IND VS ENG: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ದ್ರಾವಿಡ್ ಬದಲಿಗೆ ಲಕ್ಷ್ಮಣ್​ಗೆ ಕೋಚ್ ಜವಾಬ್ದಾರಿ; ಕಾರಣವೇನು?

IND VS ENG: ಟೀಂ ಇಂಡಿಯಾದ ಕಮಾಂಡ್ ರೋಹಿತ್ ಶರ್ಮಾ ಕೈಯಲ್ಲಿರಲಿದ್ದು, ರಾಹುಲ್ ದ್ರಾವಿಡ್ ಬದಲಿಗೆ ಐರ್ಲೆಂಡ್‌ನಲ್ಲಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿದ್ದ ವಿವಿಎಸ್ ಲಕ್ಷ್ಮಣ್ ಅವರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

IND VS ENG: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ದ್ರಾವಿಡ್ ಬದಲಿಗೆ ಲಕ್ಷ್ಮಣ್​ಗೆ ಕೋಚ್ ಜವಾಬ್ದಾರಿ; ಕಾರಣವೇನು?
ಟೀಂ ಇಂಡಿಯಾ
TV9kannada Web Team

| Edited By: pruthvi Shankar

Jul 04, 2022 | 3:00 PM

ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್ ನಂತರ, ಟೀಮ್ ಇಂಡಿಯಾ ಜುಲೈ 7 ರಿಂದ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ T20 ಸರಣಿಯನ್ನು (India vs England T20 Series) ಆಡಬೇಕಾಗಿದೆ. ಈ ಸರಣಿಗೂ ಮುನ್ನವೇ ದೊಡ್ಡ ಸುದ್ದಿಯೊಂದು ಹೊರಬೀಳುತ್ತಿದೆ. ಸುದ್ದಿ ಪ್ರಕಾರ ರಾಹುಲ್ ದ್ರಾವಿಡ್ ಮೊದಲ ಟಿ20ಯಲ್ಲಿ ತಂಡದ ಮುಖ್ಯ ಕೋಚ್ ಆಗಿರುವುದಿಲ್ಲ. ಮೊದಲ ಟಿ20ಯಲ್ಲಿ ರಾಹುಲ್ ದ್ರಾವಿಡ್ (Rahul Dravid) ಬದಲಿಗೆ ವಿವಿಎಸ್ ಲಕ್ಷ್ಮಣ್ (VVS Laxman) ಟೀಂ ಇಂಡಿಯಾದ ಕೋಚ್ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ . ವಾಸ್ತವವಾಗಿ ರಾಹುಲ್ ದ್ರಾವಿಡ್ ಜುಲೈ 5 ರವರೆಗೆ ಎಡ್ಜ್‌ಬಾಸ್ಟನ್‌ನಲ್ಲಿ ಟೆಸ್ಟ್ ಸರಣಿಯನ್ನು ಆಡಲಿದ್ದಾರೆ. ಎರಡು ದಿನಗಳ ನಂತರ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ (Virat Kohli, Jasprit Bumrah, Rishabh Pant) ಅವರಂತಹ ಆಟಗಾರರು ಆಡದ ಟಿ 20 ಸರಣಿಯು ಪ್ರಾರಂಭವಾಗುತ್ತಿದೆ.

ಟೀಂ ಇಂಡಿಯಾದ ಕಮಾಂಡ್ ರೋಹಿತ್ ಶರ್ಮಾ ಕೈಯಲ್ಲಿರಲಿದ್ದು, ರಾಹುಲ್ ದ್ರಾವಿಡ್ ಬದಲಿಗೆ ಐರ್ಲೆಂಡ್‌ನಲ್ಲಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿದ್ದ ವಿವಿಎಸ್ ಲಕ್ಷ್ಮಣ್ ಅವರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಲಕ್ಷ್ಮಣ್ ನಾಯಕತ್ವದಲ್ಲಿ ಟೀಂ ಇಂಡಿಯಾ ಐರ್ಲೆಂಡ್ ತಂಡವನ್ನು 2-0 ಅಂತರದಿಂದ ಸೋಲಿಸಿತ್ತು.

ಇದನ್ನೂ ಓದಿ: IND vs ENG: ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡ ಪ್ರಕಟ; ಕೊಹ್ಲಿಗೆ ಕೋಕ್..!

ಜುಲೈ 7 ರಿಂದ ಸೀಮಿತ ಓವರ್ ಸರಣಿ ಪ್ರಾರಂಭ

ಜುಲೈ 7 ರಂದು ಸೌತಾಂಪ್ಟನ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯವನ್ನು ಆಡಲಿದೆ. ಇದಾದ ಬಳಿಕ ಜುಲೈ 9ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ಪಂದ್ಯ ನಡೆಯಲಿದೆ. ಮೂರನೇ ಟಿ20 ಜುಲೈ 10 ರಂದು ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ. ODI ಸರಣಿಯ ಮೊದಲ ಪಂದ್ಯ ಜುಲೈ 12 ರಂದು ಓವಲ್‌ನಲ್ಲಿ ನಡೆಯಲಿದೆ. ಎರಡನೇ ಏಕದಿನ ಪಂದ್ಯ ಜುಲೈ 14 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಮೂರನೇ ಏಕದಿನ ಪಂದ್ಯವು ಜುಲೈ 17 ರಂದು ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ.

ಇಂಗ್ಲೆಂಡ್ ವಿರುದ್ಧದ ಮೊದಲನೇ ಟಿ20ಗೆ ಪಂದ್ಯ- ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವೇಶ್ವರಿ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ಇದನ್ನೂ ಓದಿ

ಇಂಗ್ಲೆಂಡ್ ವಿರುದ್ಧದ ಎರಡನೇ, ಮೂರನೇ ಟಿ20ಗೆ ಭಾರತ ತಂಡ – ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರಿತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್ ಮತ್ತು ಉಮ್ರಾನ್ ಮಲಿಕ್.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada