IND vs WI 1st T20: ಟೀಮ್ ಇಂಡಿಯಾಗೆ ಸುಲಭ ಗುರಿ ನೀಡಿದ ವೆಸ್ಟ್ ಇಂಡೀಸ್

West Indies vs India, 1st T20I: ಭಾರತ-ವೆಸ್ಟ್ ಇಂಡೀಸ್ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

IND vs WI 1st T20: ಟೀಮ್ ಇಂಡಿಯಾಗೆ ಸುಲಭ ಗುರಿ ನೀಡಿದ ವೆಸ್ಟ್ ಇಂಡೀಸ್
IND vs WI
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 03, 2023 | 9:49 PM

West Indies vs India, 1st T20I: ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ತಂಡದ ನಾಯಕ ರೋವ್​ಮನ್ ಪೊವೆಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಆರಂಭಿಕರಾಗಿ ಕಣಕ್ಕಿಳಿದ ಕೈಲ್ ಮೇಯರ್ಸ್​ (1) ಎಲ್​ಬಿ ಬಲೆಗೆ ಬೀಳಿಸಿದ ಯುಜ್ವೇಂದ್ರ ಚಹಲ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಬ್ರೆಂಡನ್ ಕಿಂಗ್ (28) ವಿಕೆಟ್​ ಪಡೆದರು. ಈ ಹಂತದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ ಸ್ಪೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದರು. ಇದೇ ವೇಳೆ ಬೌಲಿಂಗ್​ನಲ್ಲಿ ಬದಲಾವಣೆ ತಂದ ಹಾರ್ದಿಕ್ ಪಾಂಡ್ಯ ಕುಲ್ದೀಪ್ ಯಾದವ್​ಗೆ ಚೆಂಡು ನೀಡಿದರು.

ಇತ್ತ ಕುಲ್ದೀಪ್ ಯಾದವ್ ಜಾನ್ಸನ್ ಚಾರ್ಲ್ಸ್ (3) ವಿಕೆಟ್ ಪಡೆದು ಮೂರನೇ ಯಶಸ್ಸು ತಂದುಕೊಟ್ಟರು. ಆದರೆ ಮತ್ತೊಂದೆಡೆ 2 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 41 ರನ್ ಬಾರಿಸಿ ಪೂರನ್ ತಂಡದ ಮೊತ್ತವನ್ನು ಹೆಚ್ಚಿಸಿದರು.

ಇದರ ನಡುವೆ ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾದ ನಿಕೋಲಸ್ ಪೂರನ್ (41) ತಿಲಕ್ ವರ್ಮಾಗೆ ಕ್ಯಾಚ್ ನೀಡಿದರು. ಇದಾಗ್ಯೂ ವೆಸ್ಟ್ ಇಂಡೀಸ್ ತಂಡದ ನಾಯಕ ರೋವ್​ಮನ್ ಪೊವೆಲ್ ಅಬ್ಬರ ಮುಂದುವರೆದಿತ್ತು. 32 ಎಸೆತಗಳನ್ನು ಎದುರಿಸಿದ ರೋವ್​ಮನ್ ಪೊವೆಲ್ 3 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 48 ರನ್​ಗಳಿಸಿ ಔಟಾದರು.

ಅಂತಿಮ ಓವರ್​ನಲ್ಲಿ ಕೇವಲ 9 ರನ್ ನೀಡಿ ಮುಖೇಶ್ ಕುಮಾರ್ ವೆಸ್ಟ್ ಇಂಡೀಸ್ ತಂಡವನ್ನು 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 149 ರನ್​ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಟೀಮ್ ಇಂಡಿಯಾ ಪರ 3 ಓವರ್​ಗಳಲ್ಲಿ 24 ರನ್ ನೀಡಿ ಯುಜ್ವೇಂದ್ರ ಚಹಲ್ 2 ವಿಕೆಟ್ ಪಡೆದರೆ, ಅರ್ಷದೀಪ್ ಸಿಂಗ್ 4 ಓವರ್​ಗಳಲ್ಲಿ 31 ರನ್ ನೀಡಿ 2 ವಿಕೆಟ್ ಕಬಳಿಸಿದರು. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲು 20 ಓವರ್​ಗಳಲ್ಲಿ 150 ರನ್​ಗಳಿಸಬೇಕು.

ಟೀಮ್ ಇಂಡಿಯಾ ಪ್ಲೇಯಿಂಗ್ 11: ಶುಭ್​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.

ಇದನ್ನೂ ಓದಿ: Team India: ಶತಕ ಬಾರಿಸದೇ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಝಾರಿ ಜೋಸೆಫ್, ಒಬೆಡ್ ಮೆಕಾಯ್.

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ