IND vs SA: ಏಕದಿನ ಸರಣಿಯಿಂದ ದೀಪಕ್ ಚಹರ್ ಔಟ್..! ಬದಲಿಯಾಗಿ ಬಂದ ಆರ್​ಸಿಬಿ ಮಾಜಿ ಆಲ್​ರೌಂಡರ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಏಕದಿನ ಪಂದ್ಯಗಳಿಗೆ ಗಾಯಗೊಂಡಿರುವ ದೀಪಕ್ ಚಹಾರ್ ಬದಲು ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

IND vs SA: ಏಕದಿನ ಸರಣಿಯಿಂದ ದೀಪಕ್ ಚಹರ್ ಔಟ್..! ಬದಲಿಯಾಗಿ ಬಂದ ಆರ್​ಸಿಬಿ ಮಾಜಿ ಆಲ್​ರೌಂಡರ್
Washington Sundar
Follow us
TV9 Web
| Updated By: ಪೃಥ್ವಿಶಂಕರ

Updated on:Oct 08, 2022 | 3:51 PM

ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಏಕದಿನ ಪಂದ್ಯಗಳಿಗೆ ಗಾಯಗೊಂಡಿರುವ ದೀಪಕ್ ಚಹರ್ (Deepak Chahar) ಬದಲು ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ (Washington Sundar) ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಗಾಯಗೊಂಡಿರುವ ಚಹರ್ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳಲಿದ್ದು, ಅಲ್ಲಿನ ವೈದ್ಯಕೀಯ ತಂಡವು ಅವರನ್ನು ಮೇಲ್ವಿಚಾರಣೆ ನಡೆಸಲಿದೆ ಎಂದು ಹೇಳಿದೆ. ಚಹರ್ ಗಾಯ ಹೆಚ್ಚು ಗಂಭೀರವಾಗಿಲ್ಲ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದ್ದು ಅವರು ಬೇಗನೇ ಗುಣಮುಖರಾಗಲಿ ಎಂದು ಟೀಂ ಇಂಡಿಯಾ ಅಭಿಮಾನಿಗಳು ಆಶಿಸುತ್ತಿದ್ದಾರೆ. ಏಕೆಂದರೆ ಆಸ್ಟ್ರೇಲಿಯಾದಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ನಲ್ಲಿ ಚಹರ್ ಟೀಂ ಇಂಡಿಯಾದ ಸ್ಟ್ಯಾಂಡ್‌ಬೈ ಆಟಗಾರರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಬುಮ್ರಾ ಇಂಜುರಿಗೊಂಡು ಟಿ20 ವಿಶ್ವಕಪ್​ನಿಂದ ಹೊರಗುಳಿರುವುದರಿಂದ ಚಹರ್ ಅವರನ್ನು ಬುಮ್ರಾ ಬದಲಿಗೆ ತಂಡದಲ್ಲಿ ಆಡಿಸುವ ಸಾಧ್ಯತೆಗಳು ಹೆಚ್ಚಿವೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಅಭ್ಯಾಸದ ವೇಳೆ ಇಂಜುರಿಗೆ ತುತ್ತಾಗಿದ್ದ ದೀಪಕ್ ಮೊದಲ ಏಕದಿನ ಪಂದ್ಯದಲ್ಲೂ ಆಡಿರಲಿಲ್ಲ. ಈ ಏಕದಿನ ಸರಣಿಯಲ್ಲಿ ದೀಪಕ್ ನೀಡುವ ಪ್ರದರ್ಶನದ ಮೇಲೆ ಅವರನ್ನು ಟಿ20 ವಿಶ್ವಕಪ್​ನಲ್ಲಿ ಆಡಿಸುವ ಪ್ಲಾನ್ ಹಾಕಿಕೊಂಡಿದ್ದ ಬಿಸಿಸಿಐಗೆ ಈಗ ತೀವ್ರ ಹಿನ್ನಡೆಯುಂಟಾಗಿದೆ. ಈಗ ಟಿ20 ವಿಶ್ವಕಪ್​ಗೆ ಕೆಲವೇ ಕೆಲವು ದಿನಗಳು ಉಳಿದಿದ್ದು, ಬದ್ಧವೈರಿ ಪಾಕಿಸ್ತಾನ ವಿರುದ್ಧದ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದೆ. ಆದರೆ ಆ ಪಂದ್ಯದ ಹೊತ್ತಿಗೆ ದೀಪಕ್ ಚಹರ್ ಫಿಟ್ ಆಗುತ್ತಾರ ಎಂಬುದನ್ನು ಕಾದು ನೋಡಬೇಕಿದೆ.

ಈಗಾಗಲೇ ಬುಮ್ರಾ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜಾರಂತಹ ಸ್ಟಾರ್ ಆಟಗಾರರನ್ನು ಗಾಯಗಳಿಂದ ಕಳೆದುಕೊಂಡಿರುವ ಟೀಂ ಇಂಡಿಯಾಕ್ಕೆ ದೀಪಕ್ ಚಹರ್ ಇಂಜುರಿಗೊಂಡಿರುವುದು ಸಹ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅಲ್ಲದೆ ಅಕ್ಟೋಬರ್ 9 ಎಲ್ಲಾ ತಂಡಗಳು ತಮ್ಮ ತಮ್ಮ ವಿಶ್ವಕಪ್ ತಂಡಗಳನ್ನು ಫೈನಲ್ ಮಾಡಲು ಕೊನೆಯ ದಿನಾಂಕವಾಗಿದೆ. ಹೀಗಾಗಿ ಚಹರ್‌ ಬುಮ್ರಾ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯಬೇಕಾದರೆ ಇನ್ನೇರಡು ದಿನಗಳಲ್ಲಿ ಫಿಟ್ ಆಗಬೇಕಿದೆ.

ಹಲವು ದಿನಗಳ ಬಳಿಕ ಸುಂದರ್​ಗೆ ಅವಕಾಶ

ಸುಂದರ್ ಕೂಡ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ. ಕೌಂಟಿಯಲ್ಲಿ ಲಂಕಾಶೈರ್ ಪರ ಆಡುತ್ತಿದ್ದಾಗ ಭುಜದ ಗಾಯಕ್ಕೆ ಸುಂದರ್ ತುತ್ತಾಗಿದ್ದರು. ಅದರ ನಂತರ ವಿಶ್ರಾಂತಿ ಮೊರೆಹೋಗಿದ್ದ ಸುಂದರ್ ಈಗ ತಂಡಕ್ಕೆ ಮರಳಿದ್ದಾರೆ. ಸುಂದರ್, 11 ಫೆಬ್ರವರಿ 2022 ರಂದು ಅಹಮದಾಬಾದ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಮೈದಾನಕ್ಕಿಳಿದ್ದರು. ಇದಾದ ನಂತರ ಸನ್ ರೈಸರ್ಸ್ ಹೈದರಾಬಾದ್ ಪರ ಐಪಿಎಲ್ ಆಡಿದ್ದರು.

ಕೊನೆಯ 2 ಪಂದ್ಯಗಳಿಗೆ ಭಾರತ ತಂಡ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್. ಸಿರಾಜ್, ವಾಷಿಂಗ್ಟನ್ ಸುಂದರ್.

Published On - 3:38 pm, Sat, 8 October 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ