬರ್ 2024 | 8:30 PM | ಡರ್ಬನ್ |
2ನೇ ಟಿ20, ಸೌತ್ ಆಫ್ರಿಕಾ vs ಭಾರತ | ಭಾನುವಾರ, 10 ನವೆಂಬರ್ 2024 | 8:30 PM | ಗ್ಕೆಬರ್ಹಾ |
3ನೇ ಟಿ20, ಸೌತ್ ಆಫ್ರಿಕಾ vs ಭಾರತ | ಬುಧವಾರ, 13 ನವೆಂಬರ್ 2024 | 8:30 PM | ಸೆಂಚುರಿಯನ್ |
4ನೇ ಟಿ20, ಸೌತ್ ಆಫ್ರಿಕಾ vs ಭಾರತ | ಶುಕ್ರವಾರ, 15 ನವೆಂಬರ್ 2024 | 8:30 PM | ಜೋಹಾನ್ಸ್‌ಬರ್ಗ್ |
Published On - 11:19 am, Mon, 28 October 24