AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ವಿರಾಟ್ ಕೊಹ್ಲಿಗಾಗಿ ನಾವು ಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ: ರಜತ್ ಪಾಟಿದಾರ್

IPL 2025 FInal RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಲಿರುವುದು ವಿಶೇಷ.

IPL 2025: ವಿರಾಟ್ ಕೊಹ್ಲಿಗಾಗಿ ನಾವು ಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ: ರಜತ್ ಪಾಟಿದಾರ್
Virat Kohli - Rajat Patidar
ಝಾಹಿರ್ ಯೂಸುಫ್
|

Updated on: Jun 03, 2025 | 9:05 AM

Share

ಮಂಗಳವಾರ (ಜೂನ್ 3) ನಡೆಯಲಿರುವ ಐಪಿಎಲ್ 2025 ರ ಫೈನಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಎದುರಿಸಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರುಗಲಿರುವ ಈ ಪಂದ್ಯವನ್ನು ನಾವು ವಿರಾಟ್ ಕೊಹ್ಲಿಗಾಗಿ ಗೆಲ್ಲಲು ಪ್ರಯತ್ನಿಸುತ್ತೇವೆ ಎಂದು ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಹೇಳಿದ್ದಾರೆ.

ಫೈನಲ್ ಪಂದ್ಯದ ಮುನ್ನಾದಿನ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ರಜತ್ ಪಾಟಿದಾರ್, ಈ ಬಾರಿ ನಾವು ಐಪಿಎಲ್ ಟ್ರೋಫಿ ಗೆಲ್ಲಲು ಪ್ರಯತ್ನಿಸುತ್ತೇವೆ. ವಿರಾಟ್ ಕೊಹ್ಲಿಗಾಗಿ ಕಪ್ ಗೆಲ್ಲುವುದು ನಮ್ಮೆಲ್ಲರ ಗುರಿ ಎಂದಿದ್ದಾರೆ. ಈ ಮೂಲಕ ಕಿಂಗ್ ಕೊಹ್ಲಿಯ 18 ವರ್ಷಗಳ ಕಾಯುವಿಕೆಗೆ ಇತಿಶ್ರೀ ಹಾಡಲು ಆರ್​ಸಿಬಿ ತಂಡದ ಪ್ಲ್ಯಾನ್ ರೂಪಿಸಿದೆ ಎಂಬ ವಿಚಾರವನ್ನು ರಜತ್ ಪಾಟಿದಾರ್ ಬಹಿರಂಗಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಈ ಹಿಂದೆ ಮೂರು ಬಾರಿ ಫೈನಲ್ ಆಡಿದ್ದರು. 2009 ರಲ್ಲಿ ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ಫೈನಲ್ ಆಡಿದ್ದ ಕೊಹ್ಲಿ, 2011 ರಲ್ಲಿ ಡೇನಿಯಲ್ ವೆಟ್ಟೋರಿ ಸಾರಥ್ಯದಲ್ಲಿ ಅಂತಿಮ ಪಂದ್ಯವಾಡಿದ್ದರು. ಇದಾದ ಬಳಿಕ 2016 ರಲ್ಲಿ ತಮ್ಮದೇ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಫೈನಲ್​ನಲ್ಲಿ ಕಣಕ್ಕಿಳಿದಿದ್ದರು. ಇದೀಗ ನಾಲ್ಕನೇ ಬಾರಿ ಫೈನಲ್ ಆಡಲು ಕಿಂಗ್ ಕೊಹ್ಲಿ ಸಜ್ಜಾಗಿದ್ದಾರೆ.

ಕಳೆದ 17 ವರ್ಷಗಳಿಂದ ಐಪಿಎಲ್​ ಟ್ರೋಫಿಗಾಗಿ ಕಾಯುತ್ತಿರುವ ಕೊಹ್ಲಿಗಾಗಿ ನಾವು ಟ್ರೋಫಿ ಗೆಲ್ಲುವ ವಿಶ್ವಾಸವಿದೆ. ಅದಕ್ಕಾಗಿ ನಾವು ಪ್ರಯತ್ನಿಸಲಿದ್ದೇವೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ. ಈ ಮೂಲಕ ಕೊಹ್ಲಿಯ ಐಪಿಎಲ್ ಟ್ರೋಫಿ ಬರವನ್ನು ನೀಗಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಆರ್​ಸಿಬಿ ನಾಯಕ.

ಇದೇ ವೇಳೆ ಗಾಯದ ಕಾರಣ ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿರುವ ಆರ್​ಸಿಬಿ ತಂಡದ ಸ್ಟಾರ್ ಆಲ್​ರೌಂಡರ್ ಟಿಮ್ ಡೇವಿಡ್ ಬಗ್ಗೆ ಕೂಡ ಕೇಳಲಾಯಿತು. ಈ ಪ್ರಶ್ನೆಗೆ ಉತ್ತರಿಸಿದ ರಜತ್ ಪಾಟಿದಾರ್, ಆ ಬಗ್ಗೆ ವೈದ್ಯರು ನಿಗಾವಹಿಸಿದ್ದಾರೆ. ಇಂದು ಸಂಜೆ ಟಿಮ್ ಡೇವಿಡ್ ಆಡುತ್ತಾರೊ ಇಲ್ಲವೊ ಎಂಬುದು ತಿಳಿಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: IPL 2025: ಫೈನಲ್ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಡೌಟ್

ಅಂದರೆ ಟಿಮ್ ಡೇವಿಡ್ ವಿಷಯದಲ್ಲಿ ಮಂಗಳವಾರ ಸಂಜೆಯವರೆಗೆ ಕಾದು ನೋಡಲು ಆರ್​ಸಿಬಿ ನಿರ್ಧರಿಸಿದೆ. ಅದರಂತೆ ಇಂದು ಸಂಜೆ ಅವರು ಆಡಲು ಫಿಟ್​ ಆಗಿರುವುದು ಕಂಡು ಬಂದರೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲಿದ್ದಾರೆ. ಇಲ್ಲದಿದ್ದರೆ, ಟಿಮ್ ಡೇವಿಡ್ ಬದಲಿಗೆ ಲಿಯಾಮ್ ಲಿವಿಂಗ್​ಸ್ಟೋನ್ ಕಣಕ್ಕಿಳಿಯುವುದು ಖಚಿತ.