India vs New Zealand 1st T20: ರಾಂಚಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಆಟಗಾರ ವಾಷಿಂಗ್ಟನ್ ಸುಂದರ್ (Washington Sundar Catch) ಅತ್ಯದ್ಭುತ ಕ್ಯಾಚ್ ಹಿಡಿದು ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ತಂಡಕ್ಕೆ ಡೆವೊನ್ ಕಾನ್ವೆ ಹಾಗೂ ಫಿನ್ ಅಲೆನ್ ಸ್ಪೋಟಕ ಆರಂಭ ಒದಗಿಸಿದ್ದರು. ಕೇವಲ 4 ಓವರ್ಗಳಲ್ಲಿ 40 ರನ್ ಚಚ್ಚಿದ ನ್ಯೂಜಿಲೆಂಡ್ ಆರಂಭಿಕರು ಬೃಹತ್ ಮೊತ್ತ ಪೇರಿಸುವ ಸೂಚನೆ ನೀಡಿದ್ದರು. ಆದರೆ ಈ ವೇಳೆ ಟೀಮ್ ಇಂಡಿಯಾ ನಾಯಕ ಮಾಡಿದ ಬೌಲಿಂಗ್ ಬದಲಾವಣೆ ಫಲ ನೀಡಿತು.
5ನೇ ಓವರ್ ಎಸೆದ ವಾಷಿಂಗ್ಟನ್ ಸುಂದರ್ ಎಸೆತದಲ್ಲಿ ಭರ್ಜರಿ ಹೊಡೆತ ಬಾರಿಸಲು ಯತ್ನಿಸಿದ ಫಿನ್ ಅಲೆನ್ (35) ಸೂರ್ಯಕುಮಾರ್ ಯಾದವ್ಗೆ ಕ್ಯಾಚ್ ನೀಡಿದರು. ಆ ಬಳಿಕ ಬಂದ ಮಾರ್ಕ್ ಚಾಪ್ಮನ್ರನ್ನು ಇಕ್ಕಟಿಗೆ ಸಿಲುಕಿಸುವಲ್ಲಿ ವಾಷಿಂಗ್ಟನ್ ಸುಂದರ್ ಯಶಸ್ವಿಯಾಗಿದ್ದರು. ಬೌನ್ಸಿ ಸ್ಪಿನ್ ಮೋಡಿ ಮಾಡಿದ್ದ ಸುಂದರ್ 6ನೇ ಎಸೆತದಲ್ಲಿ ಚಾಪ್ಮನ್ರನ್ನು ಬಲೆಗೆ ಬೀಳಿಸಿದರು. ಅದು ಕೂಡ ಅತ್ಯುತ್ತಮ ಕ್ಯಾಚ್ ಮೂಲಕ ಎಂಬುದೇ ವಿಶೇಷ.
ಸುಂದರ್ 6ನೇ ಎಸೆತವನ್ನು ವಿಕೆಟ್ನತ್ತ ಒಳ ನುಗ್ಗುವಂತೆ ಎಸೆದಿದ್ದರು. ಇದನ್ನು ಚಾಪ್ಮನ್ ರಕ್ಷಣಾತ್ಮಕವಾಗಿ ಆಡಲು ಯತ್ನಿಸಿದ್ದರು. ಆದರೆ ಚೆಂಡು ಬೌಲರ್ನ ಬಲ ಭಾಗದತ್ತ ಚಿಮ್ಮಿತು. ಕ್ಷಣಾರ್ಧದಲ್ಲೇ ಅತ್ಯದ್ಭುತ ಡೈವ್ ಮಾಡುವ ಮೂಲಕ ವಾಷಿಂಗ್ಟನ್ ಸುಂದರ್ ಒಂದೇ ಕೈಯಲ್ಲಿ ಚೆಂಡನ್ನು ಹಿಡಿದರು.
ಇದೀಗ ಈ ಅದ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಸುಂದರ್ ಅವರ ಫೀಲ್ಡಿಂಗ್ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಇನ್ನು ಈ ಪಂದ್ಯದಲ್ಲಿ ನಾಲ್ಕು ಓವರ್ ಬೌಲಿಂಗ್ ಮಾಡಿದ್ದ ವಾಷಿಂಗ್ಟನ್ ಸುಂದರ್ ಕೇವಲ 22 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.
Washington Sundar, you beauty. What a catch. pic.twitter.com/Jqaes7fesS
— Johns. (@CricCrazyJohns) January 27, 2023
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭ್ಮನ್ ಗಿಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಕುಲ್ದೀಪ್ ಯಾದವ್
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್(ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
Published On - 8:40 pm, Fri, 27 January 23