Virat Kohli: ಇದಪ್ಪಾ ಕ್ರೇಜ್ ಅಂದ್ರೆ: ಮತ್ತೆ ಪಾಕಿಸ್ತಾನದಲ್ಲಿ ರಾರಾಜಿಸಿದ ವಿರಾಟ್ ಕೊಹ್ಲಿ ಪೋಸ್ಟರ್
Virat Kohli: ಪಾಕಿಸ್ತಾನದಲ್ಲಿ ವಿರಾಟ್ ಕೊಹ್ಲಿ ಪೋಸ್ಟರ್ಗಳು ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಪಾಕಿಸ್ತಾನ್ ಸೂಪರ್ ಲೀಗ್ನಲ್ಲೂ ಕೊಹ್ಲಿಯ ಪೋಸ್ಟರ್ಗಳು ರಾರಾಜಿಸಿದ್ದವು.
ಟೀಮ್ ಇಂಡಿಯಾ (Team India) ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಶತಕ ಬಾರಿಸಿ 2 ವರ್ಷಗಳೇ ಕಳೆದಿವೆ. ಕೊನೆಯ ಬಾರಿ ಕಿಂಗ್ ಕೊಹ್ಲಿಯ ಬ್ಯಾಟ್ನಿಂದ ಸೆಂಚುರಿ ಮೂಡಿಬಂದಿದ್ದು 2019 ರಲ್ಲಿ. ಈಡನ್ ಗಾರ್ಡನ್ ಮೈದಾನದಲ್ಲಿ ನಡೆದಿದ್ದ ಬಾಂಗ್ಲಾದೇಶದ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೊನೆಯ ಬಾರಿ ಶತಕ ಬಾರಿಸಿದ್ದರು. ಇದಾದ ಬಳಿಕ 72 ಇನಿಂಗ್ಸ್ ಆಡಿರುವ ಕೊಹ್ಲಿ ಒಂದೇ ಒಂದು ಟೆಸ್ಟ್ ಶತಕ ಸಿಡಿಸಿಲ್ಲ ಎಂಬುದೇ ಅಚ್ಚರಿ. ಅದರಲ್ಲೂ ಪ್ರಸ್ತುತ ನಡೆಯುತ್ತಿರುವ ಶ್ರೀಲಂಕಾ ವಿರುದ್ದದ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೊಹ್ಲಿ 100 ಟೆಸ್ಟ್ಗಳನ್ನು ಪೂರೈಸಿದ್ದರು. ಈ ಐತಿಹಾಸಿಕ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್ನಿಂದ ಶತಕ ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ ಕಾದಿತ್ತು. ಅದು ಕೇವಲ ಭಾರತದಲ್ಲಿನ ಅಭಿಮಾನಿಗಳಿಗೆ ಮಾತ್ರವಲ್ಲ. ಇತ್ತ ಲಂಕಾ ಸ್ಪಿನ್ನರ್ ಲಸಿತ್ ಎಂಬುಲ್ಡೇನಿಯಾ ಎಸೆತದಲ್ಲಿ ಕೊಹ್ಲಿ ಔಟಾಗುತ್ತಿದ್ದಂತೆ ಪಾಕಿಸ್ತಾನದ ಅಭಿಮಾನಿಗಳು ಕೂಡ ನಿರಾಸೆಗೊಳಗಾಗಿದ್ದರು. ಹೀಗಾಗಿಯೇ ಪಾಕಿಸ್ತಾನ್-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಪಂದ್ಯದ ವೇಳೆ ವಿರಾಟ್ ಕೊಹ್ಲಿಯ ಪೋಸ್ಟರ್ಗಳು ರಾರಾಜಿಸಿದ್ದವು.
ಹೌದು, ರಾವಲ್ಪಿಂಡಿಯಲ್ಲಿ ನಡೆದ ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಅಭಿಮಾನಿಗಳು ಪೋಸ್ಟರ್ ಮೂಲಕ ಗಮನ ಸೆಳೆದಿದ್ದರು. ಪ್ರೇಕ್ಷಕರ ಗ್ಯಾಲರಿಯಲ್ಲಿ ಅಭಿಮಾನಿಯೋರ್ವ “ನಿಮ್ಮ 71ನೇ ಶತಕ ಪಾಕಿಸ್ತಾನದಲ್ಲಿ ಬಾರಿಸಬೇಕು” ಎಂದು ಪೋಸ್ಟರ್ ಹಿಡಿದು ನಿಂತಿದ್ದನು. ಇದೀಗ ಕೊಹ್ಲಿಯ ಪಾಕ್ ಅಭಿಮಾನಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮತ್ತೊಂದು ಪೋಸ್ಟರ್‌ನಲ್ಲಿ ಅಕ್ಟೋಬರ್ 23 ರಂದು ನಡೆಯಲಿರುವ ಭಾರತ-ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್ 2022 ರಲ್ಲಿ ರೋಹಿತ್ ಶರ್ಮಾ ವರ್ಸಸ್ ಶಾಹೀನ್ ಅಫ್ರಿದಿ ಮುಖಾಮುಖಿಯಾಗಲಿದೆ ಎಂದು ಬರೆಯಲಾಗಿತ್ತು.
Some Virat Kohli fans have made a wish during Rawalpindi Test at Pindi Cricket Stadium #PAKvAUS pic.twitter.com/mrKEaPFQEe
— Arfa Feroz Zake (@ArfaSays_) March 6, 2022
ಅಂದಹಾಗೆ ಪಾಕಿಸ್ತಾನದಲ್ಲಿ ವಿರಾಟ್ ಕೊಹ್ಲಿ ಪೋಸ್ಟರ್ಗಳು ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಪಾಕಿಸ್ತಾನ್ ಸೂಪರ್ ಲೀಗ್ನಲ್ಲೂ ಕೊಹ್ಲಿಯ ಪೋಸ್ಟರ್ಗಳು ರಾರಾಜಿಸಿದ್ದವು. ಪಿಎಸ್ಎಲ್ ಟೂರ್ನಿಯಲ್ಲಿನ ಮುಲ್ತಾನ್ ಸುಲ್ತಾನ್ಸ್ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ನಡುವಿನ ಪಂದ್ಯದ ವೇಳೆ ಕೊಹ್ಲಿಯ ಪೋಸ್ಟರ್ಗಳು ಕಾಣಿಸಿಕೊಂಡಿದ್ದವು. ಮುಲ್ತಾನ್‌ನ ಬ್ಯಾಟ್ಸ್‌ಮನ್‌ಗಳಾದ ಶಾನ್ ಮಸೂದ್ ಮತ್ತು ಮೊಹಮ್ಮದ್ ರಿಜ್ವಾನ್ ಅರ್ಧಶತಕಗಳೊಂದಿಗೆ ಕ್ರೀಸ್‌ನಲ್ಲಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆಯುತ್ತಿದ್ದರು. ಆ ವೇಳೆ ಕ್ರೀಡಾಂಗಣದಲ್ಲಿ ಪಾಕ್ ಕ್ರಿಕೆಟ್ ಅಭಿಮಾನಿಗಳು ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಪೋಸ್ಟರ್ ಗಳನ್ನೂ ತೋರಿಸಿ ಸಂಭ್ರಮಿಸಿದ್ದರು. ಅಷ್ಟೇ ಅಲ್ಲದೆ ಈ ಪೋಸ್ಟರ್‌ನಲ್ಲಿ ಅಭಿಮಾನಿಯೊಬ್ಬ ಪಾಕಿಸ್ತಾನದಲ್ಲಿ ನಿಮ್ಮ ಶತಕವನ್ನು ನೋಡಬೇಕೆಂದು ಎಂದು ಬರೆಕೊಂಡಿದ್ದ. ಇದೀಗ ಪಾಕಿಸ್ತಾನ್-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಪಂದ್ಯದ ವೇಳೆಯೂ ವಿರಾಟ್ ಕೊಹ್ಲಿಯ ಪೋಸ್ಟರ್ಗಳು ರಾರಾಜಿಸಿವೆ.
Craze beyond boundaries for King Kohli . Virat Kohli Fan found with a banner in #PSL ! GOAT for the Reason ?? #KingKohli @imVkohli pic.twitter.com/wxliRCwyEd
— Virat-Vijay Fanatic ❁ (@ViratvijayFan) February 18, 2022
ಒಟ್ಟಿನಲ್ಲಿ ವಿರಾಟ್ ಕೊಹ್ಲಿಯ ಭಾರತೀಯ ಅಭಿಮಾನಿಗಳು ಬಯಸುತ್ತಿರುವಂತೆ ಪಾಕ್ ಫ್ಯಾನ್ಸ್ ಕೂಡ 71ನೇ ಶತಕಕ್ಕಾಗಿ ಕಾತುರದಿಂದ ಕಾಯುತ್ತಿರುವುದಂತು ಸ್ಪಷ್ಟ. ಅದರಲ್ಲೂ ಇಡೀ ಕ್ರಿಕೆಟ್ ಜಗತ್ತು ಕಾಯುತ್ತಿರುವ ಆ ಒಂದು ಶತಕಕ್ಕೆ ಮಾರ್ಚ್ 12 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಗಲಿದೆಯಾ ಕಾದು ನೋಡಬೇಕಿದೆ.
ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(We want your 71st century in Pakistan: Fan’s message for Virat Kohli)