ಟಿ20 ವಿಶ್ವಕಪ್ 2021 ರ ಹೀನಾಯ ಸೋಲಿನ ಬಳಿಕ ಭಾರತ ತಂಡವು ಪಾಕಿಸ್ತಾನ್ ವಿರುದ್ದ ಯಾವುದೇ ಪಂದ್ಯವಾಡಿಲ್ಲ. ಉಭಯ ದೇಶಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆಯದ ಕಾರಣ, ಮತ್ತೊಮ್ಮೆ ಮುಖಾಮುಖಿಗೆ ಐಸಿಸಿ ಟಿ20 ವಿಶ್ವಕಪ್ ತನಕ ಕಾಯಲೇಬೇಕು. ಆದರೆ ಇದರ ನಡುವೆ ಏಷ್ಯಾ ಕಪ್ ನಡೆಸಲು ಏಷ್ಯನ್ ಕ್ರಿಕೆಟ್ ಅಸೋಷಿಯೇಷನ್ ಮುಂದಾಗಿದೆ. ಅದರಂತೆ ಟಿ20 ವಿಶ್ವಕಪ್ಗೂ ಮುನ್ನವೇ ಈ ಬಾರಿ ಏಷ್ಯಾಕಪ್ ನಡೆಯಲಿದೆ. ಈ ಬಾರಿ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆಯಲಿದ್ದು, ಹೀಗಾಗಿ ಪಾಕಿಸ್ತಾನ್ ವಿರುದ್ದ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ.
ವಿಶೇಷ ಎಂದರೆ ಏಷ್ಯಾಕಪ್ನಲ್ಲಿ ಭಾರತ-ಪಾಕಿಸ್ತಾನ್ ಗ್ರೂಪ್ ಹಂತದಲ್ಲಿ ಮೊದಲು ಮುಖಾಮುಖಿಯಾಗಲಿದೆ. ಇದಾದ ಬಳಿಕ ಸೂಪರ್ ಫೋರ್ ಹಂತ ನಡೆಯಲಿದೆ. ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ಸೂಪರ್-4 ಆಡುವುದು ಬಹುತೇಕ ಖಚಿತ ಎನ್ನಬಹುದು. ಹೀಗಾಗಿ ಗ್ರೂಪ್ ಹಂತದಲ್ಲಿ ಹಾಗೂ ಸೂಪರ್-4 ಹಂತದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುವ ಸಾಧ್ಯತೆಯಿದೆ. ಹಾಗೆಯೇ ಎರಡೂ ತಂಡಗಳು ಫೈನಲ್ಗೆ ಪ್ರವೇಶಿಸಿದರೆ ಮೂರನೇ ಬಾರಿ ಮುಖಾಮುಖಿಯಾಗಬಹುದು.
ಇದನ್ನೂ ಓದಿ: ಸೌತ್ ಆಫ್ರಿಕಾ ವಿರುದ್ದ ಕೆಎಲ್ ರಾಹುಲ್ಗೆ ಅಗ್ನಿಪರೀಕ್ಷೆ
ಇನ್ನು ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲೂ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಅಕ್ಟೋಬರ್ 23 ರಂದು ನಡೆಯಲಿರುವ ಸೂಪರ್-12 ಪಂದ್ಯದ ಮೂಲಕ ಉಭಯ ತಂಡಗಳು ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿರುವುದು ವಿಶೇಷ. ಇದಾಗಿ ಎರಡೂ ತಂಡಗಳು ಫೈನಲ್ ಪ್ರವೇಶಿಸಿದರೆ ಮತ್ತೊಮ್ಮೆ ಮುಖಾಮುಖಿಯಾಗಬಹುದು. ಅಂದರೆ ಏಷ್ಯಾಕಪ್ನಲ್ಲಿ 3 ಬಾರಿ ಹಾಗೂ ಟಿ20 ವಿಶ್ವಕಪ್ನಲ್ಲಿ 2 ಬಾರಿ ಮುಖಾಮುಖಿಯಾಗುವ ಸಾಧ್ಯತೆಯಿದೆ. ಈ ಮೂಲಕ 2022 ರಲ್ಲಿ ಭಾರತ-ಪಾಕಿಸ್ತಾನ್ ನಡುವಣ 5 ಪಂದ್ಯಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ಒದಗಿ ಬಂದರೂ ಅಚ್ಚರಿಪಡಬೇಕಿಲ್ಲ.
ಇದಾಗ್ಯೂ ಏಷ್ಯಾಕಪ್ನಲ್ಲಿಹಾಗೂ ಟಿ20 ವಿಶ್ವಕಪ್ನಲ್ಲಿ ಒಂದು ಬಾರಿ ಭಾರತ-ಪಾಕಿಸ್ತಾನ್ ಮುಖಾಮುಖಿ ಖಚಿತವಾಗಿದ್ದು, ಹೀಗಾಗಿ ಈ ಎರಡೂ ಪಂದ್ಯಗಳಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಈ ಭಾರತ-ಪಾಕಿಸ್ತಾನ್ ನಡುವಣ ಈ ಎರಡು ಪಂದ್ಯಗಳಿಂದ ಹೆಚ್ಚುವರಿ 3 ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ಒದಗಿ ಬರಲಿದೆಯಾ ಕಾದು ನೋಡಬೇಕಿದೆ.
ಅಂದಹಾಗೆ ಏಷ್ಯಾಕಪ್ ವೇಳಾಪಟ್ಟಿ ಇನ್ನೂ ಕೂಡ ಪ್ರಕಟವಾಗಿಲ್ಲ. ಹಾಗೆಯೇ 2022ರ ಟಿ20 ವಿಶ್ವಕಪ್ನಲ್ಲಿ ಭಾರತ ತಂಡದ ವೇಳಾಪಟ್ಟಿ ಈ ಕೆಳಗಿನಂತಿದೆ.
ಟಿ20 ವಿಶ್ವಕಪ್ 2022ರ ಗ್ರೂಪ್ ಮತ್ತು ಭಾರತ ತಂಡದ ವೇಳಾಪಟ್ಟಿ:
ಸೂಪರ್ 12 ಗ್ರೂಪ್:
ಟೀಮ್ ಇಂಡಿಯಾದ ಪಂದ್ಯಗಳ ವೇಳಾಪಟ್ಟಿ:
ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.