WCL 2024: ವಿಂಡೀಸ್ ಚಾಂಪಿಯನ್ಸ್ ಮಣಿಸಿ ಫೈನಲ್ಗೇರಿದ ಪಾಕಿಸ್ತಾನ ಚಾಂಪಿಯನ್ಸ್..!
WCL 2024: ಪಾಕಿಸ್ತಾನ ಚಾಂಪಿಯನ್ಸ್ ಮತ್ತು ವೆಸ್ಟ್ ಇಂಡೀಸ್ ಚಾಂಪಿಯನ್ಸ್ ನಡುವೆ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ತಂಡ ವೆಸ್ಟ್ ಇಂಡೀಸ್ ಚಾಂಪಿಯನ್ಸ್ ತಂಡವನ್ನು 20 ರನ್ಗಳಿಂದ ಮಣಿಸುವಲ್ಲಿ ಯಶಸ್ವಿಯಾಯಿತು. ಇದೀಗ ಇಂಡಿಯಾ ಚಾಂಪಿಯನ್ಸ್ ಮತ್ತು ಆಸ್ಟ್ರೇಲಿಯಾ ಚಾಂಪಿಯನ್ಸ್ ತಂಡಗಳ ನಡುವೆ ನಡೆಯುತ್ತಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಗೆಲುವು ದಾಖಲಿಸುವ ತಂಡ ಜುಲೈ 13ರಂದು ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ತಂಡವನ್ನು ಎದುರಿಸಲಿದೆ.

ಪ್ರಸ್ತುತ ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಲೀಗ್ನಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ತಂಡ ಫೈನಲ್ಗೇರುವಲ್ಲಿ ಯಶಸ್ವಿಯಾಗಿದೆ. ಪಾಕಿಸ್ತಾನ ಚಾಂಪಿಯನ್ಸ್ ಮತ್ತು ವೆಸ್ಟ್ ಇಂಡೀಸ್ ಚಾಂಪಿಯನ್ಸ್ ನಡುವೆ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ತಂಡ ವೆಸ್ಟ್ ಇಂಡೀಸ್ ಚಾಂಪಿಯನ್ಸ್ ತಂಡವನ್ನು 20 ರನ್ಗಳಿಂದ ಮಣಿಸುವಲ್ಲಿ ಯಶಸ್ವಿಯಾಯಿತು. ಇದೀಗ ಇಂಡಿಯಾ ಚಾಂಪಿಯನ್ಸ್ ಮತ್ತು ಆಸ್ಟ್ರೇಲಿಯಾ ಚಾಂಪಿಯನ್ಸ್ ತಂಡಗಳ ನಡುವೆ ನಡೆಯುತ್ತಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಗೆಲುವು ದಾಖಲಿಸುವ ತಂಡ ಜುಲೈ 13ರಂದು ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಚಾಂಪಿಯನ್ಸ್ 199 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಚಾಂಪಿಯನ್ಸ್ ತಂಡ 19.5 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 178 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
10 ರನ್‌ಗಳಿಗೆ 3 ವಿಕೆಟ್
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಚಾಂಪಿಯನ್ಸ್ ತಂಡ ಅತ್ಯಂತ ಕೆಟ್ಟ ಆರಂಭ ಪಡೆಯಿತು. ಆರಂಭಿಕ ಆಟಗಾರ ಶಾರ್ಜೀಲ್ ಖಾನ್ ಮೊದಲ ಓವರ್‌ನಲ್ಲಿಯೇ ಔಟಾಗಿ ಪೆವಿಲಿಯನ್‌ಗೆ ಮರಳಿದರು. ಇದಾದ ಬಳಿಕ ಎರಡನೇ ಓವರ್‌ನಲ್ಲಿ ಎರಡು ವಿಕೆಟ್‌ಗಳು ಉರುಳಿದವು. ಈ ಮೂಲಕ ಪಾಕ್ ಚಾಂಪಿಯನ್ ತಂಡ 10 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು. ಇದರಿಂದಾಗಿ ಪಾಕ್ ತಂಡ ಆರಂಭದಲ್ಲೇ ಸಮಸ್ಯೆಗೆ ಸಿಲುಕಿತು. ಆದರೆ ನಂತರ ಯೂನಿಸ್ ಖಾನ್ ಮತ್ತು ಕಮ್ರಾನ್ ಅಕ್ಮಲ್ ತಂಡದ ಇನ್ನಿಂಗ್ಸ್ ಜವಾಬ್ದಾರಿಯನ್ನು ವಹಿಸಿಕೊಂಡು ಪಾಕಿಸ್ತಾನವನ್ನು 80 ರನ್‌ಗಳ ಗಡಿ ದಾಟಿಸಿದರು.
ಯೂನಿಸ್ ಖಾನ್ ಅರ್ಧಶತಕ
ಈ ವೇಳೆ ಪಾಕಿಸ್ತಾನ ಚಾಂಪಿಯನ್ಸ್ ಪರ ಅದ್ಭುತ ಇನ್ನಿಂಗ್ಸ್ ಆಡಿದ ಯೂನಿಸ್ ಖಾನ್ 45 ಎಸೆತಗಳಲ್ಲಿ ಬಿರುಸಿನ 65 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು ಒಂದು ಸಿಕ್ಸರ್ ಕೂಡ ಸೇರಿತ್ತು. ಇವರಲ್ಲದೇ ಕಮ್ರಾನ್ ಅಕ್ಮಲ್ 46 ರನ್ ಕೊಡುಗೆ ನೀಡಿದರು. ಆಮೆರ್ ಯಾಮಿನ್ ಮತ್ತು ಸೊಹೈಲ್ ತನ್ವೀರ್ ಕೊನೆಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿ ಕ್ರಮವಾಗಿ 40 ರನ್ ಮತ್ತು 33 ರನ್ ಬಾರಿಸಿದರು. ಈ ಆಟಗಾರರಿಂದಲೇ ಪಾಕ್ ಚಾಂಪಿಯನ್ ತಂಡ ದೊಡ್ಡ ಸ್ಕೋರ್ ತಲುಪಲು ಸಾಧ್ಯವಾಯಿತು.
ವಿಂಡೀಸ್ ಆಲೌಟ್
ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡಕ್ಕೆ 35 ರನ್‌ಗಳ ಜೊತೆಯಾಟ ಸಿಕ್ಕಿತು. ಆರಂಭಿಕ ಗೇಲ್ 22 ರನ್‌ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಡ್ವೇನ್ ಸ್ಮಿತ್ ಕೂಡ 26 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಮಧ್ಯಮ ಕ್ರಮಾಂಕದಲ್ಲಿ ಆಶ್ಲೇ ನರ್ಸ್ 36 ರನ್‌ಗಳ ಹೋರಾಟದ ಇನ್ನಿಂಗ್ಸ್ ಆಡಿದರೆ, ಕೊನೆಯಲ್ಲಿ ರಾಯದ್ ಎಮ್ರಿಟ್ 9 ಎಸೆತಗಳಲ್ಲಿ 29 ರನ್ ಬಾರಿಸಿ ಗೆಲುವಿಗಾಗಿ ಹೋರಾಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:42 pm, Fri, 12 July 24
