IND vs SL: ಭಾರತದ ವಿರುದ್ಧದ ಸರಣಿಯಿಂದ ವನಿಂದು ಹಸರಂಗ ಔಟ್

India vs Sri Lanka: ಭಾರತ ಮತ್ತು ಶ್ರೀಲಂಕಾ ನಡುವಣ ಮೊದಲ ಏಕದಿನ ಪಂದ್ಯವು ಟೈ ಆಗಿದೆ. ಇದೀಗ ಉಭಯ ತಂಡಗಳು 2ನೇ ಏಕದಿನ ಪಂದ್ಯಕ್ಕಾಗಿ ಸಜ್ಜಾಗಿದೆ. ಭಾನುವಾರ ಕೊಲಂಬೊದ ಆರ್​ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯಲ್ಲಿ ಮುನ್ನಡೆ ಸಾಧಿಸುವ ವಿಶ್ವಾಸದಲ್ಲಿದೆ.

IND vs SL: ಭಾರತದ ವಿರುದ್ಧದ ಸರಣಿಯಿಂದ ವನಿಂದು ಹಸರಂಗ ಔಟ್
Wanindu Hasaranga
Follow us
ಝಾಹಿರ್ ಯೂಸುಫ್
|

Updated on:Aug 04, 2024 | 9:14 AM

ಭಾರತದ ವಿರುದ್ಧದ ಏಕದಿನ ಸರಣಿಯಿಂದ ಶ್ರೀಲಂಕಾ ತಂಡದ ಆಲ್​ರೌಂಡರ್ ವನಿಂದು ಹಸರಂಗ ಹೊರಬಿದ್ದಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಹಸರಂಗ ಇದೀಗ ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಉಳಿದೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಹಸರಂಗ 24 ರನ್​ಗಳ ಕೊಡುಗೆ ನೀಡಿದ್ದರು. ಹಾಗೆಯೇ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಗಾಯದ ಕಾರಣ ಎರಡನೇ ಮತ್ತು ಮೂರನೇ ಏಕದಿನ ಪಂದ್ಯಗಳಿಂದ ಹಸರಂಗ ಹೊರಗುಳಿಯಲು ನಿರ್ಧರಿಸಿದ್ದಾರೆ. ಇನ್ನು ಹಸರಂಗ ಅವರ ಬದಲಿಯಾಗಿ ಜೆಫ್ರಿ ವಾಂಡರ್ಸೆ ತಂಡಕ್ಕೆ ಆಯ್ಕೆಯಾಗಿದ್ದಾರೆ.

5 ಆಟಗಾರರು ಅಲಭ್ಯ:

ಭಾರತದ ವಿರುದ್ಧದ ಏಕದಿನ ಸರಣಿಯಿಂದ ಈವರೆಗೆ ಒಟ್ಟು 5 ಆಟಗಾರರು ಹೊರಗುಳಿದಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ದಿಲ್ಶಾನ್ ಮಧುಶಂಕ ಈ ಸರಣಿಯಿಂದ ಹೊರಗುಳಿದಿದ್ದರು. ಇದರ ಬೆನ್ನಲ್ಲೇ ಭುಜದ ನೋವಿನ ಕಾರಣ ಮಥೀಶ ಪತಿರಾಣ ಕೂಡ ಏಕದಿನ ಸರಣಿಯಿಂದ ಹಿಂದೆ ಸರಿದಿದ್ದರು.

ಇದಕ್ಕೂ ಮುನ್ನ ಉಸಿರಾಟದ ಸೋಂಕಿನ ಕಾರಣ ದುಷ್ಮಂತ ಚಮೀರ ಹೊರಗುಳಿದರೆ, ನುವಾನ್ ತುಷಾರ ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಇದೀಗ ವನಿಂದು ಹಸರಂಗ ಕೂಡ ಗಾಯದ ಕಾರಣ ಕೊನೆಯ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ (ನಾಯಕ), ಜನಿತ್ ಲಿಯಾನಗೆ, ದುನಿತ್ ವೆಲ್ಲಲಾಗೆ, ಅಕಿಲ ದನಂಜಯ, ಮೊಹಮ್ಮದ್ ಶಿರಾಝ್, ಅಸಿತ ಫೆರ್ನಾಂಡೋ, ಜೆಫ್ರಿ ವಾಂಡರ್ಸೆ, ಚಮಿಕ ಕರುಣಾರತ್ನೆ, ಕಮಿಂದು ಮೆಂಡಿಸ್, ನಿಶಾನ್ ಮದುಷ್ಕ, ಮಹೀಶ್ ತೀಕ್ಷಣ, ಈಶಾನ್ ಮಾಲಿಂಗ.

ಇದನ್ನೂ ಓದಿ: IPL 2025: RCB ತಂಡದಿಂದ ಗ್ಲೆನ್ ಮ್ಯಾಕ್ಸ್​ವೆಲ್ ಔಟ್?

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್ , ಖಲೀಲ್ ಅಹ್ಮದ್, ಹರ್ಷಿತ್ ರಾಣ.

Published On - 9:00 am, Sun, 4 August 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ