West Indies: ವೆಸ್ಟ್ ಇಂಡೀಸ್ ಸ್ಟಾರ್ ಆಟಗಾರನಿಗೆ 4 ವರ್ಷ ನಿಷೇಧ..!

T20 World Cup 2022: ವೆಸ್ಟ್ ಇಂಡೀಸ್ ತಂಡವು ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯ ಬಳಿಕ ಟಿ20 ವಿಶ್ವಕಪ್​ನಲ್ಲಿ ಅರ್ಹತಾ ಪಂದ್ಯಗಳನ್ನು ಆಡಲಿದೆ. ಅದರಂತೆ ಅಕ್ಟೋಬರ್ 17 ರಂದು ಹೋಬರ್ಟ್‌ನಲ್ಲಿ ನಡೆಯಲಿರುವ ಅರ್ಹತಾ ಸುತ್ತಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

West Indies: ವೆಸ್ಟ್ ಇಂಡೀಸ್ ಸ್ಟಾರ್ ಆಟಗಾರನಿಗೆ 4 ವರ್ಷ ನಿಷೇಧ..!
john campbell
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 08, 2022 | 1:55 PM

ವೆಸ್ಟ್ ಇಂಡೀಸ್ ತಂಡವು ಟಿ20 ವಿಶ್ವಕಪ್​ಗಾಗಿ ಭರ್ಜರಿ ತಯಾರಿಯಲ್ಲಿರುವಾಗಲೇ, ಇತ್ತ ಪ್ರಮುಖ ಆಟಗಾರ ಜಾನ್​ ಕ್ಯಾಂಪ್​ಬೆಲ್​ಗೆ ಕ್ರಿಕೆಟ್​ನಿಂದ ನಾಲ್ಕು ವರ್ಷ ನಿಷೇಧ ಹೇರಲಾಗಿದೆ. ಡೋಪಿಂಗ್ ವಿರೋಧಿ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ವೆಸ್ಟ್ ಇಂಡೀಸ್ ಆರಂಭಿಕ ಆಟಗಾರರನ್ನು ಬ್ಯಾನ್ ಮಾಡಲಾಗಿದೆ. ಕ್ರೀಡೆಗಳಲ್ಲಿ ಮಾದಕ ವಸ್ತು ಸೇವನೆ(ಡೋಪಿಂಗ್) ನಿರ್ಮೂಲನೆಗಾಗಿ ಡೋಪಿಂಗ್ ಟೆಸ್ಟ್​ಗಳನ್ನು ಮಾಡಲಾಗುತ್ತದೆ. ಆದರೆ ಜಾನ್ ಕ್ಯಾಂಪ್​ಬೆಲ್​ ಅವರು ಏಪ್ರಿಲ್‌ನಲ್ಲಿ ರಕ್ತದ ಮಾದರಿಯನ್ನು ನೀಡಲು ನಿರಾಕರಿಸಿದ್ದಾರೆ.

ಕ್ರೀಡಾಪಟುಗಳು ಡೋಪಿಂಗ್ ವಿರೋಧಿ ನಿಯಮ ಉಲ್ಲಂಘನೆಯನ್ನು ಮಾಡಿದರೆ ಅವರ ವಿರುದ್ಧ ಕ್ರಮಕೈಗೊಳ್ಳಬಹುದು. ಅದರಂತೆ ಇದೀಗ ಜಮೈಕಾ ಡೋಪಿಂಗ್ ಆಯೋಗದ (JADCO) ವಿಂಡೀಸ್ ಆಟಗಾರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಹೀಗಾಗಿ ವೆಸ್ಟ್ ಇಂಡೀಸ್ ಆಟಗಾರನ ಮೇಲೆ ನಿಷೇಧ ಹೇರಲಾಗಿದೆ.

ಜನವರಿ 2019 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಕ್ಯಾಂಪ್‌ಬೆಲ್, ಈ ವರ್ಷದ ಆರಂಭದಲ್ಲಿ ನಡೆದ ಟೆಸ್ಟ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯದಾಗಿ ವೆಸ್ಟ್ ಇಂಡೀಸ್ ಅನ್ನು ಪ್ರತಿನಿಧಿಸಿದ್ದರು. 29ರ ಹರೆಯದ ಆರಂಭಿಕ ಆಟಗಾರ 20 ಟೆಸ್ಟ್‌ಗಳು, ಆರು ಏಕದಿನ ಮತ್ತು ಎರಡು ಟಿ20 ಪಂದ್ಯಗಳಲ್ಲಿ ವಿಂಡೀಸ್ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

20 ಟೆಸ್ಟ್‌ಗಳಲ್ಲಿ, ಎಡಗೈ ಬ್ಯಾಟರ್ ಮೂರು ಅರ್ಧಶತಕಗಳೊಂದಿಗೆ 888 ರನ್ ಕಲೆಹಾಕಿದ್ದಾರೆ. ಹಾಗೆಯೇ 2019 ರಲ್ಲಿ ಐರ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ 137 ಎಸೆತಗಳಲ್ಲಿ 15 ಬೌಂಡರಿ ಮತ್ತು ಆರು ಸಿಕ್ಸರ್‌ಗಳೊಂದಿಗೆ 179 ರನ್ ಬಾರಿಸಿ ಮಿಂಚಿದ್ದರು. ಇದೀಗ ಡೋಪಿಂಗ್ ವಿರೋಧಿ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಜಾನ್​ ಕ್ಯಾಂಪ್​ಬೆಲ್​ಗೆ ಕ್ರಿಕೆಟ್​ನಿಂದ ನಾಲ್ಕು ವರ್ಷ ನಿಷೇಧ ಹೇರಲಾಗಿದ್ದು, ಹೀಗಾಗಿ ಮತ್ತೆ ಮೈದಾನಕ್ಕೆ ಮರಳಲು 2026 ರವರೆಗೆ ಕಾಯಲೇಬೇಕು.

ಸದ್ಯ ವೆಸ್ಟ್ ಇಂಡೀಸ್ ತಂಡವು ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯ ಬಳಿಕ ಟಿ20 ವಿಶ್ವಕಪ್​ನಲ್ಲಿ ಅರ್ಹತಾ ಪಂದ್ಯಗಳನ್ನು ಆಡಲಿದೆ. ಅದರಂತೆ ಅಕ್ಟೋಬರ್ 17 ರಂದು ಹೋಬರ್ಟ್‌ನಲ್ಲಿ ನಡೆಯಲಿರುವ ಅರ್ಹತಾ ಸುತ್ತಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ