Kieron Pollard: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕೀರನ್ ಪೊಲಾರ್ಡ್ ವಿದಾಯ
Kieron Pollard Retires: ಟಿ20 ಕ್ರಿಕೆಟ್‌ನಲ್ಲಿ 587 ಪಂದ್ಯಗಳನ್ನು ಆಡಿರುವ ಪೊಲಾರ್ಡ್ 11,509 ಪಂದ್ಯಗಳೊಂದಿಗೆ T20 ಕ್ರಿಕೆಟ್‌ನಲ್ಲಿ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಟಗಾರ ಕೀರನ್ ಪೊಲಾರ್ಡ್ (Kieron Pollard) ವಿದಾಯ ಹೇಳಿದ್ದಾರೆ. ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ಪರ ಆಡುತ್ತಿರುವ ಪೊಲಾರ್ಡ್ ಧೀಡರಣೆ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಏಕೆಂದರೆ ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡದ ನಾಯಕನೇ ವಿದಾಯ ಹೇಳಿರುವುದು ತಂಡಕ್ಕೆ ಹಿನ್ನಡೆಯಾಗಲಿದೆ. ಇದಾಗ್ಯೂ ಫ್ರಾಂಚೈಸಿ ಲೀಗ್ ಕ್ರಿಕೆಟ್‌ನಲ್ಲಿ ಪೊಲಾರ್ಡ್ ಮುಂದುವರೆಯಲಿದ್ದಾರೆ.
ಕಳೆದ 15 ವರ್ಷಗಳಿಂದ ವೆಸ್ಟ್ ಇಂಡೀಸ್ ತಂಡದ ಭಾಗವಾಗಿರುವ ಪೊಲಾರ್ಡ್ 2019 ರಿಂದ ವೆಸ್ಟ್ ಇಂಡೀಸ್ ODI ಮತ್ತು T20I ನಾಯಕರಾಗಿದ್ದರು. ಅಲ್ಲದೆ ಕಳೆದ ವರ್ಷ T20 ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಿದರು.ಇದೀಗ 33 ವರ್ಷದ ಪೊಲಾರ್ಡ್ ತಮ್ಮ ಸುದೀರ್ಘ ವಿಂಡೀಸ್ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ್ದಾರೆ.
ಪೊಲಾರ್ಡ್ ವೆಸ್ಟ್ ಇಂಡೀಸ್ ಪರ 123 ODI ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಒಟ್ಟು 2706 ರನ್ ಗಳಿಸಿದ್ದಾರೆ. ಹಾಗೆಯೇ 55 ವಿಕೆಟ್ಗಳನ್ನು ಪಡೆದಿದ್ದಾರೆ. ಇನ್ನು 101 ಟಿ20 ಪಂದ್ಯಗಳಲ್ಲಿ 135.14 ಸ್ಟ್ರೈಕ್ ರೇಟ್‌ನಲ್ಲಿ 1568 ರನ್ ಗಳಿಸಿದ್ದಾರೆ. ಕೊನೆಯ ಬಾರಿಗೆ ಪೊಲಾರ್ಡ್ ಫೆಬ್ರವರಿ 2022 ರಲ್ಲಿ ಭಾರತದ ವಿರುದ್ದ ODI ಮತ್ತು T20I ಸರಣಿಗಳಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸಿದ್ದರು.
2012 ರಲ್ಲಿ T20 ವಿಶ್ವಕಪ್ ಗೆದ್ದ ವೆಸ್ಟ್ ಇಂಡೀಸ್ ತಂಡದ ಭಾಗವಾಗಿದ್ದ ಕೀರನ್ ಪೊಲಾರ್ಡ್, 2016 ರಲ್ಲಿ ವಿಂಡೀಸ್ ತಂಡವು 2 ನೇ ಪ್ರಶಸ್ತಿಯನ್ನು ಗೆಲ್ಲುವ ಮೊದಲು ಗಾಯದ ಕಾರಣದಿಂದ ಹಿಂದೆ ಸರಿದಿದ್ದರು. ಇದೀಗ ಮತ್ತೊಂದು ಟಿ20 ವಿಶ್ವಕಪ್ ಮುಂದಿರುವಾಗಲೇ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಇದುವರೆಗೆ ಟಿ20 ಕ್ರಿಕೆಟ್‌ನಲ್ಲಿ 587 ಪಂದ್ಯಗಳನ್ನು ಆಡಿರುವ ಪೊಲಾರ್ಡ್ 11,509 ಪಂದ್ಯಗಳೊಂದಿಗೆ T20 ಕ್ರಿಕೆಟ್‌ನಲ್ಲಿ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ
Published On - 9:57 pm, Wed, 20 April 22