AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಚಾಂಪಿಯನ್ಸ್​ ವಿರುದ್ಧ ಸೋತ ‘ಇಂಡಿಯಾ’

ವರ್ಲ್ಡ್​ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ ಎಂಬುದು ನಿವೃತ್ತ ಅಂತರರಾಷ್ಟ್ರೀಯ ಕ್ರಿಕೆಟ್ ತಾರೆಗಳು ಭಾಗವಹಿಸುವ ಒಂದು ಪ್ರಮುಖ ಟಿ20 ಕ್ರಿಕೆಟ್ ಪಂದ್ಯಾವಳಿಯಾಗಿದೆ. ಪ್ರಸ್ತುತ ಇದರ ಮೂರನೇ ಆವೃತ್ತಿಯು ಯುಎಇಯ ಶಾರ್ಜಾ ಮತ್ತು ದುಬೈನಲ್ಲಿ ಜರುಗುತ್ತಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಗೆದ್ದಿದ್ದ ಇಂಡಿಯಾ ಚಾಂಪಿಯನ್ಸ್ ತಂಡ 2ನೇ ಪಂದ್ಯದಲ್ಲಿ ಸೋಲನುಭವಿಸಿದೆ.

ಇಂಗ್ಲೆಂಡ್ ಚಾಂಪಿಯನ್ಸ್​ ವಿರುದ್ಧ ಸೋತ 'ಇಂಡಿಯಾ'
India Champions Image Credit source: WCL
ಝಾಹಿರ್ ಯೂಸುಫ್
|

Updated on: Oct 05, 2026 | 8:19 AM

Share

ವರ್ಲ್ಡ್ ಚಾಂಪಿಯನ್ ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಇಂಗ್ಲೆಂಡ್ ಚಾಂಪಿಯನ್ಸ್ ತಂಡವು ಇಂಡಿಯಾ ಚಾಂಪಿಯನ್ಸ್ ವಿರುದ್ಧ 21 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಯುಎಇಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ಹಂಗಾಮಿ ನಾಯಕ ಹರ್ಭಜನ್ ಸಿಂಗ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ನಿಯಮಿತ ನಾಯಕ ಯುವರಾಜ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ ಭಾರತೀಯ ಆಟಗಾರರಿಗೆ ಇಂಗ್ಲೆಂಡ್ ತಂಡದ ಬ್ಯಾಟರ್‌ಗಳು ಆರಂಭದಿಂದಲೇ ಕಠಿಣ ಸವಾಲೊಡ್ಡಿದರು.

ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಚಾಂಪಿಯನ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 192 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು. ಇಂಗ್ಲೆಂಡ್ ಪರ ನಾಯಕ ರವಿ ಬೋಪಾರ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 46 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 83 ರನ್ ಚಚ್ಚಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು.

ರವಿ ಬೋಪಾರ ಅವರಿಗೆ ಉತ್ತಮ ಸಾಥ್ ನೀಡಿದ ಸಮಿತ್ ಪಟೇಲ್ 44 ಎಸೆತಗಳಲ್ಲಿ 57 ರನ್ ಗಳಿಸಿ ಔಟಾದರು. ಭಾರತದ ಪರ ಬೌಲಿಂಗ್‌ನಲ್ಲಿ ಧವಳ್ ಕುಲಕರ್ಣಿ (2/32) ಮತ್ತು ಕರ್ನಾಟಕದ ಅಭಿಮನ್ಯು ಮಿಥುನ್ (2/27) ತಲಾ ಎರಡು ವಿಕೆಟ್ ಪಡೆದು ಗಮನ ಸೆಳೆದರು.

193 ರನ್​ಗಳ ಕಠಿಣ ಗುರಿ:

20 ಓವರ್​ಗಳಲ್ಲಿ 193 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಇಂಡಿಯಾ ಚಾಂಪಿಯನ್ಸ್ ತಂಡವು ಅಂತಿಮವಾಗಿ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 171 ರನ್‌ಗಳಷ್ಟೇ ಗಳಿಸಲು ಶಕ್ತವಾಯಿತು. ಭಾರತದ ಪರ ಅಂಬಟಿ ರಾಯುಡು 31 ಎಸೆತಗಳಲ್ಲಿ 47 ರನ್ ಗಳಿಸಿ ಏಕಾಂಗಿ ಹೋರಾಟ ಪ್ರದರ್ಶಿಸಿದರೆ, ಕೆಳ ಕ್ರಮಾಂಕದಲ್ಲಿ ಪಿಯೂಷ್ ಚಾವ್ಲಾ ಅಜೇಯ 34 ರನ್ ಗಳಿಸಿ ಜಯಕ್ಕಾಗಿ ಶ್ರಮಿಸಿದರು.

ಆದರೆ ಇಂಗ್ಲೆಂಡ್ ಪರ ನಿಖರ ದಾಳಿ ಸಂಘಟಿಸಿದ ಟೋಬಿ ರೋಲ್ಯಾಂಡ್-ಜೋನ್ಸ್, ಲಿಯಾಮ್ ಪ್ಲಂಕೆಟ್ ಮತ್ತು ರಯಾನ್ ಸೈಡ್‌ಬಾಟಮ್ ತಲಾ ಎರಡು ವಿಕೆಟ್ ಕಡಿಯುವ ಮೂಲಕ ಭಾರತದ ರನ್ ವೇಗಕ್ಕೆ ಬ್ರೇಕ್ ಹಾಕಿದರು. ಈ ಗೆಲುವಿನೊಂದಿಗೆ ಇಂಗ್ಲೆಂಡ್ ಚಾಂಪಿಯನ್ಸ್ ಟೂರ್ನಿಯಲ್ಲಿ ತನ್ನ ವಿಜಯಯಾತ್ರೆಯನ್ನು ಮುಂದುವರಿಸಿದೆ.

ಇಂಡಿಯಾ ಚಾಂಪಿಯನ್ಸ್​​ ಪ್ಲೇಯಿಂಗ್ 11: ನಮನ್ ಓಜಾ (ವಿಕೆಟ್ ಕೀಪರ್), ಅಂಬಾಟಿ ರಾಯುಡು , ಸ್ಟುವರ್ಟ್ ಬಿನ್ನಿ , ರಾಬಿನ್ ಉತ್ತಪ್ಪ , ಯೂಸುಫ್ ಪಠಾಣ್ , ಇರ್ಫಾನ್ ಪಠಾಣ್ , ರಿಷಿ ಧವನ್ , ಪಿಯೂಷ್ ಚಾವ್ಲಾ , ಧವಲ್ ಕುಲಕರ್ಣಿ , ಹರ್ಭಜನ್ ಸಿಂಗ್ (ನಾಯಕ) , ಅಭಿಮನ್ಯು ಮಿಥುನ್.

ಇದನ್ನೂ ಓದಿ: ಪ್ರಯೋಗಗಳ ಕಾಲ ಮುಗಿಯಿತು: ಸ್ಪಷ್ಟ ಗುರಿ ತಿಳಿಸಿದ ಶುಭ್​ಮನ್ ಗಿಲ್

ಇಂಗ್ಲೆಂಡ್ ಚಾಂಪಿಯನ್ಸ್​​ ಪ್ಲೇಯಿಂಗ್ 11: ರವಿ ಬೋಪಾರ (ನಾಯಕ) , ಡೇವಿಡ್ ಮಲಾನ್ , ಜೊನಾಥನ್ ಟ್ರಾಟ್ , ಸಮಿತ್ ಪಟೇಲ್ , ಟೋಬಿ ರೋಲ್ಯಾಂಡ್-ಜೋನ್ಸ್ , ಫಿಲ್ ಮಸ್ಟರ್ಡ್ (ವಿಕೆಟ್ ಕೀಪರ್) , ಲಿಯಾಮ್ ಪ್ಲಂಕೆಟ್ , ಮಾಂಟಿ ಪನೇಸರ್ , ಅಜ್ಮಲ್ ಶಹಜಾದ್ , ರಯಾನ್ ಸೈಡ್‌ಬಾಟಮ್ , ಉಸ್ಮಾನ್ ಅಫ್ಜಾಲ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ