ಕ್ರಿಕೆಟ್ ದಿಗ್ಗಜನಿಗೆ ಕೊಟ್ಟ ಮಾತು ಉಳಿಸಿದ ಅಫ್ಘಾನ್ ಪಡೆ

T20 World Cup 2024: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಬಗ್ಗು ಬಡಿದು ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದೆ. ಜೂನ್ 26 ರಂದು ಟ್ರಿನಿಡಾಡ್- ಟೊಬಾಗೊದ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ಸೌತ್ ಆಫ್ರಿಕಾವನ್ನು ಎದುರಿಸಲಿದೆ.

ಕ್ರಿಕೆಟ್ ದಿಗ್ಗಜನಿಗೆ ಕೊಟ್ಟ ಮಾತು ಉಳಿಸಿದ ಅಫ್ಘಾನ್ ಪಡೆ
Brian Lara-Afghanistan
Follow us
ಝಾಹಿರ್ ಯೂಸುಫ್
|

Updated on: Jun 25, 2024 | 8:54 PM

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ ಹಲವು ಅಚ್ಚರಿಯ ಫಲಿತಾಂಶಕ್ಕೆ ಸಾಕ್ಷಿಯಾಗಿದೆ. ಈ ಅಚ್ಚರಿಗಳ ನಡುವೆ ಬಲಿಷ್ಠರನ್ನೇ ಬಗ್ಗು ಬಡಿದು ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದೆ. ಆದರೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೇರಲಿದೆ  ಎಂದು ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಭವಿಷ್ಯ ನುಡಿದಿದ್ದರು ಎಂಬುದು ವಿಶೇಷ. ಹಲವು ಮಾಜಿ ಕ್ರಿಕೆಟಿಗರು ಸೆಮಿಫೈನಲ್​ಗೆ ಪ್ರವೇಶಿಸುವ 4 ತಂಡಗಳ ಪಟ್ಟಿಯಲ್ಲಿ ಬಲಿಷ್ಠ ಪಡೆಗಳನ್ನೇ ಹೆಸರಿಸಿದ್ದರು.  ಆದರೆ ಬ್ರಿಯಾನ್ ಲಾರಾ ಹೆಸರಿಸಿದ ನಾಲ್ಕು ತಂಡಗಳಲ್ಲಿ ಅಫ್ಘಾನಿಸ್ತಾನ್ ಕೂಡ ಇತ್ತು. ಅಂದು ಅವರ ಆಯ್ಕೆ ಬಗ್ಗೆ ಅನೇಕರು ಅಚ್ಚರಿಯನ್ನು ಸಹ ವ್ಯಕ್ತಪಡಿಸಿದ್ದರು.

ಆದರೀಗ ಬ್ರಿಯಾನ್ ಲಾರಾ ಅವರ ಭವಿಷ್ಯ ನಿಜವಾಗಿದೆ. ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್ ಹಂತಕ್ಕೇರಿದೆ. ಈ ಮೂಲಕ ಕ್ರಿಕೆಟ್ ದಿಗ್ಗಜನ ಊಹೆಯನ್ನು ನಿಜವಾಗಿಸಿದ್ದಾರೆ.

ಕೊಟ್ಟ ಮಾತು ಉಳಿಸಿದ ಅಫ್ಘಾನ್ ಪಡೆ:

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಅಫ್ಘಾನಿಸ್ತಾನ್ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಬ್ರಿಯಾನ್ ಲಾರಾ ನೀಡಿದ ಹೇಳಿಕೆಯನ್ನು ಅಫ್ಘಾನ್ ಆಟಗಾರರು ಕೂಡ ಗಮನಿಸಿದ್ದರು. ಅಲ್ಲದೆ ವಿಶ್ವಕಪ್ ಸಮಾರಂಭದಲ್ಲಿ ಲಾರಾ ಅವರನ್ನು ಭೇಟಿಯಾಗಿದ್ದ ಅಫ್ಘಾನ್ ತಂಡದ ನಾಯಕ ರಶೀದ್ ಖಾನ್ ನಿಮ್ಮ ಆಯ್ಕೆ ಸರಿ ಇದೆ ಎಂಬುದನ್ನು ನಾವು ನಿರೂಪಿಸುತ್ತೇವೆ ಎಂದು ಮಾತು ಕೊಟ್ಟಿದ್ದರು.

ಈ ಬಗ್ಗೆ ಮಾತನಾಡಿರುವ ರಶೀದ್ ಖಾನ್, ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಎಂಟ್ರಿ ಕೊಡಲಿದೆ ಎಂದು ಹೇಳಿದ ಏಕೈಕ ವ್ಯಕ್ತಿ ಬ್ರಿಯಾನ್ ಲಾರಾ. ನಾವು ಅವರನ್ನು ಸ್ವಾಗತ ಸಮಾರಂಭದಲ್ಲಿ ಭೇಟಿಯಾದಾಗ, ನಾವು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ ಎಂದು ಅವರಿಗೆ ಹೇಳಿದ್ದೆ. ಇದೀಗ ನಾವು ಹೇಳಿದಂತೆ ನಿರೂಪಿಸಿದ್ದೇವೆ. ಕ್ರಿಕೆಟ್ ದಿಗ್ಗಜನ ಹೇಳಿಕೆಯನ್ನು ಸಾಬೀತುಪಡಿಸಿದ್ದೇವೆ ಎಂದು ರಶೀದ್ ಖಾನ್ ಹೇಳಿದ್ದಾರೆ.

ಒಬ್ಬ ಲೆಜೆಂಡ್ ಆಟಗಾರನಿಂದ ಒಂದು ತಂಡವು ಶ್ರೇಷ್ಠವಾಗಿದೆ. ಅವರು ಸೆಮಿಫೈನಲ್ ಪ್ರವೇಶಿಸುತ್ತದೆ ಎಂಬ ಹೇಳಿಕೆ ಕೇಳಿದಾಗ, ಅದು ನಮಗೆ ಸಾಕಷ್ಟು ಶಕ್ತಿಯನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ ಅದಕ್ಕೆ ನಾವು ಸಮರ್ಥರಾಗಿದ್ದೇವೆ ಎಂಬ ನಂಬಿಕೆ ಮೂಡುತ್ತದೆ. ಅದರಂತೆ ಬ್ರಿಯಾನ್ ಲಾರಾ ಅವರ ಹೇಳಿಕೆಯು ನಮ್ಮಲ್ಲಿ ಹೊಸ ವಿಶ್ವಾಸ ಮೂಡಿಸಿತ್ತು. ಇದೀಗ ಅವರ ಹೇಳಿಕೆಯಂತೆ ನಾವು ಸೆಮಿಫೈನಲ್​ಗೆ ಪ್ರವೇಶಿಸಿದ್ದೇವೆ ಎಂದು ರಶೀದ್ ಖಾನ್ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: IND vs ENG: ಇಂಗ್ಲೆಂಡ್ ತಂಡದ ಚಿಂತೆ ಹೆಚ್ಚಿಸಿದ 4 ಗಂಟೆ 16 ನಿಮಿಷಗಳು..!

ಅಫ್ಘಾನ್ ಪಡೆಗೆ ರೋಚಕ ಜಯ:

ಬಾಂಗ್ಲಾದೇಶ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವು ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 20 ಓವರ್​ಗಳಲ್ಲಿ 115 ರನ್ ಕಲೆಹಾಕಿತು. ಮಳೆಯ ಕಾರಣ 19 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ 114 ರನ್​ಗಳ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 105 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡವು ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 8 ರನ್​ಗಳ ರೋಚಕ ಜಯ ಸಾಧಿಸಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್