WI squad T20 vs IND: ಭಾರತ ವಿರುದ್ಧದ ಟಿ20 ಸರಣಿ ವೆಸ್ಟ್ ಇಂಡೀಸ್ ತಂಡ ಪ್ರಕಟ; ಇಬ್ಬರು ಸ್ಫೋಟಕ ಬ್ಯಾಟರ್ಸ್ ಸೇರ್ಪಡೆ

IND vs WI T20I Series: ಭಾರತ ವಿರುದ್ಧದ ಟಿ20 ಸರಣಿಗೆ ಕ್ರಿಕೆಟ್ ವೆಸ್ಟ್ ಇಂಡೀಸ್ ಹಿರಿಯ ಪುರುಷರ ಆಯ್ಕೆ ಸಮಿತಿಯು 15 ಮಂದಿ ಸದಸ್ಯರ ತಂಡವನ್ನು ಹೆಸರಿಸಿದ್ದು, ಇದರಲ್ಲಿ ನಿಕೋಲಸ್ ಪೂರನ್ ಮತ್ತು ಶಿಮ್ರೋನ್ ಹೆಟ್ಮೆರ್ ಸ್ಥಾನ ಪಡೆದುಕೊಂಡಿದ್ದಾರೆ.

WI squad T20 vs IND: ಭಾರತ ವಿರುದ್ಧದ ಟಿ20 ಸರಣಿ ವೆಸ್ಟ್ ಇಂಡೀಸ್ ತಂಡ ಪ್ರಕಟ; ಇಬ್ಬರು ಸ್ಫೋಟಕ ಬ್ಯಾಟರ್ಸ್ ಸೇರ್ಪಡೆ
Shimron Hetmyer and Nicholas Pooran
Follow us
Vinay Bhat
|

Updated on: Aug 01, 2023 | 8:44 AM

ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಗುರುವಾರ, ಆಗಸ್ಟ್ 3 ರಂದು ಪ್ರಾರಂಭವಾಗುವ ಭಾರತ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ವೆಸ್ಟ್ ಇಂಡೀಸ್ (India vs West Indies) ತಂಡವನ್ನು ವಿಂಡೀಸ್ ಕ್ರಿಕೆಟ್ ಮಂಡಳಿ ಪ್ರಕಟ ಮಾಡಿದೆ. ಕ್ರಿಕೆಟ್ ವೆಸ್ಟ್ ಇಂಡೀಸ್ (CWI) ಹಿರಿಯ ಪುರುಷರ ಆಯ್ಕೆ ಸಮಿತಿಯು 15 ಮಂದಿ ಸದಸ್ಯರ ತಂಡವನ್ನು ಹೆಸರಿಸಿದ್ದು, ಇದರಲ್ಲಿ ನಿಕೋಲಸ್ ಪೂರನ್ (Nicholas Pooran) ಮತ್ತು ಶಿಮ್ರೋನ್ ಹೆಟ್ಮೆರ್ ಸ್ಥಾನ ಪಡೆದುಕೊಂಡಿದ್ದಾರೆ.

ವಿಕೆಟ್ ಕೀಪರ್/ಬ್ಯಾಟ್ಸ್‌ಮನ್ ಶಾಯ್ ಹೋಪ್ ಮತ್ತು ವೇಗದ ಬೌಲರ್ ಇಶಾನೆ ಥೋಮಸ್ ಕೂಡ ಟಿ20 ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಹೋಪ್ ತನ್ನ ಅಂತಿಮ ಪಂದ್ಯವನ್ನು ಫೆಬ್ರವರಿ 2022 ರಲ್ಲಿ ಭಾರತ ವಿರುದ್ಧ ಆಡಿದ್ದರು. ಥಾಮಸ್ ಡಿಸೆಂಬರ್ 2021 ರಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯದಾಗಿ ಕಣಕ್ಕಿಳಿದಿದ್ದರು.

ಇನ್ನು ಭಾರತ ವಿರುದ್ಧದ ಟಿ20 ಸರಣಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿರುವ ಶಿಮ್ರೋನ್ ಹೆಟ್ಮೆರ್ ಅವರನ್ನು ಕೂಡ ಆಯ್ಕೆ ಮಾಡಲಾಗಿದೆ. ಇವರು ಆಗಸ್ಟ್ 2022 ರಲ್ಲಿ, ನ್ಯೂಜಿಲೆಂಡ್ ವಿರುದ್ಧದ ಟಿ20 ಯಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ನಿಕೋಲಸ್ ಪೂರನ್ ಅವರು ಭಾರತ ವಿರುದ್ಧ ಏಕದಿನ ಸರಣಿಗೆ ಅಲಭ್ಯರಾಗಿದ್ದರು.

ಇದನ್ನೂ ಓದಿ
Image
IND vs WI 3rd ODI: ಇಂದು ಭಾರತ-ವೆಸ್ಟ್ ಇಂಡೀಸ್ ಕೊನೆಯ ಏಕದಿನ: ಉಭಯ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ
Image
Ashes 2023: ರಣರೋಚಕ ಪಂದ್ಯದಲ್ಲಿ ಗೆದ್ದ ಇಂಗ್ಲೆಂಡ್: ಸ್ಟುವರ್ಟ್​ ಬ್ರಾಡ್​ಗೆ ಗೆಲುವಿನ ವಿದಾಯ
Image
Virat Kohli: ಮೂರನೇ ಏಕದಿನ ಪಂದ್ಯಕ್ಕೂ ವಿರಾಟ್ ಕೊಹ್ಲಿ ಡೌಟ್..!
Image
T20 World Cup Qualifier 2023: ಕೊನೆಗೂ ಗೆದ್ದು ಬೀಗಿದ ಚೀನಾ ತಂಡ

India T20 squad: ಟೀಮ್ ಇಂಡಿಯಾ ಟಿ20 ತಂಡ ಪ್ರಕಟ: ಬುಮ್ರಾಗೆ ನಾಯಕತ್ವ

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರೋನ್ ಹೆಟ್ಮೆರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೋ ಶೆಫೆರನ್ ಓಡಿಯನ್ ಸ್ಮಿತ್, ಒಶಾನೆ ಥೋಮಸ್.

ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ಐದು ಪಂದ್ಯಗಳ ಟಿ20 ಸರಣಿ:

ಮೊದಲ ಟಿ20 ಆಗಸ್ಟ್ 3 – ಬ್ರಿಯನ್ ಲಾರಾ ಸ್ಟೇಡಿಯಂ, ಟ್ರಿನಿಡಾಟ್

ದ್ವಿತೀಯ ಟಿ20 ಆಗಸ್ಟ್ 6 – ಪ್ರೊವಿಡೆನ್ಸ್ ಸ್ಟೇಡಿಯಂ, ಗಯಾನ

ತೃತೀಯ ಟಿ20 ಆಗಸ್ಟ್ 8 – ಪ್ರೊವಿಡೆನ್ಸ್ ಸ್ಟೇಡಿಯಂ, ಗಯಾನ

ನಾಲ್ಕನೇ ಟಿ20 ಆಗಸ್ಟ್ 12 – ಸೆಂಟ್ರಲ್ ಬ್ರೊವರ್ಡ್ ಪಾರ್ಕ್ ಸ್ಟೇಡಿಯಂ, ಫ್ಲೋರಿಡಾ

ಐದನೇ ಟಿ20 ಆಗಸ್ಟ್ 13 – ಸೆಂಟ್ರಲ್ ಬ್ರೊವರ್ಡ್ ಪಾರ್ಕ್ ಸ್ಟೇಡಿಯಂ, ಫ್ಲೋರಿಡಾ

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ