AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಸ್ಟ್ ಇಂಡೀಸ್‌ನ ಲೆಜೆಂಡರಿ ಕ್ರಿಕೆಟಿಗ ಬರ್ನಾರ್ಡ್ ಜೂಲಿಯನ್ ನಿಧನ

Bernard Julien death: ವೆಸ್ಟ್ ಇಂಡೀಸ್ ಕ್ರಿಕೆಟ್ ದಂತಕಥೆ ಬರ್ನಾರ್ಡ್ ಜೂಲಿಯನ್ 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 1975ರ ಮೊದಲ ಏಕದಿನ ವಿಶ್ವಕಪ್ ವಿಜೇತ ತಂಡದ ಪ್ರಮುಖ ಸದಸ್ಯರಾಗಿದ್ದ ಜೂಲಿಯನ್, ಟೂರ್ನಿಯಲ್ಲಿ ಆಲ್‌ರೌಂಡ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ನೆರವಾಗಿದ್ದರು. ಅವರ ನಿಧನಕ್ಕೆ ಕ್ರಿಕೆಟ್ ವೆಸ್ಟ್ ಇಂಡೀಸ್ ಸಂತಾಪ ಸೂಚಿಸಿದೆ. ಜೂಲಿಯನ್ ಕೊಡುಗೆ ಸ್ಮರಣೀಯ.

ವೆಸ್ಟ್ ಇಂಡೀಸ್‌ನ ಲೆಜೆಂಡರಿ ಕ್ರಿಕೆಟಿಗ ಬರ್ನಾರ್ಡ್ ಜೂಲಿಯನ್ ನಿಧನ
Bernard Julien
ಪೃಥ್ವಿಶಂಕರ
|

Updated on: Oct 06, 2025 | 5:00 PM

Share

ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ಟೆಸ್ಟ್ ಸರಣಿಯ ನಡುವೆ ಕ್ರಿಕೆಟ್ ಲೋಕಕ್ಕೆ ನೋವಿನ ಸುದ್ದಿಯೊಂದು ಎದುರಾಗಿದೆ. ವೆಸ್ಟ್ ಇಂಡೀಸ್‌ನ ದಂತಕಥೆ ಕ್ರಿಕೆಟಿಗ ಬರ್ನಾರ್ಡ್ ಜೂಲಿಯನ್ (Bernard Julien) ತಮ್ಮ 75 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.1975 ರಲ್ಲಿ ಮೊದಲ ಏಕದಿನ ವಿಶ್ವಕಪ್ ಗೆದ್ದ ಕೆರಿಬಿಯನ್ ತಂಡದ ಸದಸ್ಯರಾಗಿದ್ದ ಬರ್ನಾರ್ಡ್ ಜೂಲಿಯನ್, ಆ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಗೆಲುವಿನಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಗುಂಪು ಹಂತದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 20 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದಿದ್ದ ಬರ್ನಾರ್ಡ್, ಆ ಬಳಿಕ ನಡೆದಿದ್ದ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧವೂ ಕೇವಲ 27 ರನ್‌ ನೀಡಿ ಪ್ರಮುಖ 4 ವಿಕೆಟ್‌ಗಳನ್ನು ಉರುಳಿಸಿದ್ದರು. ಇದಲ್ಲದೆ, 1975 ರ ವಿಶ್ವಕಪ್‌ನ ಫೈನಲ್‌ನಲ್ಲಿಯೂ ಮಿಂಚಿನ ಪ್ರದರ್ಶನ ನೀಡಿದ್ದ ಅವರು ಆಸ್ಟ್ರೇಲಿಯಾ ವಿರುದ್ಧ 37 ಎಸೆತಗಳಲ್ಲಿ 26 ರನ್‌ ಬಾರಿಸುವ ಮೂಲಕ ತಮ್ಮ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಂತಾಪ ಸೂಚಿಸಿದ ಕ್ರಿಕೆಟ್ ವೆಸ್ಟ್ ಇಂಡೀಸ್

ಬರ್ನಾರ್ಡ್ ಜೂಲಿಯನ್ ಅವರ ನಿಧನಕ್ಕೆ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಸಂತಾಪ ಸೂಚಿಸಿದೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯು ಬರ್ನಾರ್ಡ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ವೆಸ್ಟ್ ಇಂಡೀಸ್ ಕ್ರಿಕೆಟ್‌ಗೆ ಬರ್ನಾರ್ಡ್ ಜೂಲಿಯನ್ ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಹೇಳಿದೆ.

ಬರ್ನಾರ್ಡ್ ಅಂತರರಾಷ್ಟ್ರೀಯ ವೃತ್ತಿಜೀವನ

ಬರ್ನಾರ್ಡ್ ಜೂಲಿಯನ್ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ 24 ಟೆಸ್ಟ್ ಮತ್ತು 12 ಏಕದಿನ ಪಂದ್ಯಗಳನ್ನು ಒಳಗೊಂಡಂತೆ ಒಟ್ಟು 36 ಪಂದ್ಯಗಳನ್ನು ಆಡಿದ್ದಾರೆ. 24 ಟೆಸ್ಟ್ ಪಂದ್ಯಗಳಲ್ಲಿ ಅವರು 866 ರನ್ ಗಳಿಸಿ 50 ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ 12 ಏಕದಿನ ಪಂದ್ಯಗಳಲ್ಲಿ 86 ರನ್ ಬಾರಿಸಿರುವ ಅವರು 18 ವಿಕೆಟ್‌ಗಳನ್ನು ಸಹ ಪಡೆದಿದ್ದರು. ಬರ್ನಾರ್ಡ್ ಅವರ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯ ಇಂಗ್ಲೆಂಡ್ ವಿರುದ್ಧವಾದರೆ, ಅವರ ಕೊನೆಯ ಪಂದ್ಯ ಪಾಕಿಸ್ತಾನ ವಿರುದ್ಧವಾಗಿತ್ತು.

ಭಾರತ ವಿರುದ್ಧದ ಟೆಸ್ಟ್‌ಗಳಲ್ಲಿ ಪ್ರದರ್ಶನ

ತಮ್ಮ ನಾಲ್ಕು ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ, ಬರ್ನಾರ್ಡ್ ಜೂಲಿಯನ್ ಭಾರತದ ವಿರುದ್ಧ ಎಂಟು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಇದರಲ್ಲಿ 204 ರನ್ ಮತ್ತು 11 ವಿಕೆಟ್‌ಗಳನ್ನು ಸಹ ಪಡೆದಿದ್ದರು. ಇದರಲ್ಲಿ ಅವರು ನಾಲ್ಕು ಟೆಸ್ಟ್ ಪಂದ್ಯಗಳನ್ನು ಭಾರತದಲ್ಲಿ ಆಡಿದ್ದರೆ, ಉಳಿದ ನಾಲ್ಕು ಟೆಸ್ಟ್ ಪಂದ್ಯಗಳನ್ನು ವೆಸ್ಟ್ ಇಂಡೀಸ್‌ನಲ್ಲಿ ಆಡಿದರು. ಭಾರತದಲ್ಲಿ 93 ರನ್ ಜೊತೆಗೆ ಒಂಬತ್ತು ವಿಕೆಟ್‌ಗಳನ್ನು ಪಡೆದಿದ್ದ ಅವರು ವೆಸ್ಟ್ ಇಂಡೀಸ್‌ನಲ್ಲಿ 111 ರನ್ ಮತ್ತು ಎರಡು ವಿಕೆಟ್‌ಗಳನ್ನು ಪಡೆದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?