
ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ಟೆಸ್ಟ್ ಸರಣಿಯ ನಡುವೆ ಕ್ರಿಕೆಟ್ ಲೋಕಕ್ಕೆ ನೋವಿನ ಸುದ್ದಿಯೊಂದು ಎದುರಾಗಿದೆ. ವೆಸ್ಟ್ ಇಂಡೀಸ್‌ನ ದಂತಕಥೆ ಕ್ರಿಕೆಟಿಗ ಬರ್ನಾರ್ಡ್ ಜೂಲಿಯನ್ (Bernard Julien) ತಮ್ಮ 75 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.1975 ರಲ್ಲಿ ಮೊದಲ ಏಕದಿನ ವಿಶ್ವಕಪ್ ಗೆದ್ದ ಕೆರಿಬಿಯನ್ ತಂಡದ ಸದಸ್ಯರಾಗಿದ್ದ ಬರ್ನಾರ್ಡ್ ಜೂಲಿಯನ್, ಆ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಗೆಲುವಿನಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಗುಂಪು ಹಂತದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 20 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದಿದ್ದ ಬರ್ನಾರ್ಡ್, ಆ ಬಳಿಕ ನಡೆದಿದ್ದ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧವೂ ಕೇವಲ 27 ರನ್ ನೀಡಿ ಪ್ರಮುಖ 4 ವಿಕೆಟ್‌ಗಳನ್ನು ಉರುಳಿಸಿದ್ದರು. ಇದಲ್ಲದೆ, 1975 ರ ವಿಶ್ವಕಪ್‌ನ ಫೈನಲ್‌ನಲ್ಲಿಯೂ ಮಿಂಚಿನ ಪ್ರದರ್ಶನ ನೀಡಿದ್ದ ಅವರು ಆಸ್ಟ್ರೇಲಿಯಾ ವಿರುದ್ಧ 37 ಎಸೆತಗಳಲ್ಲಿ 26 ರನ್ ಬಾರಿಸುವ ಮೂಲಕ ತಮ್ಮ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಬರ್ನಾರ್ಡ್ ಜೂಲಿಯನ್ ಅವರ ನಿಧನಕ್ಕೆ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಸಂತಾಪ ಸೂಚಿಸಿದೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯು ಬರ್ನಾರ್ಡ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ವೆಸ್ಟ್ ಇಂಡೀಸ್ ಕ್ರಿಕೆಟ್‌ಗೆ ಬರ್ನಾರ್ಡ್ ಜೂಲಿಯನ್ ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಹೇಳಿದೆ.
Statement on the Passing of Legend Bernard Julien by Dr. Kishore Shallow, President of Cricket West Indies.
Read More 🔽https://t.co/cwYl3btsC7
— Windies Cricket (@windiescricket) October 5, 2025
ಬರ್ನಾರ್ಡ್ ಜೂಲಿಯನ್ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ 24 ಟೆಸ್ಟ್ ಮತ್ತು 12 ಏಕದಿನ ಪಂದ್ಯಗಳನ್ನು ಒಳಗೊಂಡಂತೆ ಒಟ್ಟು 36 ಪಂದ್ಯಗಳನ್ನು ಆಡಿದ್ದಾರೆ. 24 ಟೆಸ್ಟ್ ಪಂದ್ಯಗಳಲ್ಲಿ ಅವರು 866 ರನ್ ಗಳಿಸಿ 50 ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ 12 ಏಕದಿನ ಪಂದ್ಯಗಳಲ್ಲಿ 86 ರನ್ ಬಾರಿಸಿರುವ ಅವರು 18 ವಿಕೆಟ್‌ಗಳನ್ನು ಸಹ ಪಡೆದಿದ್ದರು. ಬರ್ನಾರ್ಡ್ ಅವರ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯ ಇಂಗ್ಲೆಂಡ್ ವಿರುದ್ಧವಾದರೆ, ಅವರ ಕೊನೆಯ ಪಂದ್ಯ ಪಾಕಿಸ್ತಾನ ವಿರುದ್ಧವಾಗಿತ್ತು.
ತಮ್ಮ ನಾಲ್ಕು ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ, ಬರ್ನಾರ್ಡ್ ಜೂಲಿಯನ್ ಭಾರತದ ವಿರುದ್ಧ ಎಂಟು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಇದರಲ್ಲಿ 204 ರನ್ ಮತ್ತು 11 ವಿಕೆಟ್‌ಗಳನ್ನು ಸಹ ಪಡೆದಿದ್ದರು. ಇದರಲ್ಲಿ ಅವರು ನಾಲ್ಕು ಟೆಸ್ಟ್ ಪಂದ್ಯಗಳನ್ನು ಭಾರತದಲ್ಲಿ ಆಡಿದ್ದರೆ, ಉಳಿದ ನಾಲ್ಕು ಟೆಸ್ಟ್ ಪಂದ್ಯಗಳನ್ನು ವೆಸ್ಟ್ ಇಂಡೀಸ್‌ನಲ್ಲಿ ಆಡಿದರು. ಭಾರತದಲ್ಲಿ 93 ರನ್ ಜೊತೆಗೆ ಒಂಬತ್ತು ವಿಕೆಟ್‌ಗಳನ್ನು ಪಡೆದಿದ್ದ ಅವರು ವೆಸ್ಟ್ ಇಂಡೀಸ್‌ನಲ್ಲಿ 111 ರನ್ ಮತ್ತು ಎರಡು ವಿಕೆಟ್‌ಗಳನ್ನು ಪಡೆದಿದ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ