IND vs WI: ಟೀಮ್ ಇಂಡಿಯಾ ವಿರುದ್ದದ ಸರಣಿಗೆ ಬಲಿಷ್ಠ ಟಿ20 ತಂಡ ಪ್ರಕಟಿಸಿದ ವೆಸ್ಟ್ ಇಂಡೀಸ್
West Indies squad for India T20 series: ಕೀರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್.
ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಸರಣಿ ಫೆಬ್ರವರಿ 6 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 6 ಪಂದ್ಯಗಳು ನಡೆಯಲಿದ್ದು, ಅದರಂತೆ 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಮೊದಲು ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಫೆಬ್ರವರಿ 16 ರಿಂದ ಟಿ20 ಪಂದ್ಯಗಳು ಶುರುವಾಗಲಿದೆ. ಈಗಾಗಲೇ ಏಕದಿನ ತಂಡವನ್ನು ಪ್ರಕಟಿಸಿದ್ದ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ಇದೀಗ ಈ ಸರಣಿಗಾಗಿ ಟಿ20 ತಂಡವನ್ನು ಘೋಷಿಸಿದೆ. 16 ಸದಸ್ಯರ ಈ ತಂಡವನ್ನು ಕೀರನ್ ಪೊಲಾರ್ಡ್ ಮುನ್ನಡೆಸಲಿದ್ದು, ಉಪನಾಯಕನಾಗಿ ನಿಕೋಲಸ್ ಪೂರನ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ತಂಡದಲ್ಲಿ ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್‌ಮನ್‌ಗಳಾದ ಕ್ರಿಸ್ ಗೇಲ್, ಶಿಮ್ರಾನ್ ಹೆಟ್ಮೆಯರ್ ಮತ್ತು ಎವಿನ್ ಲೂಯಿಸ್‌ಗೆ ಸ್ಥಾನ ನೀಡಿಲ್ಲ ಎಂಬುದು ವಿಶೇಷ. ಇನ್ನು ಕೆಲ ದಿನಗಳ ಹಿಂದೆಯಷ್ಟೇ ಇಂಗ್ಲೆಂಡ್ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ರೋವ್ಮನ್ ಪೊವೆಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ-ವೆಸ್ಟ್ ಇಂಡೀಸ್ T20 ಸರಣಿಯ ವೇಳಾಪಟ್ಟಿ: ಫೆಬ್ರವರಿ 16 – 1 ನೇ T20, ಕೋಲ್ಕತ್ತಾ ಫೆಬ್ರವರಿ 18 – 2 ನೇ T20, ಕೋಲ್ಕತ್ತಾ ಫೆಬ್ರವರಿ 20 – 3 ನೇ T20, ಕೋಲ್ಕತ್ತಾ
ಭಾರತ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಬ್ರೇಮನ್ ಕಿಂಗ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಕೈಲ್ ಮೈಯರ್ಸ್, ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.
ಟಿ20 ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್ ಮತ್ತು ಹರ್ಷಲ್ ಪಟೇಲ್
ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:
ಫೆಬ್ರವರಿ 6 – 1 ನೇ ODI, ಅಹಮದಾಬಾದ್ ಫೆಬ್ರವರಿ 9 – 2 ನೇ ODI, ಅಹಮದಾಬಾದ್ ಫೆಬ್ರವರಿ 11 – 3 ನೇ ODI, ಅಹಮದಾಬಾದ್
ಏಕದಿನ ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಹಾರ್ , ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಅವೇಶ್ ಖಾನ್.
ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ಕೆಮರ್ ರೋಚ್, ಎನ್‌ಕ್ರುಮಾ ಬೊನ್ನರ್, ಬ್ರಾಂಡನ್ ಕಿಂಗ್, ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ಶಮ್ರಾ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮರಿಯಾ ಶೆಫರ್ಡ್ , ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.
ಇದನ್ನೂ ಓದಿ: IND vs WI: ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿದ್ದ 5 ಆಟಗಾರರು ಟೀಮ್ ಇಂಡಿಯಾದಿಂದ ಔಟ್..!
ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ
ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್
(West Indies name 16-man squad for India T20 series)