T20 Blast: ಒಟ್ಟು ಮೊತ್ತ 424 ರನ್​: ಟಿ20 ಕ್ರಿಕೆಟ್​ನ ರಣರೋಚಕ ಪಂದ್ಯದಲ್ಲಿ ಗೆದ್ದಿದ್ಯಾರು?

T20 Blast: ಬೃಹತ್ ಮೊತ್ತ ಕಲೆಹಾಕಿದ್ದ ಕಾರಣ ಗೆಲುವು ನಾರ್ಥಾಂಪ್ಟನ್‌ಶೈರ್ ತಂಡದ್ದೇ ಎಂದು ಅಭಿಮಾನಿಗಳು ಭಾವಿಸಿದ್ದರು. ಆದರೆ ಬೃಹತ್ ಗುರಿಯನ್ನು ಬೆನ್ನತ್ತುವ ಆತ್ಮವಿಶ್ವಾಸದಿಂದಲೇ ವಾರ್ವಿಕ್‌ಷೈರ್ ಕೂಡ ಕಣಕ್ಕಿಳಿಯಿತು.

T20 Blast: ಒಟ್ಟು ಮೊತ್ತ 424 ರನ್​: ಟಿ20 ಕ್ರಿಕೆಟ್​ನ ರಣರೋಚಕ ಪಂದ್ಯದಲ್ಲಿ ಗೆದ್ದಿದ್ಯಾರು?
Northamptonshire vs Warwickshire
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 23, 2022 | 1:08 PM

ಇಂಗ್ಲೆಂಡ್ ತಂಡವು ಇತ್ತೀಚೆಗೆ 50 ಓವರ್​ಗಳಲ್ಲಿ 498 ರನ್‌ ಬಾರಿಸಿ ಏಕದಿನ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿತ್ತು. ಆದರೆ ಈ ಬ್ಯಾಟಿಂಗ್ ಅಬ್ಬರ ಏನೂ ಅಲ್ಲ ಎಂಬಂತಹ ಮತ್ತೊಂದು ಇನಿಂಗ್ಸ್​ ಮೂಡಿಬಂದಿದೆ. ಅದು ಕೂಡ ಟಿ20 ಕ್ರಿಕೆಟ್​ನಲ್ಲಿ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ ಕೇವಲ 38.5 ಓವರ್​ಗಳಲ್ಲಿ ಮೂಡಿಬಂದ ಒಟ್ಟು ಸ್ಕೋರ್ ಬರೋಬ್ಬರಿ 424 ರನ್​ಗಳು. ಇಂತಹದೊಂದು ಸ್ಪೋಟಕ ಬ್ಯಾಟಿಂಗ್​ಗೆ ಸಾಕ್ಷಿಯಾಗಿದ್ದು ಇಂಗ್ಲೆಂಡ್​ನ ಟಿ20 ಬ್ಲಾಸ್ಟ್​ ಲೀಗ್. ಈ ಪಂದ್ಯದಲ್ಲಿ ನಾರ್ಥಾಂಪ್ಟನ್‌ಶೈರ್ ಮತ್ತು ವಾರ್ವಿಕ್‌ಷೈರ್ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ನಾರ್ಥಾಂಪ್ಟನ್‌ಶೈರ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಕ್ರಿಸ್ ಲಿನ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

ಲಿನ್ 59 ರನ್​ ಬಾರಿಸಿದರೆ, ಮತ್ತೊಂದೆಡೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೈಫ್ ಝೈಬ್ ಕೇವಲ 32 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 10 ಫೋರ್​ನೊಂದಿಗೆ 74 ರನ್​ ಸಿಡಿಸಿದರು. ಪರಿಣಾಮ ನಾರ್ಥಾಂಪ್ಟನ್‌ಶೈರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 211 ರನ್​ ಕಲೆಹಾಕಿತು. ಇತ್ತ ಬೃಹತ್ ಮೊತ್ತ ಕಲೆಹಾಕಿದ್ದ ಕಾರಣ ಗೆಲುವು ನಾರ್ಥಾಂಪ್ಟನ್‌ಶೈರ್ ತಂಡದ್ದೇ ಎಂದು ಅಭಿಮಾನಿಗಳು ಭಾವಿಸಿದ್ದರು. ಆದರೆ ಬೃಹತ್ ಗುರಿಯನ್ನು ಬೆನ್ನತ್ತುವ ಆತ್ಮವಿಶ್ವಾಸದಿಂದಲೇ ವಾರ್ವಿಕ್‌ಷೈರ್ ಕೂಡ ಕಣಕ್ಕಿಳಿಯಿತು.

ವಾರ್ವಿಕ್‌ಷೈರ್ ತಂಡವು ಮೊದಲ 4 ಓವರ್​ಗಳಲ್ಲಿ 44 ರನ್​ ಬಾರಿಸಿದರೂ, 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಜೊತೆಯಾದ ಆ್ಯಡಂ ಹೋಸ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಅಲೆಕ್ಸ್​ ಡೇವಿಸ್ ತಂಡಕ್ಕೆ ಆಸರೆಯಾಗಿ ನಿಂತರು. ಈ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಅರ್ಧಶತಕದ ಜೊತೆಯಾಟವಾಡಿದರು. ಅಲ್ಲದೆ 10ನೇ ಓವರ್​ ಮುಕ್ತಾಯದ ವೇಳೆ ತಂಡದ ಮೊತ್ತವನ್ನು 110 ರನ್​ಗಳ ಗಡಿದಾಟಿಸಿದರು.

ಇದನ್ನೂ ಓದಿ
Image
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Image
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ಈ ಹಂತದಲ್ಲಿ 18 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 4 ಫೋರ್​ನೊಂದಿಗೆ 44 ರನ್ ಬಾರಿಸಿದ್ದ ಅಲೆಕ್ಸ್ ಡೇವಿಸ್ ಔಟಾದರು. ಬಳಿಕ ಬಂದ ಕ್ರಿಸ್ ಬೆಂಜಮಿನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆ್ಯಡಂ ಹೋಸ್ ಜೊತೆಗೂಡಿ ನಾರ್ಥಾಂಪ್ಟನ್‌ಶೈರ್ ಬೌಲರ್​ಗಳ ಬೆಂಡೆತ್ತಿದ ಬೆಂಜಮಿನ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು. ಪರಿಣಾಮ 18.5 ಓವರ್​ಗಳಲ್ಲಿ ವಾರ್ವಿಕ್‌ಷೈರ್ ತಂಡವು 213 ರನ್​ಗಳಿಸುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ವಾರ್ವಿಕ್‌ಷೈರ್ ಪರ ಆ್ಯಡಂ ಹೋಸ್ 44 ಎಸೆತಗಳಲ್ಲಿ 4 ಸಿಕ್ಸ್​ , 3 ಫೋರ್​ನೊಂದಿಗೆ ಅಜೇಯ 63 ರನ್ ಬಾರಿಸಿದರೆ, ಕ್ರಿಸ್ ಬೆಂಜಮಿನ್ ಕೇವಲ 31 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 4 ಫೋರ್ ಬಾರಿಸಿ ಅಜೇಯ 58 ರನ್​ ಸಿಡಿಸಿ ಗೆಲುವಿನ ರೂವಾರಿ ಎನಿಸಿಕೊಂಡರು. ವಿಶೇಷ ಎಂದರೆ ಈ ಪಂದ್ಯಗಳಲ್ಲಿ ಎರಡೂ ತಂಡಗಳಿಂದ ಮೂಡಿಬಂದ ಒಟ್ಟು ಸ್ಕೋರ್ 424 ರನ್​ಗಳು. ಅದು ಕೂಡ 38.5 ಓವರ್​ಗಳಲ್ಲಿ ಎಂಬುದು ವಿಶೇಷ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ