Rovman Powell: 14 ಎಸೆತಗಳಲ್ಲಿ 76 ರನ್: ಪೊವೆಲ್ ಸಿಡಿಲಬ್ಬರದ ಸೆಂಚುರಿಗೆ ತತ್ತರಿಸಿದ ಇಂಗ್ಲೆಂಡ್

West Indies vs England: ಈ ಬೃಹತ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಟಗಾರ ಟಾಮ್ ಬ್ಯಾಂಟನ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ಬ್ಯಾಂಟನ್ 39 ಎಸೆತಗಳಲ್ಲಿ 73 ರನ್ ಬಾರಿಸಿದರು.

Rovman Powell: 14 ಎಸೆತಗಳಲ್ಲಿ 76 ರನ್: ಪೊವೆಲ್ ಸಿಡಿಲಬ್ಬರದ ಸೆಂಚುರಿಗೆ ತತ್ತರಿಸಿದ ಇಂಗ್ಲೆಂಡ್
Rovman Powell
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 27, 2022 | 3:34 PM

ವೆಸ್ಟ್​ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಕೀರನ್ ಪೋಲಾರ್ಡ್ ಪಡೆ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಬ್ರೆಂಡನ್ ಕಿಂಗ್ (10) ಮತ್ತು ಶಾಯ್ ಹೋಪ್ (04) ಇಬ್ಬರೂ ಬೇಗನೆ ಔಟಾಗಿದ್ದರು. ಆ ಬಳಿಕ ಕಣಕ್ಕಿಳಿದ ನಿಕೋಲಸ್ ಪೂರನ್ ಮತ್ತು ರೋವ್ಮನ್ ಪೊವೆಲ್ ಮೂರನೇ ವಿಕೆಟ್‌ಗೆ 122 ರನ್‌ಗಳ ಜತೆಯಾಟವಾಡಿದರು. 5 ಸಿಕ್ಸ್ 4 ಬೌಂಡರಿಯೊಂದಿಗೆ 43 ಎಸೆತಗಳಲ್ಲಿ ಪೂರನ್ 70 ರನ್ ಬಾರಿಸಿ ಆದಿಲ್ ರಶೀದ್​ಗೆ ವಿಕೆಟ್ ಒಪ್ಪಿಸಿದ್ದರು.

ಆದರೆ ಮತ್ತೊಂದೆಡೆ ರೋವ್ಮನ್ ಪೊವೆಲ್ ಸಿಡಿಲಬ್ಬರ ಶುರು ಮಾಡಿದ್ದರು. ಇಂಗ್ಲೆಂಡ್ ಬೌಲರುಗಳನ್ನು ಮನಬಂದಂತೆ ದಂಡಿಸಿದ ಪೊವೆಲ್ ಸಿಕ್ಸ್​ಗಳ ಸುರಿಮಳೆಗೈದರು. ಅದರಂತೆ 10 ಭರ್ಜರಿ ಸಿಕ್ಸರ್ ಹಾಗೂ 4 ಬೌಂಡರಿಯೊಂದಿಗೆ 53 ಎಸೆತಗಳಲ್ಲಿ 107 ರನ್​ ಚಚ್ಚಿದರು. ಅಂದರೆ ಸಿಕ್ಸ್​-ಫೋರ್​ಗಳ ಮೂಲಕವೇ ಪೊವೆಲ್ 14 ಎಸೆತಗಳಲ್ಲಿ 76 ರನ್​ ಸಿಡಿಸಿದ್ದರು. ಈ ಸ್ಪೋಟಕ ಇನಿಂಗ್ಸ್ ಪರಿಣಾಮ ವೆಸ್ಟ್ ಇಂಡೀಸ್ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 224 ರನ್​ಗಳಿಸಿತು.

ಈ ಬೃಹತ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಟಗಾರ ಟಾಮ್ ಬ್ಯಾಂಟನ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ಬ್ಯಾಂಟನ್ 39 ಎಸೆತಗಳಲ್ಲಿ 73 ರನ್ ಬಾರಿಸಿದರು. ಈ ವೇಳೆ ಟಾಮ್ ಬ್ಯಾಂಟನ್ ಬ್ಯಾಟ್​ನಿಂದ 6 ಸಿಕ್ಸ್​ ಹಾಗೂ 3 ಬೌಂಡರಿ ಮೂಡಿಬಂದಿತ್ತು.

11 ಓವರ್​ ವೇಳೆಗೆ 100ರ ಗಡಿದಾಟಿದ್ದ ಇಂಗ್ಲೆಂಡ್ ತಂಡವು ಮಧ್ಯಮ ಕ್ರಮಾಂಕದ ಕುಸಿತಕ್ಕೊಳಗಾಯಿತು. ಇದಾಗ್ಯೂ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಫಿಲಿಪ್ ಸಾಲ್ಟ್ 5 ಸಿಕ್ಸ್ ಹಾಗೂ 3 ಫೋರ್​ನೊಂದಿಗೆ ಕೇವಲ 24 ಎಸೆತಗಳಲ್ಲಿ 57 ರನ್​ ಬಾರಿಸಿದರು. ಅಂತಿಮ ಓವರ್​ವರೆಗೂ ಏಕಾಂಕಿ ಹೋರಾಟ ನಡೆಸಿದ ಸಾಲ್ಟ್ 20ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು.

ಪರಿಣಾಮ ಇಂಗ್ಲೆಂಡ್ ತಂಡವು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 204 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ವೆಸ್ಟ್ ಇಂಡೀಸ್ ತಂಡವು 20 ರನ್​ಗಳಿಂದ ಜಯ ಸಾಧಿಸಿತು. ಈ ಗೆಲುವಿನೊಂದಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವು 2-1 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.

ಇದನ್ನೂ ಓದಿ:  IND vs WI: ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿದ್ದ 5 ಆಟಗಾರರು ಟೀಮ್ ಇಂಡಿಯಾದಿಂದ ಔಟ್..!

ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್

(West Indies vs England: Rovman Powell scores stunning century)

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ