KL Rahul: ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡಲು ಉತ್ಸುಕನಾಗಿದ್ದೇನೆ..!

India vs New zealand: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ನವೆಂಬರ್ 17 ರಿಂದ ಆರಂಭವಾಗಲಿದೆ. ಮೊದಲ ಟಿ20 ಜೈಪುರದಲ್ಲಿ ನಡೆಯಲಿದ್ದು, ಎರಡನೇ ಟಿ20 ನವೆಂಬರ್ 19 ರಂದು ರಾಂಚಿಯಲ್ಲಿ ಮತ್ತು ಮೂರನೇ ಟಿ20 ನವೆಂಬರ್ 21 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ.

KL Rahul: ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡಲು ಉತ್ಸುಕನಾಗಿದ್ದೇನೆ..!
KL Rahul-Rohit Sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 15, 2021 | 10:34 PM

ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಗಾಗಿ ಟೀಮ್ ಇಂಡಿಯಾ ಸಜ್ಜಾಗಿ ನಿಂತಿದೆ. ಅದರಲ್ಲೂ ರಾಹುಲ್ ದ್ರಾವಿಡ್ ಮುಂದಾಳತ್ವದಲ್ಲಿ ಹಾಗೂ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಚೊಚ್ಚಲ ಸರಣಿ ಆಡುತ್ತಿರುವುದು ವಿಶೇಷ. ಇತ್ತ ಟೀಮ್ ಇಂಡಿಯಾ ಆಟಗಾರರು ಕೂಡ ಹೊಸ ನಾಯಕನ ಸಾರಥ್ಯದಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್, ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡಲು ನಾವೆಲ್ಲರೂ ಉತ್ಸುಕರಾಗಿದ್ದೇವೆ ಎಂದು ತಿಳಿಸಿದ್ದಾರೆ.

ರೋಹಿತ್ ಶರ್ಮಾ ಅವರು ಎಂತಹ ನಾಯಕ ಎಂಬುದನ್ನು ನಾವು ಐಪಿಎಲ್‌ನಲ್ಲಿ ನೋಡಿದ್ದೇವೆ. ಅವರ ಅಂಕಿಅಂಶಗಳು ಕೂಡ ಎಲ್ಲವನ್ನೂ ಹೇಳುತ್ತವೆ. ಅವರಿಗೆ ಆಟದ ಬಗ್ಗೆ ಉತ್ತಮ ತಿಳುವಳಿಕೆ ಇದೆ. ಜೊತೆಗೆ ಪ್ಲ್ಯಾನಿಂಗ್ ರೂಪಿಸುವ ತಂತ್ರಗಾರಿಕೆ ಗೊತ್ತಿದೆ. ಹೀಗಾಗಿಯೇ ಅವರು ನಾಯಕನಾಗಿ ಇಷ್ಟೊಂದು ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಕೆಎಲ್ ರಾಹುಲ್ ಹೇಳಿದರು.

ಇನ್ನು ನೂತನ ಕೋಚ್ ರಾಹುಲ್ ದ್ರಾವಿಡ್ ಬಗ್ಗೆ ಮಾತನಾಡಿದ ರಾಹುಲ್, ಅವರು ನನಗೆ ಪರಿಚಿತರಾಗಿರುವುದು ನನ್ನ ಅದೃಷ್ಟ. ನನ್ನ ವೃತ್ತಿಜೀವನದ ಆರಂಭದಿಂದಲೂ, ನಾನು ಅವರ ಸಲಹೆಯನ್ನು ಅನುಸರಿಸುವ ಮೂಲಕ ಆಟವನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದೇನೆ. ಅವರ ಸಲಹೆಯಂತೆ ನನ್ನ ಬ್ಯಾಟಿಂಗ್ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸಿದ್ದೇನೆ. ಕರ್ನಾಟಕದಲ್ಲಿ ಅವರು ನಮಗೆಲ್ಲ ಸಾಕಷ್ಟು ಸಹಾಯ ಮಾಡಿದ್ದಾರೆ. ಇದೀಗ, ‘ಕೋಚ್ ಆಗಿ ಎಲ್ಲ ಯುವ ಆಟಗಾರರ ಜೊತೆಗಿದ್ದಾರೆ. ಅವರು ಮುಖ್ಯ ತರಬೇತುದಾರರಾಗಿ ಬಂದಿರುವುದರಿಂದ ನಮಗೂ ಬಹಳಷ್ಟು ಕಲಿಯುವ ಅವಕಾಶ ಸಿಕ್ಕಂತಾಗಿದೆ. ಅವರು ಎಷ್ಟು ದೊಡ್ಡ ಹೆಸರು ಮತ್ತು ದೇಶಕ್ಕಾಗಿ ಅವರು ಏನು ಮಾಡಿದ್ದಾರೆ ಎಂಬುದು ನಮಗೆಲ್ಲರಿಗೂ ತಿಳಿದಿದೆ ಎಂದು ಕೆಎಲ್ ರಾಹುಲ್ ತಿಳಿಸಿದರು.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ನವೆಂಬರ್ 17 ರಿಂದ ಆರಂಭವಾಗಲಿದೆ. ಮೊದಲ ಟಿ20 ಜೈಪುರದಲ್ಲಿ ನಡೆಯಲಿದ್ದು, ಎರಡನೇ ಟಿ20 ನವೆಂಬರ್ 19 ರಂದು ರಾಂಚಿಯಲ್ಲಿ ಮತ್ತು ಮೂರನೇ ಟಿ20 ನವೆಂಬರ್ 21 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ.

ನ್ಯೂಜಿಲೆಂಡ್ ಟಿ20 ಸರಣಿಗಾಗಿ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಇಶಾನ್ ಕಿಶನ್, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಆರ್ ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: T20 World Cup Winners: 7 ಟಿ20 ವಿಶ್ವಕಪ್​: ಚಾಂಪಿಯನ್​ ಪಟ್ಟಕ್ಕೇರಿದ 6 ತಂಡಗಳು

ಇದನ್ನೂ ಓದಿ:  Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!

(We all are excited to play under Rohit Sharma: KL Rahul)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ