AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VVS Laxman: ರಾಹುಲ್ ದ್ರಾವಿಡ್ ಸ್ಥಾನಕ್ಕೆ ವಿವಿಎಸ್​ ಲಕ್ಷ್ಮಣ್ ನೇಮಕ ಬಹುತೇಕ ಖಚಿತ

ಟೆಸ್ಟ್​​ನಲ್ಲಿ 17 ಶತಕ ಮತ್ತು 56 ಅರ್ಧ ಶತಕಗಳೊಂದಿಗೆ ಒಟ್ಟು 8781 ರನ್ ಗಳಿಸಿದ್ದಾರೆ. ಇದಲ್ಲದೇ ಏಕದಿನದಲ್ಲಿ 6 ಶತಕ ಹಾಗೂ 10 ಅರ್ಧ ಶತಕ ಸಿಡಿಸಿ ಒಟ್ಟು 2338 ರನ್ ಗಳಿಸಿದ್ದಾರೆ. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 55 ಶತಕಗಳನ್ನು ಒಳಗೊಂಡಂತೆ 19730 ರನ್‌ಗಳನ್ನು ಕಲೆಹಾಕಿದ್ದಾರೆ.

VVS Laxman: ರಾಹುಲ್ ದ್ರಾವಿಡ್ ಸ್ಥಾನಕ್ಕೆ ವಿವಿಎಸ್​ ಲಕ್ಷ್ಮಣ್ ನೇಮಕ ಬಹುತೇಕ ಖಚಿತ
Dravid-VVS Laxman
TV9 Web
| Edited By: |

Updated on: Nov 14, 2021 | 3:53 PM

Share

ಭಾರತದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ (VVS Laxman) ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (NCA) ಮುಂದಿನ ಮುಖ್ಯಸ್ಥರಾಗಲಿದ್ದಾರೆ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ಖಚಿತಪಡಿಸಿದ್ದಾರೆ. ತಮ್ಮ ಮಾಜಿ ಬ್ಯಾಟಿಂಗ್ ಸಹೋದ್ಯೋಗಿ ರಾಹುಲ್ ದ್ರಾವಿಡ್ ಈ ಹುದ್ದೆಯಿಂದ ನಿರ್ಗಮಿಸಿದ ನಂತರ ಲಕ್ಷ್ಮಣ್ ಅವರು ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ದ್ರಾವಿಡ್ ಇತ್ತೀಚೆಗಷ್ಟೇ ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಿ ನೇಮಕಗೊಂಡಿದ್ದಾರೆ. ರವಿಶಾಸ್ತ್ರಿ ಬದಲಿಗೆ ದ್ರಾವಿಡ್ ಈ ಹುದ್ದೆಯನ್ನು ಅಲಂಕರಿಸಿದ್ದಾರೆ.

“ವಿವಿಎಸ್ ಲಕ್ಷ್ಮಣ್ ಅವರು ಎನ್‌ಸಿಎಯ ಹೊಸ ಮುಖ್ಯಸ್ಥರಾಗಲಿದ್ದಾರೆ” ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ವೃತ್ತಿಜೀವನದಲ್ಲಿ 220 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಲಕ್ಷ್ಮಣ್ ಈ ಸ್ಥಾನಕ್ಕೇರುವ ಮುನ್ನ ಹಲವು ಜವಾಬ್ದಾರಿಗಳನ್ನು ಬಿಟ್ಟುಕೊಡಬೇಕಾಗುತ್ತದೆ. ಈ ಅನುಕ್ರಮದಲ್ಲಿ, ಅವರು ಈಗಾಗಲೇ ಐಪಿಎಲ್ ತಂಡದ ಸನ್ ರೈಸರ್ಸ್ ಹೈದರಾಬಾದ್ ತಂಡದ ಮೆಂಟರ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಇದರರ್ಥ ಭಾರತೀಯ ಕ್ರಿಕೆಟ್‌ನ ಇಬ್ಬರು ದಂತಕಥೆಗಳಾದ ಲಕ್ಷ್ಮಣ್ ಮತ್ತು ದ್ರಾವಿಡ್ ಈಗ ಒಟ್ಟಿಗೆ ಕೆಲಸ ಮಾಡುತ್ತಾರೆ. ಭಾರತ ಮುಖ್ಯ ಕೋಚ್ ಮತ್ತು ಎನ್‌ಸಿಎ ಮುಖ್ಯಸ್ಥರ ನಡುವೆ ಸುಗಮ ಸಮನ್ವಯವನ್ನು ಬಿಸಿಸಿಐ ಬಯಸುತ್ತದೆ. ಯುವ ಆಟಗಾರರನ್ನು ತಯಾರು ಮಾಡುವ ಜವಾಬ್ದಾರಿ ಲಕ್ಷ್ಮಣ್ ಅವರ ಮೇಲಿದೆ. ಲಕ್ಷ್ಮಣ್ ಈಗ ಭಾರತದ ಅಂಡರ್-19 ಮತ್ತು ‘ಎ’ ತಂಡಗಳಿಗೆ ಆಟಗಾರರನ್ನು ಸಜ್ಜುಗೊಳಿಸಲಿದ್ದಾರೆ.

47ರ ಹರೆಯದ ಲಕ್ಷ್ಮಣ್ ಐಪಿಎಲ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತೊರೆದ ನಂತರ ಹೆಚ್ಚಿನ ಜವಾಬ್ದಾರಿಗಳಿಂದ ದೂರವಾಗಬೇಕಾಗುತ್ತದೆ. ಯಾವುದೇ ತಂಡದ ಅಥವಾ ಯಾವುದೇ ಸಂಘ ಸಂಸ್ಥೆಯ ಭಾಗವಾಗಲು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲ ಯಾವುದೇ ಪತ್ರಿಕೆಗೂ ಅಂಕಣ ಬರೆಯುವಂತಿಲ್ಲ. ಇದಲ್ಲದೆ, ಯಾವುದೇ ಖಾಸಗಿ ಟಿವಿ ಚಾನೆಲ್‌ನಲ್ಲಿ ಕಾಣಿಸಿಕೊಳ್ಳಬಾರದು. ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಲಕ್ಷ್ಮಣ್ ಕಾಮೆಂಟೇಟರ್ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಎನ್​ಸಿಎ ಮುಖ್ಯಸ್ಥರಾದ ಬಳಿಕ ಯಾವುದೇ ಚಾನೆಲ್​ ಚರ್ಚೆ ಅಥವಾ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳಬಾರದು.

ಕ್ರಿಕೆಟ್ ಅಂಗಳದ ‘ವೆರಿ ವೆರಿ ಸ್ಪೆಷಲ್’ ಬ್ಯಾಟರ್​ ಎಂದು ಕರೆಯಲ್ಪಡುವ ಲಕ್ಷ್ಮಣ್ ತಮ್ಮ ವೃತ್ತಿಜೀವನದಲ್ಲಿ 134 ಟೆಸ್ಟ್ ಮತ್ತು 86 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್​​ನಲ್ಲಿ 17 ಶತಕ ಮತ್ತು 56 ಅರ್ಧ ಶತಕಗಳೊಂದಿಗೆ ಒಟ್ಟು 8781 ರನ್ ಗಳಿಸಿದ್ದಾರೆ. ಇದಲ್ಲದೇ ಏಕದಿನದಲ್ಲಿ 6 ಶತಕ ಹಾಗೂ 10 ಅರ್ಧ ಶತಕ ಸಿಡಿಸಿ ಒಟ್ಟು 2338 ರನ್ ಗಳಿಸಿದ್ದಾರೆ. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 55 ಶತಕಗಳನ್ನು ಒಳಗೊಂಡಂತೆ 19730 ರನ್‌ಗಳನ್ನು ಕಲೆಹಾಕಿದ್ದಾರೆ. ಇದೀಗ ಯುವ ಕ್ರಿಕೆಟಿಗರನ್ನು ಸಜ್ಜುಗೊಳಿಸುವಂತಹ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ಮುಂದಿನ ಮುಖ್ಯಸ್ಥರಾಗಿ ವಿವಿಎಸ್​ ಲಕ್ಷ್ಮಣ್ ಹೊಸ ಇನಿಂಗ್ಸ್​ ಆರಂಭಿಸಲಿದ್ದಾರೆ.

ಇದನ್ನೂ ಓದಿ: Explained: ನ್ಯೂಜಿಲೆಂಡ್-ಆಸ್ಟ್ರೇಲಿಯಾ ಮತ್ತೊಂದು ಭಾರತ-ಪಾಕಿಸ್ತಾನ್…ಆದರೆ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

(VVS Laxman will be next NCA head, confirms BCCI official)

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್