ಬಾರ್ಬಡೋಸ್ನ ಕಿಂಗ್ಸ್ಟನ್ ಓವಲ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ತಂಡದ ನಾಯಕ ರೋವ್ಮನ್ ಪೊವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು.
ಆರಂಭಿಕರಾದ ಫಿಲ್ ಸಾಲ್ಟ್ (40) ಹಾಗೂ ಜೋಸ್ ಬಟ್ಲರ್ (39) ಮೊದಲ ವಿಕೆಟ್ಗೆ 77 ರನ್ಗಳ ಜೊತೆಯಾಟವಾಡಿದರು. ಆ ಬಳಿಕ ಬಂದ ವಿಲ್ ಜಾಕ್ಸ್ 17 ರನ್ಗಳ ಕೊಡುಗೆ ನೀಡಿದರೆ, ಬೆನ್ ಡಕೆಟ್ 14 ರನ್ ಬಾರಿಸಿ ಔಟಾದರು.
ಈ ಹಂತದಲ್ಲಿ ಮತ್ತೆ ದಾಳಿಗಿಳಿದ ಅನುಭವಿ ಆಟಗಾರ ಆ್ಯಂಡ್ರೆ ರಸೆಲ್ ಲಿಯಾಮ್ ಲಿವಿಂಗ್ಸ್ಟೋನ್ (27) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಅಂತಿಮವಾಗಿ 19.3 ಓವರ್ಗಳಲ್ಲಿ 171 ರನ್ಗಳಿಸಿ ಇಂಗ್ಲೆಂಡ್ ತಂಡವು ಆಲೌಟ್ ಆಯಿತು. ವೆಸ್ಟ್ ಇಂಡೀಸ್ ಪರ ಆ್ಯಂಡ್ರೆ ರಸೆಲ್ 4 ಓವರ್ಗಳಲ್ಲಿ ಕೇವಲ 19 ರನ್ ನೀಡಿ 3 ವಿಕೆಟ್ ಕಬಳಿಸಿದರು.
172 ರನ್ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡಕ್ಕೆ ಬ್ರಾಂಡನ್ ಕಿಂಗ್ (22) ಹಾಗೂ ಕೈಲ್ ಮೇಯರ್ಸ್ (35) ಸ್ಪೋಟಕ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಶಾಯ್ ಹೋಪ್ 36 ರನ್ಗಳನ್ನು ಬಾರಿಸಿ ವಿಕೆಟ್ ಒಪ್ಪಿಸಿದರು.
ಈ ಹಂತದಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಇಂಗ್ಲೆಂಡ್ ಬೌಲರ್ಗಳು ನಿಕೋಲಸ್ ಪೂರನ್ (13) ಹಾಗೂ ಶಿಮ್ರಾನ್ ಹೆಟ್ಮೆಯರ್ (1) ರನ್ನು ಬ್ಯಾಕ್ ಟು ಬ್ಯಾಕ್ ಔಟ್ ಮಾಡಿದರು. ಈ ವೇಳೆ ಜೊತೆಗೂಡಿದ ರೋವ್ಮನ್ ಪೊವೆಲ್ ಹಾಗೂ ಆ್ಯಂಡ್ರೆ ರಸೆಲ್ ಇಡೀ ಪಂದ್ಯದ ಗತಿ ಬದಲಿಸಿದರು.
ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಪೊವೆಲ್ 15 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 31 ರನ್ ಬಾರಿಸಿದರು. ಮತ್ತೊಂದೆಡೆ ಆ್ಯಂಡ್ರೆ ರಸೆಲ್ 14 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ ಅಜೇಯ 29 ರನ್ ಬಾರಿಸಿ 18.1 ಓವರ್ಗಳಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ 2022ರ ಟಿ20 ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ತಂಡ 4 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ಬ್ರಾಂಡನ್ ಕಿಂಗ್ , ಕೈಲ್ ಮೇಯರ್ಸ್ , ಶಾಯ್ ಹೋಪ್ , ನಿಕೋಲಸ್ ಪೂರನ್ (ವಿಕೆಟ್ ಕೀಪರ್) , ಶಿಮ್ರಾನ್ ಹೆಟ್ಮೆಯರ್ , ರೋವ್ಮನ್ ಪೊವೆಲ್ (ನಾಯಕ) , ಆ್ಯಂಡ್ರೆ ರಸೆಲ್ , ರೊಮಾರಿಯೋ ಶೆಫರ್ಡ್ , ಜೇಸನ್ ಹೋಲ್ಡರ್ , ಅಕೇಲ್ ಹೋಸೇನ್ , ಅಲ್ಜಾರಿ ಜೋಸೆಫ್.
ಇದನ್ನೂ ಓದಿ: Suryakumar Yadav: ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್ ಯಾದವ್
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಜೋಸ್ ಬಟ್ಲರ್ (ನಾಯಕ) , ಫಿಲಿಪ್ ಸಾಲ್ಟ್ , ವಿಲ್ ಜಾಕ್ಸ್ , ಬೆನ್ ಡಕೆಟ್ , ಹ್ಯಾರಿ ಬ್ರೂಕ್ , ಲಿಯಾಮ್ ಲಿವಿಂಗ್ಸ್ಟೋನ್ , ಸ್ಯಾಮ್ ಕರನ್ , ಕ್ರಿಸ್ ವೋಕ್ಸ್ , ರೆಹಾನ್ ಅಹ್ಮದ್ , ಆದಿಲ್ ರಶೀದ್ , ಟೈಮಲ್ ಮಿಲ್ಸ್.