3 ಭರ್ಜರಿ ಸಿಕ್ಸ್​, 5 ಫೋರ್​: ಸ್ಪೋಟಕ ಅರ್ಧಶತಕ ಸಿಡಿಸಿದ ಹಸರಂಗ

Wanindu Hasaranga : ಈ ಪಂದ್ಯದಲ್ಲಿ ಟಾಸ್ ಗೆದ್ದ ಬಿ-ಲವ್ ಕ್ಯಾಂಡಿ ತಂಡದ ನಾಯನ ವನಿಂದು ಹಸರಂಗ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಆಲ್​ರೌಂಡರ್ ಪ್ರದರ್ಶನ ನೀಡ ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

3 ಭರ್ಜರಿ ಸಿಕ್ಸ್​, 5 ಫೋರ್​: ಸ್ಪೋಟಕ ಅರ್ಧಶತಕ ಸಿಡಿಸಿದ ಹಸರಂಗ
Wanindu Hasaranga
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 06, 2023 | 3:01 PM

Lanka Premier League 2023: ಶ್ರೀಲಂಕಾದಲ್ಲಿ ನಡೆಯುತ್ತಿರುವ ಲಂಕಾ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ವನಿಂದು ಹಸರಂಗ (Wanindu Hasaranga)  ಭರ್ಜರಿ ಪ್ರದರ್ಶನ ನೀಡಿದ್ದಾರೆ. ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಜಾಫ್ನಾ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಿ-ಲವ್ ಕ್ಯಾಂಡಿ ತಂಡದ ನಾಯಕ ವನಿಂದು ಹಸರಂಗ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಜಾಫ್ನಾ ಕಿಂಗ್ಸ್​ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ರಹಮಾನುಲ್ಲಾ ಗುರ್ಬಾಝ್ (0) ಹಾಗೂ ಅಸಲಂಕಾ (5) ಬೇಗನೆ ವಿಕೆಟ್ ಒಪ್ಪಿಸಿದರು.

ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತೌಹಿದ್ ಹೃದಯ್ 19 ರನ್​ಗಳಿಸಿದರೆ, ಡೇವಿಡ್ ಮಿಲ್ಲರ್ 21 ರನ್​ ಬಾರಿಸಿದರು. ಹಾಗೆಯೇ ಪ್ರಿಯಾಮಲ್ ಪೆರೆರಾ 22 ರನ್​ಗಳ ಕೊಡುಗೆ ನೀಡಿದರು. ಹಾಗೆಯೇ ಕೊನೆಯ ಓವರ್​ಗಳ ವೇಳೆ ಅಬ್ಬರಿಸಿದ ದುನಿತ್ ವೆಲ್ಲಲಾಗೆ 27 ಎಸೆತಗಳಲ್ಲಿ ಅಜೇಯ 38 ರನ್ ಬಾರಿಸಿದರು. ಇದರೊಂದಿಗೆ ಜಾಫ್ನಾ ಕಿಂಗ್ಸ್ ತಂಡದ ಮೊತ್ತ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 117 ಬಂದು ನಿಂತಿತು.

ಬಿ-ಲವ್ ಕ್ಯಾಂಡಿ ಪರ 4 ಓವರ್​ ಎಸೆದು ಕೇವಲ 9 ರನ್​ ನೀಡಿ ವನಿಂದು ಹಸರಂಗ 3 ವಿಕೆಟ್ ಕಬಳಿಸಿದರು. ಹಾಗೆಯೇ ಎನ್​ ಪ್ರದೀಪ್ 3 ವಿಕೆಟ್ ಪಡೆದರೆ, ಮ್ಯಾಥ್ಯೂಸ್ 2 ವಿಕೆಟ್ ಉರುಳಿಸಿದರು.

ಇನ್ನು 118 ರನ್​ಗಳ ಸುಲಭ ಗುರಿ ಪಡೆದ ಬಿ-ಲವ್ ಕ್ಯಾಂಡಿ ಪರ ಫಖರ್ ಝಮಾನ್ (42) ಹಾಗೂ ದಿನೇಶ್ ಚಂಡಿಮಲ್ (22) ಉತ್ತಮ ಆರಂಭ ಒದಗಿಸಿದ್ದರು.

ಹಾಗೆಯೇ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ವನಿಂದು ಹಸರಂಗ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದರು. ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಹಸರಂಗ ಸಿಕ್ಸ್-ಫೋರ್​ಗಳ ಸುರಿಮಳೆಗೈದರು. ಅಲ್ಲದೆ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಕೇವಲ 22 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 52 ರನ್ ಬಾರಿಸುವ ಮೂಲಕ ವನಿಂದು ಹಸರಂಗ 13 ಓವರ್​ಗಳಲ್ಲಿ ತಂಡವನ್ನು ಗುರಿಮುಟ್ಟಿಸಿದರು. ಈ ಮೂಲಕ ಬಿ-ಲವ್ ಕ್ಯಾಂಡಿ ತಂಡವು 8 ವಿಕೆಟ್​ಗಳ ಅಮೋಘ ಗೆಲುವು ತನ್ನದಾಗಿಸಿಕೊಂಡಿತು.

ಬಿ-ಲವ್ ಕ್ಯಾಂಡಿ ಪ್ಲೇಯಿಂಗ್ 11: ಫಖರ್ ಝಮಾನ್ , ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್) , ಕಮಿಂದು ಮೆಂಡಿಸ್ , ಏಂಜೆಲೊ ಮ್ಯಾಥ್ಯೂಸ್ , ಸಹನ್ ಅರಾಚ್ಚಿಗೆ , ವನಿಂದು ಹಸರಂಗ (ನಾಯಕ) , ಆಸಿಫ್ ಅಲಿ , ನುವಾನ್ ಪ್ರದೀಪ್ , ಇಸುರು ಉದಾನ , ಮುಜೀಬ್ ಉರ್ ರೆಹಮಾನ್ , ದುಷ್ಮಂತ ಚಮೀರಾ.

ಇದನ್ನೂ ಓದಿ: Tilak Varma: ದಾಖಲೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸಿದ ತಿಲಕ್ ವರ್ಮಾ

ಜಾಫ್ನಾ ಕಿಂಗ್ಸ್​ ಪ್ಲೇಯಿಂಗ್ 11: ರಹಮಾನುಲ್ಲಾ ಗುರ್ಬಾಝ್​ (ವಿಕೆಟ್ ಕೀಪರ್) , ಚರಿತ್ ಅಸಲಂಕಾ , ತೌಹಿದ್ ಹೃದಯ್ , ಪ್ರಿಯಾಮಲ್ ಪೆರೇರಾ , ಡೇವಿಡ್ ಮಿಲ್ಲರ್ , ತಿಸಾರ ಪೆರೇರಾ (ನಾಯಕ) , ದುನಿತ್ ವೆಲ್ಲಲಾಗೆ , ಮಹೇಶ್ ತೀಕ್ಷಣ , ನಾಂದ್ರೆ ಬರ್ಗರ್ , ವಿಜಯಕಾಂತ್ ವ್ಯಾಸಕಾಂತ್ , ನುವಾನ್ ತುಷಾರ.

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!