AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಂಡೀಸ್ ವಿರುದ್ಧದ ಟಿ20 ಸರಣಿಗೂ ಮುನ್ನ ಭಾರತ ತಂಡದಲ್ಲಿ ಬದಲಾವಣೆ

ವೆಸ್ಟ್ ಇಂಡೀಸ್ ವಿರುದ್ಧದ T20 ಸರಣಿಗೆ ಭಾರತ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಯುವ ಆಲ್‌ರೌಂಡರ್ ನಮನ್ ಧೀರ್ ಸೇರ್ಪಡೆಯಾಗಿದ್ದಾರೆ. ಸುಂದರ್ ಅವರನ್ನು ಕೈಬಿಟ್ಟಿದ್ದಕ್ಕೆ ಗಾಯ ಕಾರಣವಲ್ಲ, ಬದಲಾಗಿ ಮುಂಬರುವ ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ರಣಜಿ ಟ್ರೋಫಿ ಮೂಲಕ ಸಿದ್ಧತೆ ನಡೆಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಸುಂದರ್‌ಗೆ ರೆಡ್-ಬಾಲ್ ಕ್ರಿಕೆಟ್ ಅಭ್ಯಾಸಕ್ಕೆ ಅವಕಾಶ ನೀಡಲಾಗಿದೆ.

ವಿಂಡೀಸ್ ವಿರುದ್ಧದ ಟಿ20 ಸರಣಿಗೂ ಮುನ್ನ ಭಾರತ ತಂಡದಲ್ಲಿ ಬದಲಾವಣೆ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Oct 01, 2026 | 8:45 PM

Share

ಪ್ರಸ್ತುತ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಏಕದಿನ ಸರಣಿ ನಡೆಯುತ್ತಿದೆ. ಈ ಸರಣಿಯ ಬಳಿಕ ಉಭಯ ತಂಡಗಳ ನಡುವೆ ಐದು ಪಂದ್ಯಗಳ ಟಿ20 ಸರಣಿಯೂ ನಡೆಯಲಿದೆ. ಈ ಸರಣಿಗಾಗಿ ಉಭಯ ತಂಡಗಳನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಆದರೀಗ ಭಾರತ ತಂಡದಲ್ಲಿ ಒಂದು ಬದಲಾವಣೆಯನ್ನು ಮಾಡಲಾಗಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಿಂದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಬಿಡುಗಡೆ ಮಾಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ಸುಂದರ್ ಬದಲಿಗೆ ಯುವ ಆಲ್‌ರೌಂಡರ್ ನಮನ್ ಧೀರ್ ಅವರನ್ನು ಟಿ20 ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.

ಸುಂದರ್ ಅವರನ್ನು ಕೈಬಿಟ್ಟಿದ್ದೇಕೆ?

ಸುಂದರ್ ಅವರನ್ನು ಟಿ20 ತಂಡದಿಂದ ಹೊರಗಿಡಲು ಕಳಪೆ ಫಾರ್ಮ್ ಅಥವಾ ಗಾಯ ಕಾರಣವಲ್ಲ. ಬದಲಾಗಿ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಕಾರ್ಯತಂತ್ರದ ತಯಾರಿಯ ಭಾಗವಾಗಿದೆ. ಭಾರತದ ದೇಶೀಯ ಪ್ರಥಮ ದರ್ಜೆ ಪಂದ್ಯಾವಳಿಯಾದ ರಣಜಿ ಟ್ರೋಫಿ ಅಕ್ಟೋಬರ್ 11 ರಂದು ಆರಂಭವಾಗುತ್ತದೆ. ಈ ಟೂರ್ನಿಯಲ್ಲಿ ವಾಷಿಂಗ್ಟನ್ ಸುಂದರ್ ಆಡಿಸುವ ಸಲುವಾಗಿ ಆಯ್ಕೆ ಸಮಿತಿ ಈ ನಿರ್ಧಾರಕ್ಕೆ ಬಂದಿದೆ. ಇದರಿಂದಾಗಿ ಅವರು ಸಂಪೂರ್ಣವಾಗಿ ಫಿಟ್ ಆಗುವುದರ ಜೊತೆಗೆ ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಟೆಸ್ಟ್ ಸರಣಿಗೆ ಸಿದ್ಧರಾಗಬಹುದು.

ಈ ಕಾರಣಕ್ಕಾಗಿ, ಅವರಿಗೆ ಟಿ20 ಸ್ವರೂಪದಿಂದ ವಿಶ್ರಾಂತಿ ನೀಡಲಾಗಿದ್ದು, ರೆಡ್-ಬಾಲ್ ಕ್ರಿಕೆಟ್ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. ಅವರ ಸ್ಥಾನದಲ್ಲಿ, ನಮನ್ ಧೀರ್ ಅವರನ್ನು ಶ್ರೇಯಸ್ ಅಯ್ಯರ್ ನೇತೃತ್ವದ ಟಿ20 ತಂಡದಲ್ಲಿ ಸೇರಿಸಲಾಗಿದೆ. ವಾಷಿಂಗ್ಟನ್ ಸುಂದರ್ ಪ್ರಸ್ತುತ ಏಷ್ಯನ್ ಕ್ರೀಡಾಕೂಟದಲ್ಲಿ ಆಡುತ್ತಿರುವ ಭಾರತದ ಕ್ರಿಕೆಟ್ ತಂಡದ ಭಾಗವಾಗಿದ್ದಾರೆ. ಈ ಕ್ರೀಡಾಕೂಟದಲ್ಲಿ ಭಾರತ ಫೈನಲ್​ಗೇರಿದ್ದು, ಅಕ್ಟೋಬರ್ 3 ರಂದು ಪಾಕಿಸ್ತಾನ ವಿರುದ್ಧ ಫೈನಲ್ ಪಂದ್ಯವನ್ನು ಆಡಲಿದೆ.

ಭಾರತದ ನವೀಕರಿಸಿದ ಟಿ20 ತಂಡ: ಶ್ರೇಯಸ್ ಅಯ್ಯರ್ [ನಾಯಕ], ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಶಿವಂ ದುಬೆ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್, ನಮನ್ ಧೀರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ