ಭಾರತ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗಾಗಿ ವೆಸ್ಟ್ ಇಂಡೀಸ್ (India vs West Indies) ತಂಡವನ್ನು ಪ್ರಕಟಿಸಲಾಗಿದೆ. ಅನುಭವಿ ಆಲ್ ರೌಂಡರ್ ಜೇಸನ್ ಹೋಲ್ಡರ್ ಕೆರಿಬಿಯನ್ ತಂಡಕ್ಕೆ ಮರಳಿದ್ದಾರೆ. ಒಟ್ಟು 13 ಆಟಗಾರರು ಈ ಸರಣಿಗಾಗಿ ಆಯ್ಕೆಯಾಗಿದ್ದು, ಹಾಗೆಯೇ ಮೂವರು ಮೀಸಲು ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇನ್ನು ತಂಡದ ನಾಯಕನಾಗಿ ನಿಕೋಲಸ್ ಪೂರನ್ ಹಾಗೂ ಉಪನಾಯಕನಾಗಿ ಶಾಯ್ ಹೋಪ್ ಕಾಣಿಸಿಕೊಳ್ಳಲಿದ್ದಾರೆ. ಟೀಮ್ ಇಂಡಿಯಾ ವಿರುದ್ದದ ಈ ಸರಣಿಯು ಜುಲೈ 22 ರಿಂದ ಆರಂಭವಾಗಲಿದ್ದು, ಈಗಾಗಲೇ ಈ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಅತ್ತ ಬಾಂಗ್ಲಾದೇಶ ವಿರುದ್ದ 3-0 ಅಂತರದಿಂದ ಸರಣಿ ಸೋತಿರುವ ವೆಸ್ಟ್ ಇಂಡೀಸ್ ಅನುಭವಿ ಆಟಗಾರರನ್ನು ತಂಡಕ್ಕೆ ಕರೆಸಿಕೊಂಡಿದೆ. ಅದರಂತೆ ಜೇಸನ್ ಹೋಲ್ಡರ್ ಟೀಮ್ ಇಂಡಿಯಾ ವಿರುದ್ದ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ತಂಡದಿಂದ ಆ್ಯಂಡರ್ಸನ್ ಫಿಲಿಪ್ ಹಾಗೂ ರೊಮಾರಿಯೊ ಶೆಫರ್ಡ್ ಅನ್ನು ಕೈಬಿಡಲಾಗಿದೆ. ಇನ್ನು ತಂಡದಲ್ಲಿ ಟ್ರಂಪ್ ಕಾರ್ಡ್ ಆಗಿ ರೋವ್ಮನ್ ಪೊವೆಲ್ ಇದ್ದು, ಟೀಮ್ ಇಂಡಿಯಾ ವಿರುದ್ದ ಹೇಗೆ ಪ್ರದರ್ಶನ ನೀಡಲಿದ್ದಾರೆ ಕಾದು ನೋಡಬೇಕಿದೆ.
ಇದನ್ನೂ ಓದಿ:Ind vs Wi: ಭಾರತ-ವೆಸ್ಟ್ ಇಂಡೀಸ್ ಸರಣಿಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ
ಇತ್ತ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಅಂದರೆ ಈ ಸರಣಿಯಿಂದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಅತ್ತ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸುವ ಮೂಲಕ ಟೀಮ್ ಇಂಡಿಯಾ ವಿರುದ್ದ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ ವೆಸ್ಟ್ ಇಂಡೀಸ್ ತಂಡ.
ವೆಸ್ಟ್ ಇಂಡೀಸ್ ಏಕದಿನ ತಂಡ ಹೀಗಿದೆ:
ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮ್ರಾ ಬ್ರೂಕ್ಸ್, ಕೆಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರೆಂಡನ್ ಕಿಂಗ್, ಕೈಲ್ ಮೈಯರ್ಸ್, ಗುಡಕೇಶ್ ಮೋತಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್ ಮತ್ತು ಜೇಡನ್ ಸೀಲ್ಸ್.
ಮೀಸಲು ಆಟಗಾರರು: ರೊಮಾರಿಯೊ ಶೆಫರ್ಡ್, ಹೇಡನ್ ವಾಲ್ಷ್ ಜೂನಿಯರ್.
ಭಾರತ ಏಕದಿನ ತಂಡ ಹೀಗಿದೆ:
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.