Wanindu Hasaranga: ಕಂಬ್ಯಾಕ್ ಬೆನ್ನಲ್ಲೇ ಅಮಾನತುಗೊಂಡ ವನಿಂದು ಹಸರಂಗ

Wanindu Hasaranga: ಶ್ರೀಲಂಕಾ ಪರ 48 ಏಕದಿನ ಪಂದ್ಯಗಳನ್ನಾಡಿರುವ 67 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 58 ಟಿ20 ಪಂದ್ಯಗಳಿಂದ 91 ವಿಕೆಟ್ ಪಡೆದು ಮಿಂಚಿದ್ದಾರೆ.’ಇತ್ತ ಸೀಮಿತ ಓವರ್ ಕ್ರಿಕೆಟ್​ನತ್ತ ಗಮನ ಕೇಂದ್ರೀಕರಿಸಲು ಮುಂದಾಗಿದ್ದ ವನಿಂದು ಹಸರಂಗ ಇದೀಗ ಟೆಸ್ಟ್ ಕ್ರಿಕೆಟ್​ಗೆ ಕಂಬ್ಯಾಕ್ ಮಾಡಲು ಸಜ್ಜಾಗಿ ನಿಂತಿದ್ದಾರೆ.

Wanindu Hasaranga: ಕಂಬ್ಯಾಕ್ ಬೆನ್ನಲ್ಲೇ ಅಮಾನತುಗೊಂಡ ವನಿಂದು ಹಸರಂಗ
Wanindu Hasaranga
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 20, 2024 | 2:04 PM

ಆಗಸ್ಟ್, 2023 ರಲ್ಲಿ ಟೆಸ್ಟ್ ಕ್ರಿಕೆ್​ಗೆ ವಿದಾಯ ಹೇಳಿದ್ದ ಶ್ರೀಲಂಕಾ ತಂಡದ ಆಲ್​ರೌಂಡರ್ ವನಿಂದು ಹಸರಂಗ (Wanindu Hasaranga) ಇದೀಗ ಯೂಟರ್ನ್​ ಹೊಡೆದಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಹಸರಂಗ ಕಂಬ್ಯಾಕ್ ಮಾಡಲು ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಐಸಿಸಿ ಕಡೆಯಿಂದ ಅಮಾನತುಗೊಂಡಿದ್ದಾರೆ. ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಮೊದಲ ಪಂದ್ಯ ಮಾರ್ಚ್ 22 ರಂದು ಸಿಲ್ಹೆಟ್‌ನಲ್ಲಿರುವ ಸಿಲ್ಹೆಟ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಈ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಮರಳಲು ಸಿದ್ದರಾಗಿದ್ದ ಹಸರಂಗಗೆ ಇದೀಗ ಐಸಿಸಿ ಬಿಗ್ ಶಾಕ್ ನೀಡಿದೆ.

ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಹಸರಂಗ ಮೈದಾನದಲ್ಲೇ ಅಸಮಾಧಾನ ಹೊರಹಾಕಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಮ್ಯಾಚ್ ರೆಫರಿ, ವನಿಂದು ಹಸರಂಗ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ವನಿಂದು ಹಸರಂಗ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.8 ಅನ್ನು ಅವರು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ಪಂದ್ಯದ ಶುಲ್ಕದ 50% ದಂಡ ವಿಧಿಸಲಾಗಿದೆ. ಹಾಗೆಯೇ ಮೂರು ಡಿಮೆರಿಟ್ ಅಂಕಗಳನ್ನು ನೀಡಲಾಗಿದೆ.

ಇದಕ್ಕೂ ಮುನ್ನ ದಂಬುಲ್ಲಾದಲ್ಲಿ ನಡೆದ ಅಫ್ಘಾನಿಸ್ತಾನ್​ ವಿರುದ್ಧದ ಟಿ20 ಸರಣಿಯಲ್ಲಿ ಮತ್ತು ಬಾಂಗ್ಲಾ ವಿರುದ್ಧದ ಟಿ20 ಸರಣಿಗಳಲ್ಲಿ ಐಸಿಸಿ ನಿಯಮ ಉಲ್ಲಂಘಿಸಿದ್ದಕ್ಕಾಗಿ 5 ಡಿಮೆರಿಟ್ ಅಂಕಗಳನ್ನು ನೀಡಲಾಗಿತ್ತು. ಅದರಂತೆ ಇದೀಗ ಅವರ ಡಿಮೆರಿಟ್ ಅಂಕಗಳ ಸಂಖ್ಯೆ ಗರಿಷ್ಠತೆಯನ್ನು ಮೀರಿದ್ದು, ಹೀಗಾಗಿ ಹಸರಂಗ ಅವರ ಮೇಲೆ 2 ಟೆಸ್ಟ್ ಪಂದ್ಯಗಳ ನಿಷೇಧ ಹೇರಲಾಗಿದೆ.

ಐಸಿಸಿ ನಿಯಮದಂತೆ 8 ಡಿಮೆರಿಟ್ ಅಂಕ ಪಡೆದ ಆಟಗಾರರಿಗೆ 4 ಏಕದಿನ ಅಥವಾ 4 ಟಿ20 ಅಥವಾ 2 ಟೆಸ್ಟ್ ಪಂದ್ಯಗಳಲ್ಲಿ ನಿಷೇಧ ಹೇರಲಾಗುತ್ತದೆ. ಅದರಂತೆ ಇದೀಗ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಿಂದ ವನಿಂದು ಹಸರಂಗ ಹೊರಬಿದ್ದಿದ್ದಾರೆ.

ಇದನ್ನೂ ಓದಿ: Wanindu Hasaranga: ಲಸಿತ್ ಮಾಲಿಂಗ ದಾಖಲೆ ಮುರಿದ ವನಿಂದು ಹಸರಂಗ

ಅಂದಹಾಗೆ ವನಿಂದು ಹಸರಂಗ ಶ್ರೀಲಂಕಾ ಪರ ಇದುವರೆಗೆ ಕೇವಲ 4 ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ ವೇಳೆ ಕೇವಲ 4 ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದ್ದರು. ಇನ್ನು 2021 ರ ಬಳಿಕ ಅವರು ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಕಂಬ್ಯಾಕ್ ಮಾಡಲು ಸಜ್ಜಾದ ಆಟಗಾರ ಅಮಾನತಿನ ಶಿಕ್ಷೆಗೊಳಗಾಗಿರುವುದು ವಿಪರ್ಯಾಸ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ