IPL 2022: ಐಪಿಎಲ್ 15ನೇ ಸೀಸನ್ ನಲ್ಲಿ ವಿರಾಟ್ ಕೊಹ್ಲಿ ಸತತ ರನ್ ಗಳಿಸಲು ಪರದಾಡುತ್ತಿದ್ದಾರೆ . ಐಪಿಎಲ್‌ನ 54ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮೊದಲ ಎಸೆತದಲ್ಲೇ ಪೆವಿಲಿಯನ್‌ಗೆ ಮರಳಿದರು. ಪ್ರಸಕ್ತ ಐಪಿಎಲ್ ನಲ್ಲಿ ವಿರಾಟ್ ಮೂರನೇ ಬಾರಿ ‘ ಗೋಲ್ಡನ್ ಡಕ್’ಗೆ ಬಲಿಯಾಗಿದ್ದಾರೆ . ಸ್ಪಿನ್ ಬೌಲರ್ ಕನ್ನಡಿಗ ಜಗದೀಶ ಸುಚಿತ್ ಎಸೆದ ಪಂದ್ಯದ ಮೊದಲ ಓವರ್‌ನ ಮೊದಲ ಎಸೆತದಲ್ಲಿ ಕೊಹ್ಲಿಯನ್ನು ಪೆವಿಲಿಯನ್‌ಗೆ ಕಳುಹಿಸಿದರು. ಶಾರ್ಟ್ ಮಿಡ್‌ವಿಕೆಟ್‌ನತ್ತ ಸಾಗಿದ ಸುಚಿತ್ ಎಸೆತವನ್ನು ವಿರಾಟ್ ಫ್ಲಿಕ್ ಮಾಡಲು ಪ್ರಯತ್ನಿಸಿದರು. ಈ ವೇಳೆ ಫ್ರಂಟ್ ಫೀಲ್ಡ್ನಲ್ಲಿದ್ದ ಎಸ್‌ಆರ್‌ಹೆಚ್ ನಾಯಕ ಕೇನ್ ವಿಲಿಯಮ್ಸನ್ ಚೆಂಡನ್ನು ಸುಲಭವಾಗಿ ಕ್ಯಾಚ್ ಹಿಡಿದರು. ಇದರೊಂದಿಗೆ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್ನಲ್ಲಿ ಮೂರನೇ ಬಾರಿ ಗೋಲ್ಡನ್ ಡಕ್‌ಗೆ ಔಟಾದರು.
ಒಟ್ಟಾರೆ ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಆರನೇ ಬಾರಿಗೆ ಮೊದಲ ಎಸೆತದಲ್ಲಿ ಔಟಾದರು. 2008 ರಲ್ಲಿ ಮೊದಲ ಬಾರಿಗೆ ಆಶಿಶ್ ನೆಹ್ರಾ ಅವರು ಕೊಹ್ಲಿಯನ್ನು ಗೋಲ್ಡನ್ ಡಕ್‌ಗೆ ಔಟ್ ಮಾಡಿದ್ದರು. 2014 ರಲ್ಲಿ, ಪಂಜಾಬ್ ಕಿಂಗ್ಸ್ ಬೌಲರ್ ಸಂದೀಪ್ ಶರ್ಮಾ ಅವರನ್ನು ಮೊದಲ ಎಸೆತದಲ್ಲಿ ಪೆವಿಲಿಯನ್‌ಗೆ ಕಳುಹಿಸಿದರೆ, 2017 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವೇಗದ ಬೌಲರ್ ನಾಥನ್ ಕೌಲ್ಟರ್-ನೈಲ್ ಗೋಲ್ಡನ್ ಡಕ್‌ಗೆ ಔಟ್ ಮಾಡಿದ್ದರು. ಈ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವೇಗದ ಬೌಲರ್ ದುಷ್ಮಂತ ಚಮೀರಾ ಮುಂಬೈನ ಡಿವೈ ಪಾಟೀಲ್‌ನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್‌ಗೆ ಗೋಲ್ಡನ್ ಡಕ್‌ಗೆ ಪೆವಿಲಿಯನ್‌ಗೆ ಕಳುಹಿಸಿದ್ದರು. ಆ ನಂತರ ಸನ್‌ರೈಸರ್ಸ್ ಹೈದರಾಬಾದ್‌ನ ವೇಗಿ ಮಾರ್ಕೊ ಯಾನ್ಸನ್ ಕೂಡ ಕೊಹ್ಲಿಯನ್ನು ಮೊದಲ ಎಸೆತದಲ್ಲೇ ಔಟ್ ಮಾಡಿದ್ದರು. ಇದೀಗ ಜಗದೀಶ ಸುಚಿತ್ ವಿರಾಟ್ ಕೊಹ್ಲಿಯನ್ನು ಮೊದಲ ಎಸೆತದಲ್ಲೇ ಔಟ್ ಮಾಡಿ ಗಮನ ಸೆಳೆದಿದ್ದಾರೆ.
ವಿರಾಟ್ ಕೊಹ್ಲಿ ಕಳಪೆ ಫಾರ್ಮ್:
33 ವರ್ಷದ ವಿರಾಟ್ ಕೊಹ್ಲಿ ಈ ಸೀಸನ್ನಲ್ಲಿ ಆಡಿದ 12 ಪಂದ್ಯಗಳಲ್ಲಿ 216 ರನ್ ಗಳಿಸಿದ್ದಾರೆ. ಅಲ್ಲದೆ ಕೊಹ್ಲಿ ಬ್ಯಾಟ್‌ನಿಂದ ಒಟ್ಟು 20 ಬೌಂಡರಿಗಳು ಮತ್ತು 4 ಸಿಕ್ಸರ್‌ಗಳು ಮಾತ್ರ ಮೂಡಿ ಬಂದಿವೆ. ಕಳೆದ ಕೆಲವು ಪಂದ್ಯಗಳಲ್ಲಿ ಕೊಹ್ಲಿ ಓಪನಿಂಗ್‌ಗೆ ಕ್ರೀಸ್‌ಗೆ ಬರುತ್ತಿದ್ದರೂ ಆರ್‌ಸಿಬಿಯ ಈ ಉತ್ತಮ ಆರಂಭವನ್ನೂ ಸಹ ಪಡೆದಿಲ್ಲ.
ಟಾಸ್ ಗೆದ್ದ RCB ಬ್ಯಾಟಿಂಗ್ ಆಯ್ದುಕೊಂಡಿತು
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. RCB ತನ್ನ ಪ್ಲೇಯಿಂಗ್ 11 ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಹೈದರಾಬಾದ್ ತಂಡ ಎರಡು ಬದಲಾವಣೆ ಮಾಡಿದ್ದು, ಜಗದೀಶ್ ಸುಚಿತ್ ಮತ್ತು ಫಜಲ್ಹಾಕ್ ಫಾರೂಕಿ ಅವರಿಗೆ ಅವಕಾಶ ನೀಡಿದೆ.
ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ಜಗದೀಶ ಸುಚಿತ್, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಉಮ್ರಾನ್ ಮಲಿಕ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.