AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs West Indies: ಭಾರತ-ವೆಸ್ಟ್ ಇಂಡೀಸ್ ಸರಣಿ ಆರಂಭಕ್ಕೂ ಮುನ್ನ ಅಭಿಮಾನಿಗಳಿಗೆ ಸಿಕ್ತು ಬಂಪರ್ ಸುದ್ದಿ: ಏನದು?

ವೆಸ್ಟ್ ಬೆಂಗಾಲ್ ಸರ್ಕಾರ (West Bengal government) ಭಾರತ ಹಾಗೂ ವೆಸ್ಟ್ ಇಂಡೀಸ್ ಟಿ20 ಸರಣಿ ವೀಕ್ಷಿಸಲು ಶೇ. 72 ರಷ್ಟು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಟ್ಟಿದೆ. ಫೆಬ್ರವರಿ 16 ರಂದು ಮೊದಲ ಟಿ20 ಪಂದ್ಯ ನಡೆಯಲಿದೆ.

India vs West Indies: ಭಾರತ-ವೆಸ್ಟ್ ಇಂಡೀಸ್ ಸರಣಿ ಆರಂಭಕ್ಕೂ ಮುನ್ನ ಅಭಿಮಾನಿಗಳಿಗೆ ಸಿಕ್ತು ಬಂಪರ್ ಸುದ್ದಿ: ಏನದು?
India vs West Indies
TV9 Web
| Updated By: Vinay Bhat|

Updated on: Feb 01, 2022 | 11:26 AM

Share

ಬಹುನಿರೀಕ್ಷಿತ ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಸರಣಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 6 ರಂದು ಮೊದಲ ಏಕದಿನ ಪಂದ್ಯ ನಡೆಯುವ ಮೂಲಕ ಸರಣಿಗೆ ಚಾಲನೆ ಸಿಗಲಿದೆ. ಮೂರು ಪಂದ್ಯಗಳ ಏಕದಿನ ಸರಣಿ ಬಳಿಕ ಟಿ20 ಸರಣಿ ನಡೆಯಲಿದೆ. ಇದಕ್ಕೂ ಮುನ್ನ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಕೋಲ್ಕತ್ತಾದಲ್ಲಿ ಆಯೋಜನೆ ಮಾಡಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಪ್ರೇಕ್ಷಕರಿಗೆ ಅನುಮತಿ ನೀಡಲಾಗಿದೆ. ವೆಸ್ಟ್ ಬೆಂಗಾಲ್ ಸರ್ಕಾರ (West Bengal government) ಇಂಡೋ-ವಿಂಡೀಸ್ ಟಿ20 ಸರಣಿ ವೀಕ್ಷಿಸಲು ಶೇ. 72 ರಷ್ಟು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಟ್ಟಿದೆ. ಫೆಬ್ರವರಿ 16 ರಂದು ಮೊದಲ ಟಿ20 ಪಂದ್ಯ ನಡೆಯಲಿದೆ. ಸೋಮವಾರ ಈ ಬಗ್ಗೆ ಮಾಹಿತಿ ನೀಡಿರುವ ಸರ್ಕಾರ, “ಎಲ್ಲಾ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾ ಚಟುವಟಿಕೆಗಳ ಸ್ಥಳದ ಸಾಮರ್ಥ್ಯವನ್ನು ಶೇಕಡಾ 75 ರಷ್ಟು ಏರಿಸಲಾಗಿದೆ,” ಎಂದು ಹೇಳಿದೆ.

ಸದ್ಯ ಏಕದಿನ ಸರಣಿಗಾಗಿ ಭಾರತೀಯ ಆಟಗಾರರು ಅಹ್ಮದಾಬಾದ್​ಗೆ ತಲುಪಿದ್ದಾರೆ. ಇಲ್ಲಿ ಮೊದಲಿಗೆ ಮೂರು ದಿನಗಳ ಕ್ವಾರಂಟೈನ್ ಪೂರೈಸಲಿದ್ದಾರೆ. ಅದಾದ ಬಳಿಕ ಬಯೋಬಬಲ್‌ಗೆ ಸೇರ್ಪಡೆಯಾಗಲಿದ್ದಾರೆ. ನಂತರ ಅಭ್ಯಾಸ ಆರಂಭಿಸಲಿದ್ದಾರೆ. ಇತ್ತ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ರೋಚಕ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಂಡ ಬೆನ್ನಲ್ಲೇ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಇದೀಗ ಭಾರತಕ್ಕೆ ಪ್ರಯಾಣ ಬೆಳೆಸಿದೆ. ವೆಸ್ಟ್ ಇಂಡೀಸ್ ಕ್ರಿಕೆಟ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಆಟಗಾರರು ಭಾರತದ ಫ್ಲೈಟ್ ಏರುತ್ತಿರುವ ಫೋಟೋವನ್ನು ಹಂಚಿಕೊಂಡಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಣ ಈ ಸರಣಿಯ ಮೂರು ಏಕದಿನ ಪಂದ್ಯಗಳನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೊಟೇರಾದ ಸರ್ದಾರ್‌ ಪಟೇಲ್‌ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂ ಆಗಿ ಹೊಸ ವಿನ್ಯಾಸ ಪಡೆದ ಬಳಿಕ ಇದೇ ಮೊದಲ ಬಾರಿ ಏಕದಿನ ಕ್ರಿಕೆಟ್‌ ಸರಣಿಗೆ ಆತಿಥ್ಯ ವಹಿಸುತ್ತಿರುವುದು ವಿಶೇಷವಾಗಿದೆ. ಇದಾದ ಬಳಿಕ ಟಿ20 ಸರಣಿಯ 3 ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಆಯೋಜನೆಯಾಗಲಿದೆ.

ಐಪಿಎಲ್​ಗೆ ಶೇ. 25 ರಷ್ಟು ಪ್ರೇಕ್ಷಕರಿಗೆ ಅನುಮತಿ?:

ಮಿಲಿಯನ್ ಡಾಲರ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿ ವೀಕ್ಷಣೆಗೆ ಶೇ. 25 ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಐಪಿಎಲ್​ನ ಎಲ್ಲ ಲೀಗ್ ಪಂದ್ಯಗಳು ಮಹಾರಾಷ್ಟ್ರದಲ್ಲಿ ನಡೆದರೆ ಪ್ಲೇ ಆಫ್ ಪಂದ್ಯಗಳು ಅಹ್ಮದಾಬಾದ್​ನಲ್ಲಿ ಜರುಗಲಿದೆ. ಸದ್ಯ ಮಹರಾರಾಷ್ಟ್ರ ಸರ್ಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಐಪಿಎಲ್ ವೇಳೆ ಕೊರೊನಾ  ಸಂಖ್ಯೆ ಇಳಿಮುಖವಾಗಿದ್ದರೆ ಶೇ. 25 ರಷ್ಟು ಜನರಿಗೆ ಪಂದ್ಯ ವೀಕ್ಷಿಸಲು ಅನಮತಿ ನೀಡುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೆ ಮುಂಬೈ ಕ್ರೀಡಾಂಗಣದ ಆಸುಪಾಸಿನಲ್ಲೇ ಆಟಗಾರರಿಗೆ ಕ್ವಾರಂಟೈನ್ ಆಗಲು ಫೈವ್ ಸ್ಟಾರ್ ಹೊಟೇಲ್​ಗಳು ಕೂಡ ವ್ಯವಸ್ಥೆ ಆಗಲಿದೆ. ಹೀಗಾಗಿ ಐಪಿಎಲ್ 2022ರ ಎಲ್ಲ ಲೀಗ್ ಪಂದ್ಯಗಳು ಮುಂಬೈನಲ್ಲೇ ನಡೆಯಲಿದೆಯಂತೆ. ಫೆಬ್ರವರಿಯಲ್ಲಿ ನಡೆಯಲಿರುವ ಮೆಗಾ ಹರಾಜಿನ ಬಳಿಕ ಬಿಸಿಸಿಐ ಈ ಮಾಹಿತಿಯನ್ನು ಅಧಿಕೃತವಾಗಿ ಘೋಷಿಸಲಿದೆ ಎಂದು ವರದಿಯಾಗಿದೆ.

Ranji Trophy 2021-22: ರಣಜಿ ಟ್ರೋಫಿ 2022: ಫೆ. 16 ರಿಂದ ಮಾ. 5 ರವರೆಗೆ 9 ತಾಣಗಳಲ್ಲಿ ಪಂದ್ಯ ಆಯೋಜನೆ

Jason Holder: ಭಾರತವನ್ನು ಅವರ ನೆಲದಲ್ಲೇ ಸೋಲಿಸುತ್ತೇವೆ: ಭಾರತದ ಫ್ಲೈಟ್ ಏರುವ ಮುನ್ನ ವಿಂಡೀಸ್ ಆಟಗಾರನ ಮಾತು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ