Dale Steyn: CSK ಪ್ಲೇಆಫ್ ಪ್ರವೇಶಿಸಿದೆ, ಆದರೆ ಇದ್ರಲ್ಲಿ ಧೋನಿ ಕೊಡುಗೆ ಏನೂ ಇಲ್ಲ
MS DHONI: ಪ್ರಸಕ್ತ ಸಾಲಿನ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಎಂಎಸ್ ಧೋನಿ ಬ್ಯಾಟ್ಸ್‌ಮನ್ ಆಗಿ ಸಂಪೂರ್ಣ ವಿಫಲರಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ಈಗಾಗಲೇ ಎಲ್ಲಾ ತಂಡಗಳು 12 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK), ಡೆಲ್ಲಿ ಕ್ಯಾಪಿಟಲ್ಸ್ (DC) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಪ್ಲೇ ಆಫ್ ಪ್ರವೇಶಿಸಿದೆ. ಇನ್ನು ನಾಲ್ಕನೇ ಸ್ಥಾನಕ್ಕಾಗಿ ಮುಂಬೈ, ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಇತ್ತ ಸಿಎಸ್ಕೆ ತಂಡವು ಭರ್ಜರಿ ಪ್ರದರ್ಶನದೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಚೆನ್ನೈ ತಂಡದ ಈ ಪ್ರದರ್ಶನದ ಬಗ್ಗೆ ಮಾತನಾಡಿರುವ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಡೇಲ್ ಸ್ಟೇನ್ (Dale Steyn) ಸಿಎಸ್ಕೆ ತಂಡದ ನಾಯಕನ ಪ್ರದರ್ಶನದ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ.
ಪ್ರಸಕ್ತ ಸಾಲಿನ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಎಂಎಸ್ ಧೋನಿ ಬ್ಯಾಟ್ಸ್‌ಮನ್ ಆಗಿ ಸಂಪೂರ್ಣ ವಿಫಲರಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಡೇಲ್ ಸ್ಟೇನ್ ‘ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಧೋನಿ ಬಾಸ್. ಪ್ರತಿ ಬಾರಿ ಸಿಎಸ್ಕೆ ತಂಡದ ಬಗ್ಗೆ ಯೋಚಿಸಿದಾಗಲೆಲ್ಲ ಧೋನಿ ಕಣ್ಮುಂದೆ ಬರುತ್ತಾರೆ. ಈ ಬಾರಿಯ ಟೂರ್ನಿಯಲ್ಲಿ ಕೆಲ ಪಂದ್ಯಗಳು ಬಾಕಿಯಿರುವಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ ಪ್ರವೇಶಿಸಿದೆ. ಆದರೆ ಈ ಎಲ್ಲಾ ಗೆಲುವಿನಲ್ಲಿ ಧೋನಿ ಕೊಡುಗೆ ಏನೂ ಇಲ್ಲ. ಅಂದರೆ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಪ್ರವೇಶಕ್ಕೆ ಧೋನಿ ಯಾವುದೇ ಕೊಡುಗೆಗಳನ್ನು ನೀಡಿಲ್ಲ ಎಂದು ಡೇಲ್ ಸ್ಟೇನ್ ಹೇಳಿದ್ದಾರೆ.
ಧೋನಿಯ ವೈಫಲ್ಯದ ಹೊರತಾಗಿಯೂ ಸಿಎಸ್ಕೆ ಪ್ಲೇಆಫ್ ಹಂತಕ್ಕೇರಿದೆ. ಇದಾಗ್ಯೂ ಅವರು ಫೈನಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ರನ್ಗಳಿಸಿದರೆ ಮುಂದಿನ ಸೀಸನ್ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ ಮುಂದುವರೆಯಲಿದ್ದಾರೆ. ಇದರ ಹೊರತಾಗಿ ಅವರೇ ಮುಂದಿನ ಸೀಸನ್ನಲ್ಲಿ ಸಿಎಸ್ಕೆಯನ್ನು ಮುನ್ನಡೆಸಲಿದ್ದಾರೆ ಎಂದು ಹೇಳಲಾಗುವುದಿಲ್ಲ ಎಂದು ಸ್ಟೇನ್ ಅಭಿಪ್ರಾಯಪಟ್ಟರು.
ಏಕೆಂದರೆ ಧೋನಿಯ ವೈಫಲ್ಯದ ಹೊರತಾಗಿಯೂ ಸಿಎಸ್ಕೆ ತಂಡವು ನಿರಾಯಾಸವಾಗಿ ಪ್ಲೇ ಆಫ್ ಪ್ರವೇಶಿಸಿದೆ. ಹೀಗಾಗಿ ಫ್ರಾಂಚೈಸಿ ಕೂಡ ಈ ಬಗ್ಗೆ ಚಿಂತಿಸಲಿದೆ ಎಂದು ಡೇಲ್ ಸ್ಟೇನ್ ತಿಳಿಸಿದರು. ಇನ್ನು ಈ ಸೀಸನ್ನಲ್ಲಿ ಮಹೇಂದ್ರ ಸಿಂಗ್ ಧೋನಿ 12 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 66 ರನ್ ಮಾತ್ರ. ಇದೇ ಕಾರಣದಿಂದ ಸ್ಟೇನ್ ಪ್ರಸ್ತುತ ಸಿಎಸ್ಕೆ ತಂಡವು ಧೋನಿಯನ್ನು ಅವಲಂಭಿಸಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: David Warner: SRH ತಂಡದಲ್ಲಿಲ್ಲ ಸ್ಥಾನ: ಪ್ರೇಕ್ಷಕನಾಗಿ ಕಾಣಿಸಿಕೊಂಡ ಡೇವಿಡ್ ವಾರ್ನರ್
ಇದನ್ನೂ ಓದಿ: IPL 2021: ಐಪಿಎಲ್ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್
ಇದನ್ನೂ ಓದಿ: KL Rahul: ಕೆಎಲ್ ರಾಹುಲ್ ಟೀಮ್ ಇಂಡಿಯಾಗೆ ನಾಯಕನಾಗಬಾರದು ಎಂದ ಮಾಜಿ ಕ್ರಿಕೆಟಿಗ
(We haven’t see MS Dhoni do anything: Dale Steyn)