ಭಾರತದ ವಿರುದ್ಧದ ಸರಣಿಗೆ ಬಲಿಷ್ಠ ವೆಸ್ಟ್ ಇಂಡೀಸ್ ತಂಡ ಪ್ರಕಟ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ವೈಟ್ ಬಾಲ್ ಸರಣಿಯು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಭಾರತದಲ್ಲಿ ಜರುಗಲಿರುವ ಈ ಸಿರೀಸ್​​ನಲ್ಲಿ ಮೊದಲಿಗೆ ಮೂರು ಮ್ಯಾಚ್​​​ಗಳ ಏಕದಿನ ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ.

ಭಾರತದ ವಿರುದ್ಧದ ಸರಣಿಗೆ ಬಲಿಷ್ಠ ವೆಸ್ಟ್ ಇಂಡೀಸ್ ತಂಡ ಪ್ರಕಟ
ವೆಸ್ಟ್ ಇಂಡೀಸ್ ತಂಡ
Image Credit source: GettyImages

Updated on: Sep 20, 2026 | 7:25 AM

ಭಾರತ ವಿರುದ್ಧ ಸೆಪ್ಟೆಂಬರ್ 27 ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಹಾಗೂ ಐದು ಪಂದ್ಯಗಳ ಟಿ20 ಸರಣಿಗಾಗಿ ವೆಸ್ಟ್ ಇಂಡೀಸ್​ ತಂಡವನ್ನು ಪ್ರಕಟಿಸಲಾಗಿದೆ. ಈ ಎರಡೂ ತಂಡಗಳನ್ನು ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ಶಾಯ್ ಹೋಪ್ ಮುನ್ನಡೆಸಲಿದ್ದಾರೆ.

ಕ್ಯಾಂಪ್ಬೆಲ್ ಎಂಟ್ರಿ, ಹೋಲ್ಡರ್‌ಗೆ ವಿಶ್ರಾಂತಿ:

ಗಾಯದಿಂದ ಚೇತರಿಸಿಕೊಂಡಿರುವ ಅನುಭವಿ ಆರಂಭಿಕ ಆಟಗಾರ ಜಾನ್ ಕ್ಯಾಂಪ್ಬೆಲ್ ವೆಸ್ಟ್ ಇಂಡೀಸ್ ಏಕದಿನ ತಂಡಕ್ಕೆ ಮರಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಕೆರಿಬಿಯನ್ ಪ್ರೀಮಿಯರ್ ಲೀಗ್ ನಲ್ಲಿ ಅಬ್ಬರಿಸಿದ್ದ ಯುವ ಆಟಗಾರ ಕಮಿಲ್ ಪೂರನ್ ಟಿ20 ತಂಡದಲ್ಲಿ ಚೊಚ್ಚಲ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಇನ್ನು ಹಿರಿಯ ಆಲ್‌ರೌಂಡರ್ ಜೇಸನ್ ಹೋಲ್ಡರ್ ಅವರಿಗೆ ಈ ಸಂಪೂರ್ಣ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಶಿಮ್ರಾನ್ ಹೆಟ್ಮೆಯರ್ ಕೇವಲ ಟಿ20 ಸರಣಿಗೆ ಮಾತ್ರ ಲಭ್ಯವಿರಲಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್​ ಏಕದಿನ ಹಾಗೂ ಟಿ20 ತಂಡಗಳು ಈ ಕೆಳಗಿನಂತಿವೆ…

ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ), ಜ್ಯುವೆಲ್ ಆಂಡ್ರ್ಯೂ, ಜಾನ್ ಕ್ಯಾಂಪ್ಬೆಲ್, ಕೀಸಿ ಕಾರ್ಟಿ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜಸ್ಟಿನ್ ಗ್ರೀವ್ಸ್, ಅಮೀರ್ ಜಾಂಗೂ, ಅಲ್ಜಾರಿ ಜೋಸೆಫ್, ಶಮರ್ ಜೋಸೆಫ್, ವಿಟೆಲ್ ಲಾಸ್, ಗುಡಕೇಶ್ ಮೋಟಿ, ಕೀಮೋ ಪೌಲ್, ಶೆರ್ಫೇನ್ ರದರ್‌ಫೋರ್ಡ್, ಜೇಡನ್ ಸೀಲ್ಸ್.

ವೆಸ್ಟ್ ಇಂಡೀಸ್ ಟಿ20 ತಂಡ: ಶಾಯ್ ಹೋಪ್ (ಕ್ಯಾಪ್ಟನ್), ಜ್ಯುವೆಲ್ ಆಂಡ್ರ್ಯೂ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಶಿಮ್ರಾನ್ ಹೆಟ್ಮೆಯರ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಗುಡಾಕೇಶ್ ಮೋಟಿ, ಕೀಮೋ ಪೌಲ್, ಕಮಿಲ್ ಪೂರನ್, ರೋವ್‌ಮನ್ ಪೊವೆಲ್, ಶೆರ್ಫೇನ್ ರದರ್‌ಫೋರ್ಡ್, ಕ್ವೆಂಟಿನ್ ಸ್ಯಾಂಪ್ಸನ್, ರೊಮಾರಿಯೋ ಶೆಫರ್ಡ್, ಶಮರ್ ಸ್ಪ್ರಿಂಗರ್.

ಇದನ್ನೂ ಓದಿ: ನ್ಯೂಝಿಲೆಂಡ್​ನಲ್ಲಿ ‘ಟೀಮ್ ಇಂಡಿಯಾ ಎಫೆಕ್ಟ್​’

ಭಾರತ ಏಕದಿನ ತಂಡ: ಶುಭ್‌ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆ.ಎಲ್. ರಾಹುಲ್ (ಉಪನಾಯಕ), ಧ್ರುವ್ ಜುರೆಲ್, ನಿತಿಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಯಶಸ್ವಿ ಜೈಸ್ವಾಲ್, ನಮನ್ ಧೀರ್.

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್​, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us