AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WCL 2025: ಭಾರತ- ಪಾಕಿಸ್ತಾನ ನಡುವಿನ ಪಂದ್ಯ ರದ್ದಾಗುವ ಸಾಧ್ಯತೆ

India vs Pakistan: ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಲೀಗ್​ನಲ್ಲಿ ಜುಲೈ 20 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆದರೆ ಎಡ್ಜ್‌ಬಾಸ್ಟನ್‌ನಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಪಂದ್ಯ ರದ್ದಾಗುವ ಆತಂಕವಿದೆ. ಹಲವು ಮಾಜಿ ಕ್ರಿಕೆಟಿಗರು ಈ ಲೀಗ್‌ನಲ್ಲಿ ಭಾಗವಹಿಸಿದ್ದಾರೆ. ಮಳೆಯ ಹೊರತಾಗಿ ಪಂದ್ಯಕ್ಕೆ ಇತರ ಸವಾಲುಗಳಿವೆ.

WCL 2025: ಭಾರತ- ಪಾಕಿಸ್ತಾನ ನಡುವಿನ ಪಂದ್ಯ ರದ್ದಾಗುವ ಸಾಧ್ಯತೆ
Ind Vs Pak
ಪೃಥ್ವಿಶಂಕರ
|

Updated on:Jul 19, 2025 | 11:17 PM

Share

ಇಂಗ್ಲೆಂಡ್‌ನಲ್ಲಿ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ( World Championship of Legends) ಲೀಗ್​ನ ಎರಡನೇ ಆವೃತ್ತಿ ಆರಂಭವಾಗಿದೆ. ಈ ಲೀಗ್​ನಲ್ಲಿ ​ಪ್ರಪಂಚದಾದ್ಯಂತದ ಮಾಜಿ ಸ್ಟಾರ್ ಆಟಗಾರರು ಭಾಗವಹಿಸುತ್ತಿದ್ದಾರೆ. ಐದು ತಂಡಗಳು ಭಾಗವಹಿಸುತ್ತಿರುವ ಈ ಲೀಗ್​ನ ಹೈವೋಲ್ಟೇಜ್ ಪಂದ್ಯ ಇದೇ ಜುಲೈ 20 ರಂದು, ಇಂಡಿಯಾ ಚಾಂಪಿಯನ್ಸ್ ಮತ್ತು ಪಾಕಿಸ್ತಾನ ಚಾಂಪಿಯನ್ಸ್ (India vs Pakistan) ನಡುವೆ ನಡೆಯಲಿದೆ. ಈ ಪಂದ್ಯ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದ್ದು, ಭಾರತದ ಕಾಲಮಾನ ರಾತ್ರಿ 9 ಗಂಟೆಗೆ ಆರಂಭವಾಗಲಿದೆ. ಆದಾಗ್ಯೂ ಈ ಪಂದ್ಯದಿಂದ ಭಾರತದ ಮೂವರು ಆಟಗಾರರಾದ ಹರ್ಭಜನ್ ಸಿಂಗ್ ಹಾಗೂ ಯುಸೂಫ್ ಪಠಾಣ್ ಮತ್ತು ಇರ್ಫಾನ್ ಪಠಾಣ್ ಹಿಂದೆ ಸರಿದಿದ್ದಾರೆ. ಈ ನಡುವೆ ಈ ಪಂದ್ಯ ಮಳೆಯಿಂದಾಗಿ ರದ್ದಾಗುವ ಸಾಧ್ಯತೆಗಳು ಹೆಚ್ಚಿವೆ.

ಪಂದ್ಯಕ್ಕೆ ಮಳೆ ಅಡ್ಡಿ?

ಇಂಡಿಯಾ ಚಾಂಪಿಯನ್ಸ್ ಮತ್ತು ಪಾಕಿಸ್ತಾನ ಚಾಂಪಿಯನ್ಸ್ ನಡುವಿನ ಪಂದ್ಯ ಜುಲೈ 20 ರಂದು ನಡೆಯಲಿದೆ. ಆದಾಗ್ಯೂ, ಈ ಪಂದ್ಯಕ್ಕೆ ಮಳೆಯ ಭೀತಿ ಇದೆ. ಅಕ್ಯೂವೆದರ್ ವರದಿಯ ಪ್ರಕಾರ, ಜುಲೈ 20 ರಂದು ಎಡ್ಜ್‌ಬಾಸ್ಟನ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ವರದಿಯ ಪ್ರಕಾರ, ಮಳೆಯಾಗುವ ಸಾಧ್ಯತೆ ಶೇ. 55 ರಷ್ಟು ಇದೆ. ಗಾಳಿ ಗಂಟೆಗೆ 18 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ. ಆರ್ದ್ರತೆ ಶೇ. 64 ರಷ್ಟಿರುತ್ತದೆ. ಹಗಲಿನ ತಾಪಮಾನ ಶೇ. 22 ರಷ್ಟಿರುತ್ತದೆ. ಹವಾಮಾನ ವರದಿಯ ಪ್ರಕಾರ, ಈ ಪಂದ್ಯವನ್ನು ರದ್ದುಗೊಳಿಸಬಹುದು. ಜುಲೈ 19 ರಂದು, ಅಂದರೆ ಇಂದು, ಈ ಲೀಗ್‌ನ ಪಂದ್ಯವು ಇಂಗ್ಲೆಂಡ್ ಚಾಂಪಿಯನ್ಸ್ ಮತ್ತು ಆಸ್ಟ್ರೇಲಿಯಾ ಚಾಂಪಿಯನ್ಸ್ ನಡುವೆ ಎಡ್ಜ್‌ಬಾಸ್ಟನ್‌ನಲ್ಲಿಯೇ ನಡೆಯಲಿದೆ.

WCL 2025: ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ಹಿಂದೆ ಸರಿದ ಹರ್ಭಜನ್ ಹಾಗೂ ಪಠಾಣ್ ಬ್ರದರ್ಸ್

ಉಭಯ ತಂಡಗಳು

ಭಾರತ ಚಾಂಪಿಯನ್ ತಂಡ: ಶಿಖರ್ ಧವನ್, ಸುರೇಶ್ ರೈನಾ, ಅಂಬಟಿ ರಾಯುಡು, ಗುರುಕೀರತ್ ಸಿಂಗ್ ಮಾನ್, ಯುವರಾಜ್ ಸಿಂಗ್ (ನಾಯಕ), ಯೂಸುಫ್ ಪಠಾಣ್, ಸ್ಟುವರ್ಟ್ ಬಿನ್ನಿ, ಇರ್ಫಾನ್ ಪಠಾಣ್, ರಾಬಿನ್ ಉತ್ತಪ್ಪ, ಹರ್ಭಜನ್ ಸಿಂಗ್, ಪಿಯೂಷ್ ಚಾವ್ಲಾ, ವಿನಯ್ ಕುಮಾರ್, ಸಿದ್ಧಾರ್ಥ್ ಕೌಲ್, ಅಭಿಮನ್ಯು ಮಿಥುನ್ ಮತ್ತು ವರುಣ್ ಆರೋನ್.

ಪಾಕಿಸ್ತಾನ ಚಾಂಪಿಯನ್ ತಂಡ: ಮೊಹಮ್ಮದ್ ಹಫೀಜ್ (ನಾಯಕ), ಶೋಯೆಬ್ ಮಲಿಕ್, ಸರ್ಫ್ರಾಜ್ ಅಹ್ಮದ್, ಶರ್ಜೀಲ್ ಖಾನ್, ವಹಾಬ್ ರಿಯಾಜ್, ಆಸಿಫ್ ಅಲಿ, ಶಾಹಿದ್ ಅಫ್ರಿದಿ, ಕಮ್ರಾನ್ ಅಕ್ಮಲ್, ಅಮೀರ್ ಯಾಮಿನ್, ಸೊಹೈಲ್ ಖಾನ್, ಸೊಹೈಲ್ ತನ್ವೀರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:05 pm, Sat, 19 July 25

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ