AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Tendulkar: ಭರ್ಜರಿ ಯಾರ್ಕರ್​ಗೆ ಕಿಶನ್ ಕ್ಲೀನ್ ಬೌಲ್ಡ್​: ಅರ್ಜುನ್ ತೆಂಡೂಲ್ಕರ್​ಗೆ ಸಿಗಲಿದೆಯಾ ಚಾನ್ಸ್​?

IPL 2022: ಈ ಬಾರಿ ಮುಂಬೈ ಇಂಡಿಯನ್ಸ್ ಪ್ರದರ್ಶನವು ತುಂಬಾ ನಿರಾಶಾದಾಯಕವಾಗಿದೆ. ರೋಹಿತ್ ಶರ್ಮಾ ನಾಯಕತ್ವದ ತಂಡ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನು ಸೋತಿದೆ.

Arjun Tendulkar: ಭರ್ಜರಿ ಯಾರ್ಕರ್​ಗೆ ಕಿಶನ್ ಕ್ಲೀನ್ ಬೌಲ್ಡ್​: ಅರ್ಜುನ್ ತೆಂಡೂಲ್ಕರ್​ಗೆ ಸಿಗಲಿದೆಯಾ ಚಾನ್ಸ್​?
Arjun Tendulkar
TV9 Web
| Updated By: ಝಾಹಿರ್ ಯೂಸುಫ್|

Updated on: Apr 21, 2022 | 5:07 PM

Share

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಇದುವರೆಗೆ ಐಪಿಎಲ್​ನಲ್ಲಿ ಪದಾರ್ಪಣೆ ಮಾಡಿಲ್ಲ. ಕಳೆದ ಸೀಸನ್​ನಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಅರ್ಜುನ್​ಗೆ ಈ ಬಾರಿಯಾದರೂ ಅವಕಾಶ ಸಿಗಲಿದೆಯಾ ಎಂಬುದನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ ಅಭ್ಯಾಸದ ವೇಳೆಯ ಅರ್ಜುನ್ ತೆಂಡೂಲ್ಕರ್​ ಅವರ ಬೌಲಿಂಗ್ ವಿಡಿಯೋವೊಂದು ವೈರಲ್ ಆಗಿದೆ. ವಿಶೇಷ ಎಂದರೆ ಈ ವಿಡಿಯೋದಲ್ಲಿ ಅರ್ಜುನ್ ಯಾರ್ಕರ್​ ಎಸೆತಕ್ಕೆ ಮುಂಬೈ ಇಂಡಿಯನ್ಸ್‌ನ ಸ್ಟಾರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕ್ಲೀನ್ ಬೌಲ್ಡ್ ಆಗಿದ್ದಾರೆ. ಹೀಗಾಗಿಯೇ ಅರ್ಜುನ್ ತೆಂಡೂಲ್ಕರ್​ಗೆ ಮುಂಬೈ ಈ ಬಾರಿ ಚಾನ್ಸ್ ನೀಡಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಏಪ್ರಿಲ್ 21 ರಂದು ನಡೆಯಲಿದೆ. ಮುಂಬೈಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಒಂದು ವೇಳೆ ಈ ಪಂದ್ಯದಲ್ಲಿ ರೋಹಿತ್‌ ಪಡೆ ಸೋತರೆ ಪ್ಲೇಆಫ್‌ ಹಂತಕ್ಕೇರುವ ಆಸೆ ಕೊನೆಗೊಳ್ಳಲಿದೆ. ಮಾಡು ಇಲ್ಲವೇ ಮಡಿ ಪಂದ್ಯದ ದೃಷ್ಟಿಯಿಂದ ಮುಂಬೈ ತಂಡ ಕಳೆದ ಕೆಲವು ದಿನಗಳಿಂದ ಬಿರುಸಿನ ಅಭ್ಯಾಸ ನಡೆಸುತ್ತಿದೆ. ಅಭ್ಯಾಸದ ವೇಳೆ ಅರ್ಜುನ್ ತೆಂಡೂಲ್ಕರ್ ಅವರು ತಮ್ಮ ಪರಿಪೂರ್ಣ ಯಾರ್ಕರ್‌ನಲ್ಲಿ ಇಶಾನ್ ಕಿಶನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ಗಮನ ಸೆಳೆದಿದ್ದಾರೆ.

ಅರ್ಜುನ್ ತೆಂಡೂಲ್ಕರ್ ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್​ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಐಪಿಎಲ್ 2022 ರ ಹರಾಜಿನಲ್ಲಿ ಅತ್ಯಂತ ದುಬಾರಿ ಆಟಗಾರನಾಗಿ ಇಶಾನ್ ಕಿಶನ್, ಅರ್ಜುನ್ ಅವರ ಈ ಅದ್ಭುತ ಯಾರ್ಕರ್ ಮುಂದೆ ಅಸಹಾಯಕರಾಗಿ ನಿಂತಿದ್ದರು. ಅಲ್ಲದೆ ಅಭ್ಯಾಸದ ವೇಳೆ ಪ್ರಮುಖ ಬ್ಯಾಟ್ಸ್​ಮನ್​ಗಳನ್ನು ತಮ್ಮ ಬೌಲಿಂಗ್ ಮೂಲಕ ಕಾಡುವಲ್ಲಿ ಅರ್ಜುನ್ ಯಶಸ್ವಿಯಾಗಿದ್ದಾರೆ. ಹೀಗಾಗಿ ಸಿಎಸ್​ಕೆ ವಿರುದ್ದ ಅರ್ಜುನ್ ತೆಂಡೂಲ್ಕರ್ ಅವರಿಗೆ ಅವಕಾಶ ಸಿಗಲಿದೆಯಾ ಕಾದು ನೋಡಬೇಕಿದೆ.

ಇನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಪ್ರದರ್ಶನವು ತುಂಬಾ ನಿರಾಶಾದಾಯಕವಾಗಿದೆ. ರೋಹಿತ್ ಶರ್ಮಾ ನಾಯಕತ್ವದ ತಂಡ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನು ಸೋತಿದೆ. ಅಲ್ಲದೆ ಪಾಯಿಂಟ್ ಟೇಬಲ್​ನಲ್ಲಿ ಮುಂಬೈ ಇಂಡಿಯನ್ಸ್ 10ನೇ ಸ್ಥಾನದಲ್ಲಿದೆ. ಹೀಗಾಗಿ ಸಿಎಸ್ ಕೆ ವಿರುದ್ಧದ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಪ್ಲೇ ಆಫ್ ರೇಸ್‌ನಲ್ಲಿ ಮುಂಬೈ ಉಳಿಯಬೇಕಾದರೆ, ಈ ಪಂದ್ಯವನ್ನು ಗೆಲ್ಲಲೇಬೇಕು.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!