AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಭಾರತ ಬರದಿದ್ದರೂ, ನಾವು ಆಡುತ್ತೇವೆ ಅಷ್ಟೇ: ಹಸನ್ ಅಲಿ

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಇನ್ನು 2025ರ ಚಾಂಪಿಯನ್ಸ್​ ಟ್ರೋಫಿ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಹೀಗಾಗಿ ಭಾರತ ತಂಡ ಪಾಕ್​ಗೆ ತೆರಳಲಿದೆಯಾ ಎಂಬುದೇ ಈಗ ಪ್ರಶ್ನೆ.

Champions Trophy 2025: ಭಾರತ ಬರದಿದ್ದರೂ, ನಾವು ಆಡುತ್ತೇವೆ ಅಷ್ಟೇ: ಹಸನ್ ಅಲಿ
Hasan Ali
ಝಾಹಿರ್ ಯೂಸುಫ್
|

Updated on: Jul 22, 2024 | 10:55 AM

Share

2025ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಆತಿಥ್ಯಕ್ಕೆ ಪಾಕಿಸ್ತಾನ್ ಸಿದ್ಧತೆಗಳನ್ನು ಶುರು ಮಾಡಿಕೊಂಡಿದೆ. ಈಗಾಗಲೇ ಟೂರ್ನಿಯ ಕರಡು ವೇಳಾಪಟ್ಟಿಯನ್ನು ಐಸಿಸಿಗೆ ಕಳುಹಿಸಿದೆ. ಆದರೆ ಇತ್ತ ಭಾರತ ತಂಡವು ಟೂರ್ನಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನೂ ಸಹ ತನ್ನ ನಿಲುವನ್ನು ಸ್ಪಷ್ಟಪಡಿಸಿಲ್ಲ. ಪಾಕ್​ನಲ್ಲಿ ಟೂರ್ನಿ ನಡೆದರೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿಯುವ ಸಾಧ್ಯತೆಗಳಿವೆ ಎಂದು ಈ ಹಿಂದೆ ವರದಿಯಾಗಿತ್ತು. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸುವಂತೆ ಐಸಿಸಿಗೆ ಬಿಸಿಸಿಐ ಮನವಿ ಮಾಡಿದೆ ಎಂಬ ಸುದ್ದಿಗಳು ಹರಿದಾಡಿದ್ದವು.

ಆದರೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಒಪ್ಪುವ ಸಾಧ್ಯತೆಯಿಲ್ಲ. ಅಲ್ಲದೆ ಪಂದ್ಯಾವಳಿಯನ್ನು ಪಾಕ್​ನಲ್ಲೇ ಆಯೋಜಿಸುವ ತನ್ನ ನಿಲುವಿನಲ್ಲಿ ದೃಢವಾಗಿ ನಿಂತಿದೆ. ಹೀಗಾಗಿಯೇ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈ ಪ್ರಶ್ನೆಗೆ ಮಾತನಾಡಿರುವ ಪಾಕ್​ ತಂಡದ ಆಟಗಾರ ಹಸನ್ ಅಲಿ, ನಾವು ಭಾರತದಲ್ಲಿ ಪಂದ್ಯಗಳನ್ನಾಡಲು ಹೋಗುತ್ತಿದ್ದರೆ, ಅವರು ಸಹ ಪಾಕಿಸ್ತಾನಕ್ಕೂ ಬರಬೇಕು. ಕ್ರೀಡೆ ರಾಜಕೀಯದಿಂದ ದೂರವಿರಬೇಕು ಎಂದು ಬಹಳಷ್ಟು ಮಂದಿ ಹಲವು ಬಾರಿ ಹೇಳಿದ್ದಾರೆ. ಅತ್ತ ಭಾರತೀಯ ಆಟಗಾರರು ಕೂಡ ಪಾಕಿಸ್ತಾನದಲ್ಲಿ ಆಡಲು ಬಯಸುವುದಾಗಿ ಈ ಹಿಂದೆ ಸಂದರ್ಶನಗಳಲ್ಲಿ ಹೇಳಿದ್ದಾರೆ.

ಹೀಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರಲು ಬಯಸುತ್ತಿಲ್ಲ ಎಂದೇಳುವುದರಲ್ಲಿ ಅರ್ಥವಿಲ್ಲ. ಹೀಗಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತನ್ನ ನಿಲುವಿನಲ್ಲಿ ಗಟ್ಟಿಯಾಗಿ ನಿಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ಹಸನ್ ಅಲಿ ಸಮಾ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಪಿಸಿಬಿ ಅಧ್ಯಕ್ಷರು ಈಗಾಗಲೇ ಹೇಳಿದಂತೆ, ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯುವುದಾದರೆ, ಅದು ಪಾಕಿಸ್ತಾನದಲ್ಲೇ ನಡೆಯಲಿದೆ. ಭಾರತಕ್ಕೆ ಬರಲು ಇಷ್ಟವಿಲ್ಲದಿದ್ದರೆ ಬೇಡ. ನಾವು ಅವರಿಲ್ಲದೆ ಆಡುತ್ತೇವೆ.

ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಬೇಕು ಎಂಬುದಷ್ಟೇ ನಮ್ಮ ನಿಲುವು. ಭಾರತ ತಂಡ ಭಾಗವಹಿಸಲು ಬಯಸದಿದ್ದರೆ, ಕ್ರಿಕೆಟ್ ಮುಗಿದಿದೆ ಎಂದು ಅರ್ಥವಲ್ಲ. ಭಾರತವನ್ನು ಹೊರತುಪಡಿಸಿ ಇನ್ನೂ ಅನೇಕ ತಂಡಗಳಿವೆ. ಆ ತಂಡಗಳ ನಡುವೆ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ ಎಂದು ಹಸನ್ ಅಲಿ ಹೇಳಿದ್ದಾರೆ.

ಇದೀಗ ಹಸನ್ ಅಲಿ ಅವರ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಅಲ್ಲದೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದರೆ ಏನಾಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ- ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಚಾಂಪಿಯನ್ಸ್​ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳು:

  1. ಭಾರತ
  2. ಪಾಕಿಸ್ತಾನ್
  3. ಸೌತ್ ಆಫ್ರಿಕಾ
  4. ನ್ಯೂಝಿಲೆಂಡ್
  5. ಅಫ್ಘಾನಿಸ್ತಾನ್
  6. ಇಂಗ್ಲೆಂಡ್
  7. ಬಾಂಗ್ಲಾದೇಶ್
  8. ಆಸ್ಟ್ರೇಲಿಯಾ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ