AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WI vs ENG: ಕೊನೆಯ ದಿನದಾಟ ಬಾಕಿ: ರೋಚಕ ಘಟ್ಟದತ್ತ ವಿಂಡೀಸ್-ಇಂಗ್ಲೆಂಡ್ ದ್ವಿತೀಯ ಟೆಸ್ಟ್

136 ರನ್​ಗಳ ಮುನ್ನಡೆ ಸಾಧಿಸಿರುವ ಆಂಗ್ಲರು ಐದನೇ ದಿನದಾಟ ಬ್ಯಾಟಿಂಗ್ ನಡೆಸಲಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ. ರೂಟ್ ಪಡೆ ಡ್ರಾ ಸಾಧಿಸುವತ್ತ ಎದುರು ನೋಡುತ್ತಾ ಅಥವಾ ಮೊದಲ ಸೆಷನ್​ಗೂ ಮುನ್ನ ಎಷ್ಟಾಗುತ್ತೋ ಅಷ್ಟು ರನ್ ಕಲೆಹಾಕಿ ವಿಂಡೀಸ್​ಗೆ ಟಾರ್ಗೆಟ್ ನೀಡುತ್ತಾ ಎಂಬುದು ರೋಚಕತ ಸೃಷ್ಟಿಸಿದೆ.

WI vs ENG: ಕೊನೆಯ ದಿನದಾಟ ಬಾಕಿ: ರೋಚಕ ಘಟ್ಟದತ್ತ ವಿಂಡೀಸ್-ಇಂಗ್ಲೆಂಡ್ ದ್ವಿತೀಯ ಟೆಸ್ಟ್
WI vs ENG
TV9 Web
| Edited By: |

Updated on:Mar 20, 2022 | 7:47 AM

Share

ಕೆರಿಬಿಯನ್ನರ ನಾಡಿಗೆ ಪ್ರವಾಸ ಬೆಳೆಸಿ ಟೆಸ್ಟ್ ಸರಣಿಯನ್ನು ಆಡುತ್ತಿರುವ ಇಂಗ್ಲೆಂಡ್ ತಂಡ ವೆಸ್ಟ್ ಇಂಡೀಸ್ (West Indies vs England) ವಿರುದ್ಧದ ಮೊದಲ ಟೆಸ್ಟ್ ಅನ್ನು ಡ್ರಾ ಮಾಡಿಕೊಂಡಿದ್ದರೆ, ದ್ವಿತೀಯ ಟೆಸ್ಟ್​ನಲ್ಲಿ ಭರ್ಜರಿ ಆಟ ಪ್ರದರ್ಶಿಸುತ್ತಿದೆ. ಬಾರ್ಬಡೊಸ್​ನ (Barbados) ಕೆನ್ಸಿಂಗ್​ಟಾನ್​ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು ನಾಲ್ಕನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ಒಟ್ಟು 136 ರನ್​ಗಳ ಮುನ್ನಡೆ ಸಾಧಿಸಿರುವ ಆಂಗ್ಲರು ಐದನೇ ದಿನದಾಟ ಬ್ಯಾಟಿಂಗ್ ನಡೆಸಲಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ. ರೂಟ್ (joe Root) ಪಡೆ ಡ್ರಾ ಸಾಧಿಸುವತ್ತ ಎದುರು ನೋಡುತ್ತಾ ಅಥವಾ ಮೊದಲ ಸೆಷನ್​ಗೂ ಮುನ್ನ ಎಷ್ಟಾಗುತ್ತೋ ಅಷ್ಟು ರನ್ ಕಲೆಹಾಕಿ ವಿಂಡೀಸ್​ಗೆ ಟಾರ್ಗೆಟ್ ನೀಡುತ್ತಾ ಎಂಬುದು ರೋಚಕತ ಸೃಷ್ಟಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ನಾಯಕ ಜೋ ರೂಟ್ ಅವರ 153 ರನ್ ಹಾಗೂ ಬೆನ್ ಸ್ಟೋಕ್ಸ್ ಅವರ 120 ರನ್​ಗಳ ನೆರವಿನಿಂದ ಮೊದಲ ಇನ್ನಿಂಗ್ಸ್​ನಲ್ಲಿ 507 ರನ್​ಗೆ ಡಿಕ್ಲೇರ್ ಘೋಷಿಸಿತು. ಬಳಿಕ ಬ್ಯಾಟಿಂಗ್ ಆರಂಭಿಸಿದ ವೆಸ್ಟ್ ಇಂಡೀಸ್ ದ್ವಿತೀಯ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 71 ರನ್ ಕಲೆಹಾಕಿತ್ತು. ಬಳಿಕ ಮೂರನೇ ದಿನದಾಟದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 288 ರನ್ ಕಲೆಹಾಕಿತು. ವೆಸ್ಟ್ ಇಂಡೀಸ್ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ನಾಯಕ ಕ್ರೇಗ್ ಬ್ರಾಥ್ ವೈಟ್ ಅಜೇಯ 109 ರನ್ ಮತ್ತಯ ಜರ್ಮೈನ್ ಬ್ಲ್ಯಾಕ್ ವುಡ್ 102 ರನ್ ಗಳಿಸಿ ತಂಡಕ್ಕೆ ನೆರವಾದರು. ನಾಲ್ಕನೇ ದಿನದಾಟದಲ್ಲಿ ಆಂಗ್ಲರು ಮೇಲುಗೈ ಸಾಧಿಸಿದರು. ಬ್ರಾಥ್​ವೈಟ್ 489 ಎಸೆತಗಳಲ್ಲಿ 17 ಫೋರ್​​ನೊಂದಿಗೆ 160 ರನ್​ಗೆ ಔಟಾದರೆ, ಬಳಿಕ ಬಂದ ಬ್ಯಾಟರ್​ಗಳ ಪೈಕಿ ಜೋಶ್ವಾ ಸಿಲ್ವ 33 ರನ್ ಗಳಿಸಿದ್ದೇ ಹೆಚ್ಚು.

ಅಂತಿಮವಾಗಿ ವೆಸ್ಟ್ ಇಂಡೀಸ್ 187.5 ಓವರ್​ನಲ್ಲಿ 411 ರನ್​ಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಜ್ಯಾಕ್ ಲೀಚ್ 3 ವಿಕೆಟ್ ಕಿತ್ತರೆ, ಬೆನ್ ಸ್ಟೋಕ್ಸ್ ಹಾಗೂ ಸಕೀಬ್ ಮೊಹಮ್ಮದ್ ತಲಾ 2 ವಿಕೆಟ್ ಪಡೆದರು. ಬಳಿಕ ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ನಾಲ್ಕನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಬಾರಿಸಿದೆ. 136 ರನ್​ಗಳ ಮುನ್ನಡೆಯಲ್ಲಿದೆ.

ಮೊದಲ ಇನ್ನಿಂಗ್ಸ್​ನಲ್ಲಿ 507ಕ್ಕೆ ಡಿಕ್ಲೇರ್:

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ಆರಂಭದಲ್ಲೇ ಕೇವಲ 4 ರನ್​ಗೆ ಮೊದಲ ವಿಕೆಟ್ ಕಳೆದುಕೊಂಡಿತು. 100 ರನ್​ಗೂ ಮೊದಲೇ 2 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್​ಗೆ ನಾಯಕನ ಜೊತೆ ಡೆನಿಯಲ್ ಲಾರೆನ್ಸ್ ಇನ್ನಿಂಗ್ಸ್ ಕಟ್ಟಿದರು. ಎಚ್ಚರಿಕೆಯ ಆಟ ಪ್ರದರ್ಶಿಸಿದ ಈ ಜೋಡಿ ತಂಡಕ್ಕೆ ಆಧಾರವಾಗಿ ನಿಂತಿತು. ಬರೋಬ್ಬರಿ 164 ರನ್​ಗಳ ಜೊತೆಯಾಟ ಆಡಿದ ಇವರಿಬ್ಬರು ತಂಡದ ಮೊತ್ತವನ್ನು 250ರ ಅಂಚಿಗೆ ತಂದಿಟ್ಟರು. ಶತಕದ ಅಂಚಿನಲ್ಲಿ ಎಡವಿದ ಲಾರೆನ್ಸ್ 150 ಎಸೆತಗಳಲ್ಲಿ 13 ಬೌಂಡರಿ, 1 ಸಿಕ್ಸರ್​ನೊಂದಿಗೆ 91 ರನ್ ಗಳಿಸಿ ಜೇಸನ್ ಹೋಲ್ಡರ್​ಗೆ ವಿಕೆಟ್ ಒಪ್ಪಿಸಿದರು.

ಎರಡನೇ ದಿನ ಬೆನ್ ಸ್ಟೋಕ್ಸ್ ಜೊತೆಯಾದ ರೂಟ್ ಮತ್ತೊಂದು ಅಮೋಘ ಇನ್ನಿಂಗ್ಸ್ ಕಟ್ಟಿದರು. ಅದರಲ್ಲೂ ಸ್ಟೋಕ್ಸ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ರೂಟ್ 316 ಎಸೆತಗಳಲ್ಲಿ 14 ಬೌಂಡರಿಯೊಂದಿಗೆ 153 ರನ್ ಬಾರಿಸಿ ಔಟಾದರು. ಸ್ಟೋಕ್ಸ್ ಕೇವಲ 128 ಎಸೆತಗಳಲ್ಲಿ 11 ಬೌಂಡರಿ, 6 ಸಿಕ್ಸರ್​​ನೊಂದಿಗೆ 120 ರನ್ ಚಚ್ಚಿದರು. ಬಳಿಕ ಬಂದ ಬ್ಯಾಟರ್​​ಗಳ ಪೈಕಿ ಕ್ರಿಸ್ ವೋಕ್ಸ್ 41 ಹಾಗೂ ಬೆನ್ ಫಾಕ್ಸ್ 33 ರನ್ ಗಳಿಸಿದರು. 150.5 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 507 ರನ್ ಗಳಿಸಿದ್ದಾಗ ಇಂಗ್ಲೆಂಡ್ ಡಿಕ್ಲೇರ್ ಘೋಷಿಸಿತು.

IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

Published On - 7:20 am, Sun, 20 March 22

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?