ಟಿ20 ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾ (Team India) ಮುಂದಿರುವುದು ಕೇವಲ 6 ಟಿ20 ಪಂದ್ಯಗಳು ಮಾತ್ರ. ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿರುವ ಭಾರತ ತಂಡವು ಇದಾದ ಬಳಿಕ ಏಕದಿನ ಹಾಗೂ ಟೆಸ್ಟ್ ಸರಣಿ ಆಡಲಿದೆ. ಇನ್ನು ಜನವರಿಯಲ್ಲಿ ಅಫ್ಘಾನಿಸ್ತಾನ್ ವಿರುದ್ಧ 3 ಟಿ20 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಭಾರತ ತಂಡವು ಟಿ20 ಪಂದ್ಯಗಳನ್ನಾಡಲಿರುವುದು ಟಿ20 ವಿಶ್ವಕಪ್ನಲ್ಲಿ ಎಂಬುದು ವಿಶೇಷ.
ಆದರೆ ಟಿ20 ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾ ಮುಂದೆ ಕೇವಲ 6 ಪಂದ್ಯಗಳಿರುವುದು ನಮಗೆ ಯಾವುದೇ ಸಮಸ್ಯೆಯನ್ನುಂಟು ಮಾಡುವುದಿಲ್ಲ ಎಂದಿದ್ದಾರೆ ಭಾರತ ತಂಡದ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್.
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ಸೂರ್ಯಕುಮಾರ್, ವಿಶ್ವಕಪ್ಗೂ ಮುನ್ನ ಟಿ20 ಪಂದ್ಯಗಳ ಕೊರತೆಯು ಭಾರತ ತಂಡವನ್ನು ಬಾಧಿಸುವುದಿಲ್ಲ. ಏಕೆಂದರೆ ನಮ್ಮ ಮುಂದೆ ಐಪಿಎಲ್ ಇದೆ.
ನಾವು ವಿಶ್ವಕಪ್ಗೂ ಮುನ್ನ ಸೀಮಿತ ಪಂದ್ಯಗಳನ್ನು ಹೊಂದಿದ್ದೇವೆ ನಿಜ. ಆದರೆ ಐಪಿಎಲ್ನ 14 ಪಂದ್ಯಗಳ ಮೂಲಕ ನಾವು ಟಿ20 ವಿಶ್ವಕಪ್ಗೆ ತಯಾರಿ ನಡೆಸಬಹುದು. ಈ ಮೂಲಕ ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗಲು ನಮ್ಮ ಆಟಗಾರರಿಗೆ ಉತ್ತಮ ಆಯ್ಕೆಯಿದೆ. ಹೀಗಾಗಿ ಕೇವಲ 6 ಪಂದ್ಯಗಳಿರುವುದು ಭಾರತೀಯ ಆಟಗಾರರಿಗೆ ಸಮಸ್ಯೆಯಾಗುವುದಿಲ್ಲ ಎಂದು ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ.
ಅದರಂತೆ ಟಿ20 ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾ ಆಡಲಿರುವ 6 ಪಂದ್ಯಗಳ ಮೊದಲ ಮ್ಯಾಚ್ ಇಂದು (ಡಿ.10) ಡರ್ಬನ್ನಲ್ಲಿ ನಡೆಯಲಿದೆ. ಸೌತ್ ಆಫ್ರಿಕಾ ವಿರುದ್ಧದ ಈ ಸರಣಿಯ ಮೂಲಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ಗಾಗಿ ತಯಾರಿಗಳನ್ನು ಆರಂಭಿಸಲಿದೆ ಎನ್ನಬಹುದು. ಹೀಗಾಗಿ ಈ ಸರಣಿಯು ಭಾರತದ ಪಾಲಿಗೆ ತುಂಬಾ ಮಹತ್ವದ ಸರಣಿಯಾಗಿ ಮಾರ್ಪಟ್ಟಿದೆ.
ಸೌತ್ ಆಫ್ರಿಕಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗಳಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ವಿಶ್ರಾಂತಿಯ ಕಾರಣ ಈ ಇಬ್ಬರು ಆಟಗಾರರು ಸೀಮಿತ ಓವರ್ಗಳ ಸರಣಿಗಳಿಂದ ಹೊರಗುಳಿದಿದ್ದು, ಇದಾಗ್ಯೂ ಟೆಸ್ಟ್ ಸರಣಿ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ವೆಸ್ಟ್ ಇಂಡೀಸ್-ಯುಎಸ್ಎ ಆತಿಥ್ಯವಹಿಸಲಿರುವ ಟಿ20 ವಿಶ್ವಕಪ್ ಜೂನ್ 4 ರಿಂದ ಶುರುವಾಗಲಿದೆ. ಅಂದರೆ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ.
ಭಾರತ-ಸೌತ್ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ:
ಇದನ್ನೂ ಓದಿ: ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ
ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್ , ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.