ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ರೋಚಕ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಂಡ ಬೆನ್ನಲ್ಲೇ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಇದೀಗ ಭಾರತಕ್ಕೆ (India vs West Indies) ಪ್ರಯಾಣ ಬೆಳೆಸಿದೆ. ವೆಸ್ಟ್ ಇಂಡೀಸ್ ಕ್ರಿಕೆಟ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಆಟಗಾರರು ಭಾರತದ ಫ್ಲೈಟ್ ಏರುತ್ತಿರುವ ಫೋಟೋವನ್ನು ಹಂಚಿಕೊಂಡಿದೆ. ಭಾರತಕ್ಕೆ ಬರುವ ಮುನ್ನ ಮಾತನಾಡಿದ ವಿಂಡೀಸ್ ಆಟಗಾರ ಜೇಸನ್ ಹೋಲ್ಡರ್ (Jason Holder), ಭಾರತವನ್ನು ಭಾರತದ ನೆಲದಲ್ಲೇ ಸೋಲಿಸುವುದು ಕಷ್ಟ ನಿಜ ಆದರೆ ಅದು ಕೆರಿಬಿಯನ್ ತಂಡಕ್ಕೆ ಸಾಧ್ಯವಿಲ್ಲ ಎಂದಲ್ಲ ಎಂಬ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. “ಭಾರತದ್ದು ನಮಗೊಂದು ದೊಡ್ಡ ಸರಣಿ. ಭಾರತ ಅತ್ಯುತ್ತಮ ಆಲ್ರೌಂಡರ್ ತಂಡ. ಅವರನ್ನು ಸೋಲಿಸುವುದು ಕಷ್ಟ ಆದರೆ, ಅದು ಅಸಾಧ್ಯವಲ್ಲ. ವೆಸ್ಟ್ ಇಂಡೀಸ್ ತಂಡ ಭಾರತವನ್ನು ಭಾರತದ (Team India) ನೆಲದಲ್ಲೇ ಸೋಲಿಸಲಿದೆ,” ಎಂದು ಹೇಳಿದ್ದಾರೆ.
ಈಗಾಗಲೇ ವಿಂಡೀಸ್ ಕ್ರಿಕೆಟ್ ಮಂಡಳಿ ಭಾರತ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡವನ್ನು ಹೆಸರಿಸಿದೆ. ಕೆಲವೊಂದು ಅಚ್ಚರಿಯ ಆಯ್ಕೆ ನಡೆದಿದ್ದು ಮಾರಕ ವೇಗಿ ಕೇಮರ್ ರೋಚ್ ಏಕದಿನ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಿದ್ದಾರೆ. ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ಎನ್ಕ್ರುಮ್ ಬೊನ್ನೆರ್ ಮತ್ತು ಬ್ರಾಂಡನ್ ಕಿಂಗ್ ತಂಡ ಸೇರಿಕೊಂಡಿದ್ದಾರೆ. ಕೇಮರ್ ರೋಚ್ 92 ಏಕದಿನ ಪಂದ್ಯಗಳನ್ನು ಆಡಿದ್ದು 124 ವಿಕೆಟ್ ಕಿತ್ತಿದ್ದಾರೆ. ಇದರ ಜೊತೆಗೆ ಟಿ20 ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟ ಮಾಡಿದ್ದು, ದೈತ್ಯ ಆಲ್‌ರೌಂಡರ್ ಆಂಡ್ರೆ ರಸೆಲ್ ಮತ್ತೊಮ್ಮೆ ಸ್ಥಾನ ಗಿಟ್ಟಿಸಲು ವಿಫಲರಾಗಿದ್ದಾರೆ. ಈ ನಡುವೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಶತಕ ಸಿಡಿಸಿದ ಯುವ ಬ್ಯಾಟ್ಸ್‌ಮನ್ ರೋವ್ಮನ್ ಪೊವೆಲ್ ತಮ್ಮ ಸ್ಥಾನ ಭದ್ರ ಪಡಿಸಿಕೊಂಡಿದ್ದಾರೆ.
ಏಕದಿನ ಸರಣಿಯ ಮೂರು ಪಂದ್ಯಗಳನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೊಟೇರಾದ ಸರ್ದಾರ್ ಪಟೇಲ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂ ಆಗಿ ಹೊಸ ವಿನ್ಯಾಸ ಪಡೆದ ಬಳಿಕ ಇದೇ ಮೊದಲ ಬಾರಿ ಏಕದಿನ ಕ್ರಿಕೆಟ್ ಸರಣಿಗೆ ಆತಿಥ್ಯ ವಹಿಸುತ್ತಿರುವುದು ವಿಶೇಷವಾಗಿದೆ. ಇದಾದ ಬಳಿಕ ಟಿ20 ಸರಣಿಯ 3 ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಆಯೋಜನೆಯಾಗಲಿದೆ.
ಏಕದಿನ ಪಂದ್ಯಕ್ಕೆ ವೆಸ್ಟ್ ಇಂಡೀಸ್ ತಂಡ: ಕೀರೊನ್ ಪೊಲಾರ್ಡ್ (ನಾಯಕ), ಕೀಮರ್ ರೋಚ್, ಎನ್ಕ್ರುಮ್ ಬೊನ್ನೆರ್, ಬ್ರಾಂಡನ್ ಕಿಂಗ್, ಫಾಬಿನ್ ಅಲೆನ್, ಡ್ಯಾರೆನ್ ಬ್ರಾವೋ, ಶಮರ್ ಬ್ರೋಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹುಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮಾರಿಯೊ ಶೆಪರ್ಡ್, ಓಡೆನ್ ಸ್ಮಿತ್, ಹೇಡನ್ ವಾಲ್ಶ್.
ಭಾರತ ಏಕದಿನ ತಂಡ: ರೋಹಿತ್ ಶರ್ಮ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೀ), ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್.
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಸರ್ ಪಟೇಲ್, ಯುಜವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್, ಅವೇಶ್
ವೆಸ್ಟ್ ಇಂಡೀಸ್ ಟಿ20 ತಂಡ: ಕೀರೊನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್, ಫಾಬಿನ್ ಅಲೆನ್, ಡ್ಯಾರೆನ್ ಬ್ರಾವೋ, ರಾಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡಾಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹುಸೈನ್, ಬ್ರಾಂಡನ್ ಕಿಂಗ್, ರೋವ್ಮನ್ ಪೊವೆಲ್, ಓಡೆನ್ ಸ್ಮಿತ್, ರೊಮಾರಿಯೊ ಶೆಪರ್ಡ್, ಕೈಲ್ ಮೇಯರ್ಸ್, ಹೇಡನ್ ವಾಲ್ಶ್.
IPL 2022: ಭಾರತದಲ್ಲಿ ಈ ಬಾರಿ ವಿಶೇಷವಾಗಿರುತ್ತೆ ಮಿಲಿಯನ್ ಡಾಲರ್ ಟೂರ್ನಿ: ಐಪಿಎಲ್ ಫ್ಯಾನ್ಸ್ಗೆ ಸಿಹಿ ಸುದ್ದಿ
India vs West Indies: ಅಹ್ಮದಾಬಾದ್ಗೆ ತಲುಪಿದ ಟೀಮ್ ಇಂಡಿಯಾ ಆಟಗಾರರು: ಕ್ವಾರಂಟೈನ್ನಲ್ಲಿ ರೋಹಿತ್ ಪಡೆ