ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಇದುವರೆಗೆ ಐಪಿಎಲ್ನಲ್ಲಿ ಪದಾರ್ಪಣೆ ಮಾಡಿಲ್ಲ. ಕಳೆದ ಸೀಸನ್ನಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಅರ್ಜುನ್ಗೆ ಈ ಬಾರಿಯಾದರೂ ಅವಕಾಶ ಸಿಗಲಿದೆಯಾ ಎಂಬುದನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ ಅಭ್ಯಾಸದ ವೇಳೆಯ ಅರ್ಜುನ್ ತೆಂಡೂಲ್ಕರ್ ಅವರ ಬೌಲಿಂಗ್ ವಿಡಿಯೋವೊಂದು ವೈರಲ್ ಆಗಿದೆ. ವಿಶೇಷ ಎಂದರೆ ಈ ವಿಡಿಯೋದಲ್ಲಿ ಅರ್ಜುನ್ ಯಾರ್ಕರ್ ಎಸೆತಕ್ಕೆ ಮುಂಬೈ ಇಂಡಿಯನ್ಸ್‌ನ ಸ್ಟಾರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕ್ಲೀನ್ ಬೌಲ್ಡ್ ಆಗಿದ್ದಾರೆ. ಹೀಗಾಗಿಯೇ ಅರ್ಜುನ್ ತೆಂಡೂಲ್ಕರ್ಗೆ ಮುಂಬೈ ಈ ಬಾರಿ ಚಾನ್ಸ್ ನೀಡಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಏಪ್ರಿಲ್ 21 ರಂದು ನಡೆಯಲಿದೆ. ಮುಂಬೈಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಒಂದು ವೇಳೆ ಈ ಪಂದ್ಯದಲ್ಲಿ ರೋಹಿತ್ ಪಡೆ ಸೋತರೆ ಪ್ಲೇಆಫ್ ಹಂತಕ್ಕೇರುವ ಆಸೆ ಕೊನೆಗೊಳ್ಳಲಿದೆ. ಮಾಡು ಇಲ್ಲವೇ ಮಡಿ ಪಂದ್ಯದ ದೃಷ್ಟಿಯಿಂದ ಮುಂಬೈ ತಂಡ ಕಳೆದ ಕೆಲವು ದಿನಗಳಿಂದ ಬಿರುಸಿನ ಅಭ್ಯಾಸ ನಡೆಸುತ್ತಿದೆ. ಅಭ್ಯಾಸದ ವೇಳೆ ಅರ್ಜುನ್ ತೆಂಡೂಲ್ಕರ್ ಅವರು ತಮ್ಮ ಪರಿಪೂರ್ಣ ಯಾರ್ಕರ್‌ನಲ್ಲಿ ಇಶಾನ್ ಕಿಶನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ಗಮನ ಸೆಳೆದಿದ್ದಾರೆ.
ಅರ್ಜುನ್ ತೆಂಡೂಲ್ಕರ್ ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಐಪಿಎಲ್ 2022 ರ ಹರಾಜಿನಲ್ಲಿ ಅತ್ಯಂತ ದುಬಾರಿ ಆಟಗಾರನಾಗಿ ಇಶಾನ್ ಕಿಶನ್, ಅರ್ಜುನ್ ಅವರ ಈ ಅದ್ಭುತ ಯಾರ್ಕರ್ ಮುಂದೆ ಅಸಹಾಯಕರಾಗಿ ನಿಂತಿದ್ದರು. ಅಲ್ಲದೆ ಅಭ್ಯಾಸದ ವೇಳೆ ಪ್ರಮುಖ ಬ್ಯಾಟ್ಸ್ಮನ್ಗಳನ್ನು ತಮ್ಮ ಬೌಲಿಂಗ್ ಮೂಲಕ ಕಾಡುವಲ್ಲಿ ಅರ್ಜುನ್ ಯಶಸ್ವಿಯಾಗಿದ್ದಾರೆ. ಹೀಗಾಗಿ ಸಿಎಸ್ಕೆ ವಿರುದ್ದ ಅರ್ಜುನ್ ತೆಂಡೂಲ್ಕರ್ ಅವರಿಗೆ ಅವಕಾಶ ಸಿಗಲಿದೆಯಾ ಕಾದು ನೋಡಬೇಕಿದೆ.
ಇನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಪ್ರದರ್ಶನವು ತುಂಬಾ ನಿರಾಶಾದಾಯಕವಾಗಿದೆ. ರೋಹಿತ್ ಶರ್ಮಾ ನಾಯಕತ್ವದ ತಂಡ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನು ಸೋತಿದೆ. ಅಲ್ಲದೆ ಪಾಯಿಂಟ್ ಟೇಬಲ್ನಲ್ಲಿ ಮುಂಬೈ ಇಂಡಿಯನ್ಸ್ 10ನೇ ಸ್ಥಾನದಲ್ಲಿದೆ. ಹೀಗಾಗಿ ಸಿಎಸ್ ಕೆ ವಿರುದ್ಧದ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಪ್ಲೇ ಆಫ್ ರೇಸ್‌ನಲ್ಲಿ ಮುಂಬೈ ಉಳಿಯಬೇಕಾದರೆ, ಈ ಪಂದ್ಯವನ್ನು ಗೆಲ್ಲಲೇಬೇಕು.
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ