AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

2026ರ ಏಷ್ಯನ್ ಗೇಮ್ಸ್ ಕ್ರಿಕೆಟ್ ಪಂದ್ಯಾವಳಿಗಳು ಸೆಪ್ಟೆಂಬರ್ 17 ರಿಂದ ಶುರುವಾಗಲಿದೆ. ಜಪಾನ್‌ನ ಐಚಿ ಪ್ರಿಫೆಕ್ಚರ್‌ನ ಕೋರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ನೇರವಾಗಿ ಕ್ವಾರ್ಟರ್ ಫೈನಲ್​ಗೆ ಪ್ರವೇಶಿಸಿದ್ದು, ಅದರಂತೆ ಸೆಪ್ಟೆಂಬರ್ 28 ರಂದು ಅಭಿಯಾನ ಆರಂಭಿಸಲಿದೆ. 

ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ
ವಿವಿಎಸ್ ಲಕ್ಷ್ಮಣ್ - ಗೌತಮ್ ಗಂಭೀರ್Image Credit source: BCCI
ಝಾಹಿರ್ ಯೂಸುಫ್
|

Updated on: Sep 03, 2026 | 10:47 AM

Share

2026ರ ಏಷ್ಯನ್ ಗೇಮ್ಸ್ ಪಂದ್ಯಾವಳಿಯಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ವಿ.ವಿ.ಎಸ್. ಲಕ್ಷ್ಮಣ್ ಕಾರ್ಯನಿರ್ವಹಿಸಲಿದ್ದಾರೆ. ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಕ್ರೀಡಾಕೂಟಕ್ಕೆ ಭಾರತೀಯ ಕ್ರೀಡಾ ಸಚಿವಾಲಯವು ಅಧಿಕೃತ ಅನುಮೋದನೆ ನೀಡಿದ್ದು, ಅದರಂತೆ ಲಕ್ಷ್ಮಣ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಏಷ್ಯನ್ ಗೇಮ್ಸ್​ಗಾಗಿ ತೆರಳಲಿದೆ.

ಭಾರತೀಯ ಹಿರಿಯ ಕ್ರಿಕೆಟ್ ತಂಡದ ನಿಯಮಿತ ಮುಖ್ಯ ಕೋಚ್ ಆಗಿರುವ ಗೌತಮ್ ಗಂಭೀರ್ ಅವರು ಇದೇ ಅವಧಿಯಲ್ಲಿ ತಾಯ್ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಯಲ್ಲಿ ನಿರತರಾಗಿರಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಸ್ಪ್ಲಿಟ್​ ಕೋಚಿಂಗ್ ಮಾದರಿಯನ್ನು ಅನುಸರಿಸಿದ್ದು, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (NCA) ಮುಖ್ಯಸ್ಥರಾಗಿರುವ ವಿ.ವಿ.ಎಸ್. ಲಕ್ಷ್ಮಣ್ ಅವರಿಗೆ ಏಷ್ಯನ್ ಗೇಮ್ಸ್‌ನ ಜವಾಬ್ದಾರಿಯನ್ನು ವಹಿಸಿದೆ.

  • ವೆಸ್ಟ್ ಇಂಡೀಸ್ ಸರಣಿಗೆ ಗೌತಮ್ ಗಂಭೀರ್ ಕೋಚ್
  • ಏಷ್ಯನ್ ಗೇಮ್ಸ್​ಗೆ ವಿವಿಎಸ್​ ಲಕ್ಷ್ಮಣ್ ಕೋಚ್

ವಿ.ವಿ.ಎಸ್. ಲಕ್ಷ್ಮಣ್ ಅವರೊಂದಿಗೆ ಮಾಜಿ ಕ್ರಿಕೆಟಿಗರುಗಳಾದ ಹೃಷಿಕೇಶ್ ಕಾನಿಟ್ಕರ್ (ಬ್ಯಾಟಿಂಗ್ ಕೋಚ್) ಹಾಗೂ ಸುನಿಲ್ ಜೋಶಿ (ಬೌಲಿಂಗ್ ಕೋಚ್) ಅವರನ್ನು ಸಹಾಯಕ ಸಿಬ್ಬಂದಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಚಿನ್ನದ ಪದಕದ ಗುರಿ:

ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡವು ಬಲಿಷ್ಠ ಆಟಗಾರರನ್ನು ಒಳಗೊಂಡಿದೆ. ತಂಡದಲ್ಲಿ ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್ ಮತ್ತು ಸಂಜು ಸ್ಯಾಮ್ಸನ್ ಅವರಂತಹ ಅನುಭವಿಗಳ ಜೊತೆಗೆ ಯುವ ಆಟಗಾರರಾದ ಅಭಿಷೇಕ್ ಶರ್ಮಾ ಹಾಗೂ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ.

ಕಳೆದ ಬಾರಿ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ತಂಡವು ಚಿನ್ನದ ಪದಕ ಮುಡಿಗೇರಿಸಿಕೊಂಡಿತ್ತು. ಈ ಬಾರಿಯೂ ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿರುವ ಟೀಮ್ ಇಂಡಿಯಾ ನೇರವಾಗಿ ಕ್ವಾರ್ಟರ್ ಫೈನಲ್ ಹಂತಕ್ಕೆ ಅರ್ಹತೆ ಪಡೆದಿದ್ದು, ವಿ.ವಿ.ಎಸ್. ಲಕ್ಷ್ಮಣ್ ಅವರ ಮಾರ್ಗದರ್ಶನದಲ್ಲಿ ಮತ್ತೊಮ್ಮೆ ಚಿನ್ನದ ಪದಕವನ್ನು ತನ್ನದಾಗಿಸಿಕೊಳ್ಳುವ ಬಲವಾದ ವಿಶ್ವಾಸದಲ್ಲಿದೆ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ಹೊಸ ಇತಿಹಾಸ ಬರೆದ ಚಾಮರಿ!

ಏಷ್ಯನ್ ಗೇಮ್ಸ್​​ಗೆ ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.

Follow Us