AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ರೆಕಾರ್ಡ್​ ಉಡೀಸ್: ವಿಶ್ವ ದಾಖಲೆಯ ಚೇಸಿಂಗ್!

ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸ ನಿರ್ಮಿಸಿದ್ದು ಸ್ಟೀವ್ ಸ್ಮಿತ್ ಮುಂದಾಳತ್ವದ ವಾಷಿಂಗ್ಟನ್ ಫ್ರೀಡಂ ತಂಡ. ಅದು ಕೂಡ ವಿಶ್ವ ದಾಖಲೆಯ ರನ್ ಚೇಸಿಂಗ್ ಮೂಲಕ. ಈ ದಾಖಲೆಯೊಂದಿಗೆ ವಾಷಿಂಗ್ಟನ್ ಫ್ರೀಡಂ ಟಿ20 ಕ್ರಿಕೆಟ್​ನಲ್ಲಿ ಹೊಸ ಭಾಷ್ಯ ಬರೆದಿದ್ದಾರೆ.

ಐಪಿಎಲ್ ರೆಕಾರ್ಡ್​ ಉಡೀಸ್: ವಿಶ್ವ ದಾಖಲೆಯ ಚೇಸಿಂಗ್!
Washington Freedom Image Credit source: MLC
ಝಾಹಿರ್ ಯೂಸುಫ್
|

Updated on:Jul 18, 2026 | 1:15 PM

Share

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್ ಚೇಸ್ ಮಾಡಿದ ತಂಡ ಯಾವುದು? ಈ ಪ್ರಶ್ನೆಗೆ ಹೊಸ ಉತ್ತರ ವಾಷಿಂಗ್ಟನ್ ಫ್ರೀಡಂ. ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ಬರೋಬ್ಬರಿ 267 ರನ್​ಗಳನ್ನು ಚೇಸ್ ಮಾಡಿ ಹೊಸ ಇತಿಹಾಸ ನಿರ್ಮಿಸಿದೆ.

ಒಕ್ಲಾಂಡ್​ನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್​ ಹಾಗೂ ವಾಷಿಂಗ್ಟನ್ ಫ್ರೀಡಂ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ವಾಷಿಂಗ್ಟನ್ ತಂಡದ ನಾಯಕ ಸ್ಟೀವ್ ಸ್ಮಿತ್ ಬೌಲಿಂಗ್ ಆಯ್ದುಕೊಂಡಿದ್ದರು.

ಪೂರನ್ ಸಿಡಿಲಬ್ಬರ:

ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ಪರ ನಾಯಕ ನಿಕೋಲಸ್ ಪೂರನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೂರನ್ ಮೈದಾನದ ಮೂಲೆ ಮೂಲೆಗೆ ಚೆಂಡನ್ನಟ್ಟಿದರು. ಪರಿಣಾಮ ಕೇವಲ 31 ಎಸೆತಗಳಲ್ಲಿ ಶತಕ ಮೂಡಿಬಂತು.

  • 31 ಎಸೆತಗಳಲ್ಲಿ ಶತಕ ಪೂರೈಸಿ ಮೇಜರ್​ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಪೂರನ್ ತಮ್ಮದಾಗಿಸಿಕೊಂಡರು.

ಈ ಪಂದ್ಯದಲ್ಲಿ 33 ಎಸೆತಗಳನ್ನು ಎದುರಿಸಿದ ನಿಕೋಲಸ್ ಪೂರನ್ 13 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 106 ರನ್​ ಚಚ್ಚಿದರು. ಈ ಸ್ಫೋಟಕ ಶತಕದ ನೆರವಿನೊಂದಿಗೆ ಎಂಐ ನ್ಯೂಯಾರ್ಕ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 266 ರನ್ ಕಲೆಹಾಕಿತು.

ವಿಶ್ವ ದಾಖಲೆಯ ಚೇಸಿಂಗ್:

267 ರನ್​ಗಳ ಗುರಿ ಪಡೆದ ವಾಷಿಂಗ್ಟನ್ ಫ್ರೀಡಂ ತಂಡಕ್ಕೆ ನಾಯಕ ಸ್ಟೀವ್ ಸ್ಮಿತ್ ಭರ್ಜರಿ ಆರಂಭ ಒದಗಿಸಿದ್ದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದ ಸ್ಮಿತ್ ಆ ಬಳಿಕ ಸಿಡಿಲಬ್ಬರ ಶುರು ಮಾಡಿದ್ದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಂಡ್ರಿಸ್ ಗೌಸ್ ವಿಸ್ಫೋಟಕ ಇನಿಂಗ್ಸ್ ಆಡಿದರು. ಪರಿಣಾಮ 16 ಓವರ್​ಗಳ ಮುಕ್ತಾಯದ ವೇಳೆಗೆ ವಾಷಿಂಗ್ಟನ್ ಫ್ರೀಡಂ ತಂಡದ ಸ್ಕೋರ್ 250ರ ಗಡಿದಾಟಿತು.

  • ಆಂಡ್ರಿಸ್ ಗೌಸ್: ಕೇವಲ 51 ಎಸೆತಗಳನ್ನು ಎದುರಿಸಿದ ಗೌಸ್ 12 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 132 ರನ್ ಚಚ್ಚಿದರು.
  • ಸ್ಟೀವ್ ಸ್ಮಿತ್: ನಾಯಕನ ಆಟವಾಡಿದ ಸ್ಮಿತ್ ಕೇವಲ 48 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 110 ರನ್ ಬಾರಿಸಿದರು.

ಈ ಇಬ್ಬರು ದಾಂಡಿಗರ ಶರವೇಗದ ಶತಕಗಳ ನೆರವಿನೊಂದಿಗೆ ವಾಷಿಂಗ್ಟನ್ ಫ್ರೀಡಂ ತಂಡವು 18.4 ಓವರ್​ಗಳಲ್ಲಿ 270 ರನ್ ಬಾರಿಸಿ 6 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ಐಪಿಎಲ್ ದಾಖಲೆ ಧೂಳೀಪಟ:

ಈ ಭರ್ಜರಿ ಚೇಸಿಂಗ್​ನೊಂದಿಗೆ ವಾಷಿಂಗ್ಟನ್ ಫ್ರೀಡಂ ತಂಡವು ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಐಪಿಎಲ್​ನಲ್ಲಿ ನಿರ್ಮಾಣವಾಗಿದ್ದ ವಿಶ್ವ ದಾಖಲೆಯ ಚೇಸಿಂಗ್ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್ ಚೇಸ್ ಮಾಡಿದ ವಿಶ್ವ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಹೆಸರಿನಲ್ಲಿತ್ತು. ಈ ದಾಖಲೆಯನ್ನು 18.4 ಓವರ್​ಗಳಲ್ಲಿ ವಾಷಿಂಗ್ಟನ್ ಫ್ರೀಡಂ ಪಡೆ ಉಡೀಸ್ ಮಾಡಿದ್ದಾರೆ.

  • ಪಂಜಾಬ್ ಕಿಂಗ್ಸ್: ಐಪಿಎಲ್ 2026 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ 265 ರನ್ ಚೇಸ್ ಮಾಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡ ವಿಶ್ವ ದಾಖಲೆ ನಿರ್ಮಿಸಿದ್ದರು.
  • ವಾಷಿಂಗ್ಟನ್ ಫ್ರೀಡಂ: ಎಂಐ ನ್ಯೂಯಾರ್ಕ್ ವಿರುದ್ಧ 267 ರನ್​ಗಳನ್ನು ಚೇಸ್ ಮಾಡಿ ವಾಷಿಂಗ್ಟನ್ ಫ್ರೀಡಂ ತಂಡವು ಇದೀಗ ಟಿ20 ಇತಿಹಾಸದಲ್ಲೇ ಅತ್ಯಧಿಕ ಮೊತ್ತವನ್ನು ಬೆನ್ನತ್ತಿ ಗೆದ್ದ ಹೊಸ ವಿಶ್ವ ದಾಖಲೆ ನಿರ್ಮಿಸಿದೆ.

ಇದನ್ನೂ ಓದಿ: ಭಾರತದ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ ರಾಬಿನ್ ಉತ್ತಪ್ಪ!

​ ಇನ್ನು ಈ ವಿಶ್ವ ದಾಖಲೆಯ ಗೆಲುವಿನೊಂದಿಗೆ ವಾಷಿಂಗ್ಟನ್ ಫ್ರೀಡಂ ತಂಡವು ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಚಾಲೆಂಜರ್ ಸುತ್ತಿಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಗೆದ್ದರೆ ಸ್ಟೀವ್ ಸ್ಮಿತ್ ಪಡೆ ಫೈನಲ್​ಗೇರಲಿದೆ.

Published On - 12:49 pm, Thu, 16 July 26

Follow Us
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡನ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡನ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ