AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಟಿ20 ವಿಶ್ವಕಪ್​ಗೆ 2 ಬಾರಿಯ ಚಾಂಪಿಯನ್ ತಂಡ ಪ್ರಕಟ

T20 World Cup 2026: 2026 ಟಿ20 ವಿಶ್ವಕಪ್‌ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯ ವಹಿಸಲಿದ್ದು, ಫೆಬ್ರವರಿ 7 ರಿಂದ ಪಂದ್ಯಾವಳಿ ಆರಂಭವಾಗಲಿದೆ. ಈ ಬಾರಿಯ ವಿಶ್ವಕಪ್‌ಗೆ ವೆಸ್ಟ್ ಇಂಡೀಸ್ ತನ್ನ 15 ಸದಸ್ಯರ ತಂಡವನ್ನು ಘೋಷಿಸಿದೆ. ಶೈ ಹೋಪ್ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ತಂಡದಲ್ಲಿ ಯುವ ಪ್ರತಿಭೆ ಕ್ವೆಂಟಿನ್ ಸ್ಯಾಂಪ್ಸನ್, ಅನುಭವಿ ಜೇಸನ್ ಹೋಲ್ಡರ್ ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ 'ಸಿ' ಗುಂಪಿನಲ್ಲಿ ಸ್ಕಾಟ್‌ಲೆಂಡ್, ಇಂಗ್ಲೆಂಡ್ ವಿರುದ್ಧ ಆಡಲಿದೆ. ಈ ಬಲಿಷ್ಠ ತಂಡ ಮೂರನೇ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದೆ.

T20 World Cup 2026: ಟಿ20 ವಿಶ್ವಕಪ್​ಗೆ 2 ಬಾರಿಯ ಚಾಂಪಿಯನ್ ತಂಡ ಪ್ರಕಟ
West Indies
ಪೃಥ್ವಿಶಂಕರ
|

Updated on:Jan 26, 2026 | 9:58 PM

Share

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ 2026 ರ ಟಿ20 ವಿಶ್ವಕಪ್ (2026 T20 World Cup) ಫೆಬ್ರವರಿ 7 ರಿಂದ ಆರಂಭವಾಗಲಿದೆ. ಒಟ್ಟು 20 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ 17ನೇ ತಂಡವಾಗಿ ವೆಸ್ಟ್ ಇಂಡೀಸ್ 15 ಸದಸ್ಯರ ತಂಡವನ್ನು ( West Indies squad) ಘೋಷಿಸಿದೆ. ವೆಸ್ಟ್ ಇಂಡೀಸ್ ಈ ಟೂರ್ನಿಯಲ್ಲಿ ಎರಡು ಬಾರಿ ಚಾಂಪಿಯನ್ ಆಗಿದ್ದು, 2016 ರಲ್ಲಿ ಭಾರತದಲ್ಲಿ ಆಯೋಜಿಸಲಾಗಿದ್ದ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇನ್ನು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಶೈ ಹೋಪ್ ತಂಡವನ್ನು ಮುನ್ನಡೆಸಲಿದ್ದು, ಶಿಮ್ರಾನ್ ಹೆಟ್ಮೈಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಜೇಸನ್ ಹೋಲ್ಡರ್, ಜಾನ್ಸನ್ ಚಾರ್ಲ್ಸ್, ಬ್ರಾಂಡನ್ ಕಿಂಗ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಬಲಿಷ್ಠ ವಿಂಡೀಸ್ ತಂಡ ಪ್ರಕಟ

ಏಳು ದಿನಗಳ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕ್ವೆಂಟಿನ್ ಸ್ಯಾಂಪ್ಸನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಕ್ವೆಂಟಿನ್ ಸ್ಯಾಂಪ್ಸನ್ ಒಂಬತ್ತು ಪಂದ್ಯಗಳಲ್ಲಿ 34.43 ಸರಾಸರಿ ಮತ್ತು 151.57 ಸ್ಟ್ರೈಕ್ ರೇಟ್‌ನಲ್ಲಿ 241 ರನ್ ಗಳಿಸಿದ್ದರು. ಇದರಲ್ಲಿ ಎರಡು ಅರ್ಧಶತಕಗಳು ಸೇರಿದ್ದವು. ಜೇಸನ್ ಹೋಲ್ಡರ್, ರೋವ್‌ಮನ್ ಪೊವೆಲ್ ಮತ್ತು ರೊಮಾರಿಯೊ ಶೆಫರ್ಡ್ ಕೂಡ ತಂಡಕ್ಕೆ ಮರಳಿದ್ದಾರೆ. ಶಮರ್ ಜೋಸೆಫ್ ಅವರನ್ನು ವಿಶ್ವಕಪ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಹೋಲ್ಡರ್, ಮ್ಯಾಥ್ಯೂ ಫೋರ್ಡ್ ಮತ್ತು ಜೇಡನ್ ಸೀಲ್ಸ್ ವೇಗದ ಬೌಲಿಂಗ್ ವಿಭಾಗವನ್ನು ನಿರ್ವಹಿಸಲಿದ್ದಾರೆ.

ವೆಸ್ಟ್ ಇಂಡೀಸ್ ತಂಡವು ಗ್ರೂಪ್ ಸಿ ನಲ್ಲಿದ್ದು, ಫೆಬ್ರವರಿ 7 ರಂದು ಸ್ಕಾಟ್ಲೆಂಡ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆಯಲಿದೆ. ನಂತರ ಫೆಬ್ರವರಿ 11 ರಂದು ಇಂಗ್ಲೆಂಡ್ ವಿರುದ್ಧ, ಫೆಬ್ರವರಿ 15 ರಂದು ನೇಪಾಳ ಮತ್ತು ಫೆಬ್ರವರಿ 19 ರಂದು ಇಟಲಿ ವಿರುದ್ಧ ಆಡಲಿದೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ಈ ಗುಂಪಿನಲ್ಲಿ ಎರಡು ಬಲಿಷ್ಠ ತಂಡಗಳಾಗಿವೆ. ಆದ್ದರಿಂದ, ಈ ಎರಡು ತಂಡಗಳು ಈ ಗುಂಪಿನಿಂದ ಮುಂದಿನ ಸುತ್ತಿಗೆ ಟಿಕೆಟ್ ಪಡೆಯಬಹುದು. ಆದರೆ ಟಿ20 ಕ್ರಿಕೆಟ್​ನಲ್ಲಿ ಏನು ಬೇಕಾದರೂ ಆಗಬಹುದು.

2026 ರ ಟಿ20 ವಿಶ್ವಕಪ್‌ಗಾಗಿ ವೆಸ್ಟ್ ಇಂಡೀಸ್ ತಂಡ: ಶೈ ಹೋಪ್ (ನಾಯಕ), ಶಿಮ್ರಾನ್ ಹೆಟ್ಮೈಯರ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಮ್ಯಾಥ್ಯೂಸ್ ಫೋರ್ಡ್, ಜೇಸನ್ ಹೋಲ್ಡರ್, ಅಕೀಲ್ ಹುಸೇನ್, ಶೆಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಕೇಶ್ ಮೋತಿ, ರೋವ್‌ಮನ್ ಪೊವೆಲ್, ಶೆರ್ಫೇನ್ ರುದರ್‌ಫೋರ್ಡ್, ಕ್ವೆಂಟಿನ್ ಸ್ಯಾಂಪ್ಸನ್, ಜೇಡೆನ್ ಸೀಲ್ಸ್, ರೊಮಾರಿಯೊ ಶೆಫರ್ಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Mon, 26 January 26

ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!