AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WI vs ENG: ರಸೆಲ್ ಮಿಂಚಿಂಗ್: ವಿಶ್ವ ಚಾಂಪಿಯನ್ನರಿಗೆ ಸೋಲುಣಿಸಿದ ವೆಸ್ಟ್ ಇಂಡೀಸ್

West Indies vs England: 172 ರನ್​ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡಕ್ಕೆ ಬ್ರಾಂಡನ್ ಕಿಂಗ್ (22) ಹಾಗೂ ಕೈಲ್ ಮೇಯರ್ಸ್ (35) ಸ್ಪೋಟಕ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಶಾಯ್ ಹೋಪ್ 36 ರನ್​ಗಳನ್ನು ಬಾರಿಸಿ ವಿಕೆಟ್ ಒಪ್ಪಿಸಿದರು.

WI vs ENG: ರಸೆಲ್ ಮಿಂಚಿಂಗ್: ವಿಶ್ವ ಚಾಂಪಿಯನ್ನರಿಗೆ ಸೋಲುಣಿಸಿದ ವೆಸ್ಟ್ ಇಂಡೀಸ್
West Indies
TV9 Web
| Edited By: |

Updated on: Dec 13, 2023 | 2:29 PM

Share

ಬಾರ್ಬಡೋಸ್​ನ ಕಿಂಗ್​ಸ್ಟನ್ ಓವಲ್ ಮೈದಾನದಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ತಂಡದ ನಾಯಕ ರೋವ್​​ಮನ್ ಪೊವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು.

ಆರಂಭಿಕರಾದ ಫಿಲ್ ಸಾಲ್ಟ್ (40) ಹಾಗೂ ಜೋಸ್ ಬಟ್ಲರ್ (39) ಮೊದಲ ವಿಕೆಟ್​ಗೆ 77 ರನ್​ಗಳ ಜೊತೆಯಾಟವಾಡಿದರು. ಆ ಬಳಿಕ ಬಂದ ವಿಲ್ ಜಾಕ್ಸ್ 17 ರನ್​ಗಳ ಕೊಡುಗೆ ನೀಡಿದರೆ, ಬೆನ್ ಡಕೆಟ್ 14 ರನ್ ಬಾರಿಸಿ ಔಟಾದರು.

ಈ ಹಂತದಲ್ಲಿ ಮತ್ತೆ ದಾಳಿಗಿಳಿದ ಅನುಭವಿ ಆಟಗಾರ ಆ್ಯಂಡ್ರೆ ರಸೆಲ್ ಲಿಯಾಮ್ ಲಿವಿಂಗ್​ಸ್ಟೋನ್ (27) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಅಂತಿಮವಾಗಿ 19.3 ಓವರ್​ಗಳಲ್ಲಿ 171 ರನ್​ಗಳಿಸಿ ಇಂಗ್ಲೆಂಡ್ ತಂಡವು ಆಲೌಟ್ ಆಯಿತು. ವೆಸ್ಟ್ ಇಂಡೀಸ್ ಪರ ಆ್ಯಂಡ್ರೆ ರಸೆಲ್ 4 ಓವರ್​ಗಳಲ್ಲಿ ಕೇವಲ 19 ರನ್ ನೀಡಿ 3 ವಿಕೆಟ್ ಕಬಳಿಸಿದರು.

172 ರನ್​ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡಕ್ಕೆ ಬ್ರಾಂಡನ್ ಕಿಂಗ್ (22) ಹಾಗೂ ಕೈಲ್ ಮೇಯರ್ಸ್ (35) ಸ್ಪೋಟಕ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಶಾಯ್ ಹೋಪ್ 36 ರನ್​ಗಳನ್ನು ಬಾರಿಸಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಇಂಗ್ಲೆಂಡ್ ಬೌಲರ್​ಗಳು ನಿಕೋಲಸ್ ಪೂರನ್ (13) ಹಾಗೂ ಶಿಮ್ರಾನ್ ಹೆಟ್ಮೆಯರ್ (1) ರನ್ನು ಬ್ಯಾಕ್ ಟು ಬ್ಯಾಕ್ ಔಟ್ ಮಾಡಿದರು. ಈ ವೇಳೆ ಜೊತೆಗೂಡಿದ ರೋವ್​ಮನ್ ಪೊವೆಲ್ ಹಾಗೂ ಆ್ಯಂಡ್ರೆ ರಸೆಲ್ ಇಡೀ ಪಂದ್ಯದ ಗತಿ ಬದಲಿಸಿದರು.

ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಪೊವೆಲ್ 15 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 31 ರನ್ ಬಾರಿಸಿದರು. ಮತ್ತೊಂದೆಡೆ ಆ್ಯಂಡ್ರೆ ರಸೆಲ್ 14 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 29 ರನ್ ಬಾರಿಸಿ 18.1 ಓವರ್​ಗಳಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ 2022ರ ಟಿ20 ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ತಂಡ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ವೆಸ್ಟ್ ಇಂಡೀಸ್​ ಪ್ಲೇಯಿಂಗ್ ಇಲೆವೆನ್: ಬ್ರಾಂಡನ್ ಕಿಂಗ್ , ಕೈಲ್ ಮೇಯರ್ಸ್ , ಶಾಯ್ ಹೋಪ್ , ನಿಕೋಲಸ್ ಪೂರನ್ (ವಿಕೆಟ್ ಕೀಪರ್) , ಶಿಮ್ರಾನ್ ಹೆಟ್ಮೆಯರ್ , ರೋವ್ಮನ್ ಪೊವೆಲ್ (ನಾಯಕ) , ಆ್ಯಂಡ್ರೆ ರಸೆಲ್ , ರೊಮಾರಿಯೋ ಶೆಫರ್ಡ್ , ಜೇಸನ್ ಹೋಲ್ಡರ್ , ಅಕೇಲ್ ಹೋಸೇನ್ , ಅಲ್ಜಾರಿ ಜೋಸೆಫ್.

ಇದನ್ನೂ ಓದಿ: Suryakumar Yadav: ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್ ಯಾದವ್

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಜೋಸ್ ಬಟ್ಲರ್ (ನಾಯಕ) , ಫಿಲಿಪ್ ಸಾಲ್ಟ್ , ವಿಲ್ ಜಾಕ್ಸ್ , ಬೆನ್ ಡಕೆಟ್ , ಹ್ಯಾರಿ ಬ್ರೂಕ್ , ಲಿಯಾಮ್ ಲಿವಿಂಗ್ಸ್ಟೋನ್ , ಸ್ಯಾಮ್ ಕರನ್ , ಕ್ರಿಸ್ ವೋಕ್ಸ್ , ರೆಹಾನ್ ಅಹ್ಮದ್ , ಆದಿಲ್ ರಶೀದ್ , ಟೈಮಲ್ ಮಿಲ್ಸ್.

Follow Us
TV9 Web
TV9 Web

TV9 Kannada

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ