West Indies vs India, 1st T20I: ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟಿ20 ಪಂದ್ಯ ಶುರುವಾಗಿದೆ. ಟ್ರಿನಿಡಾಡ್ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡ ನಾಯಕ ರೋವ್‌ಮನ್ ಪೊವೆಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಹಾಗೂ ವೇಗದ ಬೌಲರ್ ಮುಖೇಶ್ ಕುಮಾರ್ ಪಾದಾರ್ಪಣೆ ಮಾಡಿದ್ದಾರೆ.
ಈ ಸರಣಿಯಲ್ಲಿ ಒಟ್ಟು 5 ಟಿ20 ಪಂದ್ಯಗಳನ್ನು ಆಡಲಾಗುತ್ತಿದ್ದು, ಮೊದಲ ಪಂದ್ಯಕ್ಕೆ ಟ್ರಿನಿಡಾಡ್ ಆತಿಥ್ಯವಹಿಸಿದೆ. ಇನ್ನು 2ನೇ ಹಾಗೂ 3ನೇ ಪಂದ್ಯಗಳು ಗಯಾನದಲ್ಲಿ ನಡೆಯಲಿದೆ. ಹಾಗೆಯೇ 4ನೇ ಮತ್ತು 5ನೇ ಪಂದ್ಯಗಳು ಯುಎಸ್ಎನ ಫ್ಲೋರಿಡಾದಲ್ಲಿ ನಡೆಯಲಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ 11: ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್
ಈ ಸರಣಿಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ದೃಷ್ಟಿಯಲ್ಲಿ ಇಬ್ಬರು ಹಿರಿಯ ಆಟಗಾರರಿಗೆ ವಿಶ್ರಾಂತಿ ಕಲ್ಪಿಸಲಾಗಿದೆ. ಹೀಗಾಗಿ ಏಕದಿನ ವಿಶ್ವಕಪ್ ಬಳಿಕವಷ್ಟೇ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಟಿ20 ಕ್ರಿಕೆಟ್ ಭವಿಷ್ಯ ನಿರ್ಧಾರವಾಗಲಿದೆ.
ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.
ಇದನ್ನೂ ಓದಿ: Team India: ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ
ವೆಸ್ಟ್ ಇಂಡೀಸ್ ಟಿ20 ತಂಡ: ರೋವ್‌ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಓಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ , ಓಶಾನೆ ಥಾಮಸ್.
Published On - 7:37 pm, Thu, 3 August 23