Video: ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಬಿನೂರ

Binura Fernando Catch: 24 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 2 ಫೋರ್​ನೊಂದಿಗೆ 39 ರನ್​ ಬಾರಿಸುವ ಮೂಲಕ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಸ್ಯಾಮ್ಸನ್ 13ನೇ ಓವರ್​ನ ಕೊನೆಯ ಎಸೆತದಲ್ಲಿ ಕ್ಯಾಚ್ ನೀಡಿದ್ದರು.

Video: ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಬಿನೂರ
Binura Fernando Catch
Updated By: ಝಾಹಿರ್ ಯೂಸುಫ್

Updated on: Feb 27, 2022 | 3:28 PM

ಶ್ರೀಲಂಕಾ ವಿರುದ್ದದ (India vs Sri Lanka T20) 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು. ಆದರೆ ಶ್ರೀಲಂಕಾ ಬ್ಯಾಟ್ಸ್​ಮನ್​ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕ ಆಟಗಾರ ಪಾತುಮ್ ನಿಸಂಕ 75 ರನ್ ಬಾರಿಸಿದರೆ, ನಾಯಕ ದುಸನ್ ಶನಕಾ 19 ಎಸೆತಗಳಲ್ಲಿ 47 ರನ್​ ಸಿಡಿಸಿದರು. ಪರಿಣಾಮ 20 ಓವರ್​ಗಳಲ್ಲಿ ಶ್ರೀಲಂಕಾ ತಂಡವು 5 ವಿಕೆಟ್ ನಷ್ಟಕ್ಕೆ 183 ರನ್​ ಕಲೆಹಾಕಿತು.

184 ರನ್​ಗಳ ಟಾರ್ಗೆಟ್ ಪಡೆದ ಟೀಮ್ ಇಂಡಿಯಾದ ಆರಂಭ ಉತ್ತಮವಾಗಿರಲಿಲ್ಲ. ರೋಹಿತ್ ಶರ್ಮಾ 1 ರನ್​ಗಳಿಸಿ ಔಟಾದರೆ, ಇಶಾನ್ ಕಿಶನ್ 16 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಆ ಬಳಿಕ ಬಂದ ಶ್ರೇಯಸ್ ಅಯ್ಯರ್ ಸ್ಪೋಟಕ ಅರ್ಧಶತಕ ಬಾರಿಸಿ ಮಿಂಚಿದರು. ಅಯ್ಯರ್ ಉತ್ತಮ ಸಾಥ್ ನೀಡಿದ ಸಂಜು ಸ್ಯಾಮ್ಸನ್ ಕೂಡ ಅಬ್ಬರಿಸಿದ್ದರು. ಬ್ಯಾಕ್ ಟು ಬ್ಯಾಕ್ ಸಿಕ್ಸ್-ಫೋರ್​ಗಳ ಮೂಲಕ ಗಮನ ಸೆಳೆದ ಸ್ಯಾಮ್ಸನ್ ಅವರು ಔಟಾಗಿದ್ದು ಮಾತ್ರ ಅಧ್ಭುತ ಫೀಲ್ಡಿಂಗ್​ನಿಂದ ಎಂಬುದು ವಿಶೇಷ.

ಹೌದು, 24 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 2 ಫೋರ್​ನೊಂದಿಗೆ 39 ರನ್​ ಬಾರಿಸುವ ಮೂಲಕ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಸ್ಯಾಮ್ಸನ್ 13ನೇ ಓವರ್​ನ ಕೊನೆಯ ಎಸೆತದಲ್ಲಿ ಕ್ಯಾಚ್ ನೀಡಿದ್ದರು. ಲಹಿರು ಕುಮಾರ ಎಸೆತದ ಫುಲ್ ಆಫ್​ ಸೈಡ್ ಎಸೆತಕ್ಕೆ ಭರ್ಜರಿ ಉತ್ತರ ನೀಡಲು ಮುಂದಾದ ಸ್ಯಾಮ್ಸನ್ ಬ್ಯಾಟ್​ ಸವರಿ ಚೆಂಡು ಫಸ್ಟ್ ಸ್ಲಿಪ್​ನತ್ತ ಚಿಮ್ಮಿತು.

ಆದರೆ ಅಲ್ಲೇ ಫೀಲ್ಡಿಂಗ್​ನಲ್ಲಿದ್ದ ಬಿನೂರ ಫೆರ್ನಾಂಡೋ ಅತ್ಯಾಧ್ಬುತವಾಗಿ ಜಿಗಿಯುವ ಮೂಲಕ ಒಂದು ಕೈಯಿಂದ ಅದ್ಭುತ ಕ್ಯಾಚ್ ಹಿಡಿದರು. ಇತ್ತ ಲಂಕಾ ಫೀಲ್ಡರ್​ನ ಅಧ್ಭುತ ಕ್ಯಾಚ್ ನೋಡಿ ಟೀಮ್ ಇಂಡಿಯಾ ಕ್ರಿಕೆಟ್ ಪ್ರೇಮಿಗಳು ಕೂಡ ಹುಬ್ಬೇರಿಸಿದ್ದರು. ಇದೀಗ ಬಿನೂರ ಹಿಡಿದ ಈ ಅಧ್ಬುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಅಂತಿಮವಾಗಿ ಶ್ರೇಯಸ್ ಅಯ್ಯರ್ 44 ಎಸೆತಗಳಲ್ಲಿ 74 ರನ್​ಗಳಿಸಿದರೆ, ರವೀಂದ್ರ ಜಡೇಜಾ 18 ಎಸೆತಗಳಲ್ಲಿ 44 ರನ್ ಬಾರಿಸಿದರು. ಅದರಂತೆ 17.1 ಓವರ್​ನಲ್ಲಿ ಟೀಮ್ ಇಂಡಿಯಾ ಗುರಿಮುಟ್ಟಿತು. ಈ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ 2-0 ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ.

ಇದನ್ನೂ ಓದಿ: IPL 2022 format explained: 2 ಗುಂಪು, 70 ಪಂದ್ಯಗಳು: ಹೇಗಿರಲಿದೆ IPL 2022 ಟೂರ್ನಿ

ಇದನ್ನೂ ಓದಿ: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಈ ಆಟಗಾರರು ಅಲಭ್ಯ

ಇದನ್ನೂ ಓದಿ: IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!

(Watch: Sri Lanka’s Binura Fernando Takes Sensational Catch)