ಎರಡು ಸರಣಿಗಳಿಗೆ ವೆಸ್ಟ್ ಇಂಡೀಸ್ ತಂಡ ಪ್ರಕಟ: ವಿದಾಯ ಹೇಳಲು ಕಾದಿರುವ ಕ್ರಿಸ್ ಗೇಲ್​ಗೆ ನಿರಾಸೆ

| Updated By: ಝಾಹಿರ್ ಯೂಸುಫ್

Updated on: Jan 01, 2022 | 7:17 PM

West Indies Squad: ಕೀರನ್ ಪೊಲಾರ್ಡ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮರ್ಹ್ ಬ್ರೂಕ್ಸ್, ರೋಸ್ಟನ್ ಚೇಸ್, ಜಸ್ಟಿನ್ ಗ್ರೀವ್ಸ್, ನಿಕೋಲಸ್ ಪೂರನ್, ಜೇಸನ್ ಹೋಲ್ಡರ್, ಅಕೆಲ್ ಹೊಸೈನ್

ಎರಡು ಸರಣಿಗಳಿಗೆ ವೆಸ್ಟ್ ಇಂಡೀಸ್ ತಂಡ ಪ್ರಕಟ: ವಿದಾಯ ಹೇಳಲು ಕಾದಿರುವ ಕ್ರಿಸ್ ಗೇಲ್​ಗೆ ನಿರಾಸೆ
West Indies Team
Follow us on

ಇಂಗ್ಲೆಂಡ್ ಮತ್ತು ಐರ್ಲೆಂಡ್ ವಿರುದ್ಧದ ಸರಣಿಗಾಗಿ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ವಿಂಡೀಸ್ ದಿಗ್ಗಜ ಕ್ರಿಕೆಟಿಗ ಕ್ರಿಸ್ ಗೇಲ್ ಅವರಿಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ. ಏಕೆಂದರೆ ಗೇಲ್ ಮುಂಬರುವ ಸರಣಿ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಎರಡು ಸರಣಿಗಳಿಗಾಗಿ ಪ್ರಕಟಿಸಲಾದ ತಂಡದಲ್ಲಿ ಗೇಲ್​ಗೆ ಅವಕಾಶ ನೀಡಿಲ್ಲ.

ಈ ಬಗ್ಗೆ ಮಾತನಾಡಿರುವ ಕ್ರಿಕೆಟ್ ವೆಸ್ಟ್ ಇಂಡೀಸ್ ಮುಖ್ಯಸ್ಥ ರಿಕ್ಕಿ ಸ್ಕೆರಿಟ್, ಕ್ರಿಸ್ ಗೇಲ್ ಅವರು ತವರು ತಂಡ ಜಮೈಕಾ ಹಾಗೂ ವೆಸ್ಟ್ ಇಂಡೀಸ್ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಅವರು ತವರಿನಲ್ಲಿ ಗೌರವಯುತ ವಿದಾಯ ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ಕ್ರಿಕೆಟ್ ವೆಸ್ಟ್ ಇಂಡೀಸ್ ಸೂಕ್ತ ವ್ಯವಸ್ಥೆ ಮಾಡಲಿದೆ ಎಂದು ತಿಳಿಸಿದ್ದಾರೆ.

ವೆಸ್ಟ್ ಇಂಡೀಸ್ ತಂಡವು ಇಂಗ್ಲೆಂಡ್ ವಿರುದ್ದ 5 ಟಿ20 ಪಂದ್ಯಗಳನ್ನಾಡಲಿದ್ದು, ಹಾಗೆಯೇ ಐರ್ಲೆಂಡ್ ವಿರುದ್ಧ ಮೂರು ಏಕದಿನ ಮತ್ತು ಒಂದು ಟಿ20 ಪಂದ್ಯವನ್ನಾಡಲಿದೆ. ಇದರಲ್ಲಿ ಒಂದು ಪಂದ್ಯವು ಜಮೈಕಾದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಕ್ರಿಸ್ ಗೇಲ್ ಅವರಿಗೆ ಅವಕಾಶ ನೀಡಲಿದೆಯಾ ಕಾದು ನೋಡಬೇಕಿದೆ.

ಇನ್ನು ಈ ಎರಡು ಸರಣಿಗಳಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಕೀರನ್ ಪೊಲಾರ್ಡ್ ಮುನ್ನಡೆಸಲಿದ್ದು, ತಂಡಕ್ಕೆ ಆಯ್ಕೆಯಾದ ಸದಸ್ಯರುಗಳ ಪಟ್ಟಿ ಹೀಗಿದೆ.

ಇಂಗ್ಲೆಂಡ್ ಮತ್ತು ಐರ್ಲೆಂಡ್ ವಿರುದ್ಧದ ಸರಣಿಗೆ ವೆಸ್ಟ್ ಇಂಡೀಸ್ ತಂಡ:
ಏಕದಿನ ತಂಡ:-
ಕೀರನ್ ಪೊಲಾರ್ಡ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮರ್ಹ್ ಬ್ರೂಕ್ಸ್, ರೋಸ್ಟನ್ ಚೇಸ್, ಜಸ್ಟಿನ್ ಗ್ರೀವ್ಸ್, ನಿಕೋಲಸ್ ಪೂರನ್, ಜೇಸನ್ ಹೋಲ್ಡರ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ .

ಟಿ20 ತಂಡ:-
ಕೀರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್ ಮತ್ತು ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಶಾಯ್ ಹೋಪ್, ಅಕೆಲ್ ಹೊಸೈನ್, ಜೇಸನ್ ಹೋಲ್ಡರ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಓಡಿಯನ್ ಸ್ಮಿತ್, ಹೇಡನ್ ವಾಲ್ಷ್ ಜೂನಿಯರ್.

ಇದನ್ನೂ ಓದಿ:  India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(West Indies Announces Squad For Against Ireland And England)