WI vs IND: ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ನಲ್ಲಿ ಕಾಣಿಸಿಕೊಂಡ ವೆಸ್ಟ್ ಇಂಡೀಸ್ ಲೆಜೆಂಡ್ ಕ್ರಿಕೆಟಿಗ
West indies vs india 2nd Odi: ಈ ಸರಣಿಯ 2ನೇ ಪಂದ್ಯವು ಭಾನುವಾರ (ಜುಲೈ 22) ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ಭಾರತದ ಪಾಲಾಗಲಿದೆ. ಹೀಗಾಗಿ ವೆಸ್ಟ್ ಇಂಡೀಸ್ ತಂಡಕ್ಕೆ 2ನೇ ಪಂದ್ಯವು ನಿರ್ಣಾಯಕವಾಗಿದೆ.
ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು 3 ರನ್ ಗಳಿಂದ ಸೋಲಿಸಿ ರೋಚಕ ಜಯ ಸಾಧಿಸಿದೆ. ಶುಕ್ರವಾರ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 308 ರನ್ ಗಳಿಸಿತ್ತು. ನಂತರ ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ 305 ರನ್ ಗಳಿಸಲಷ್ಟೇ ಶಕ್ತವಾಯಿತು. ರೋಚಕ ಪಂದ್ಯದಲ್ಲಿ ಗೆಲುವಿನ ಬಳಿಕ ವೆಸ್ಟ್ ಇಂಡೀಸ್ನ ಲೆಜೆಂಡ್ ಕ್ರಿಕೆಟಿಗ ಬ್ರಿಯಾನ್ ಲಾರಾ ಡ್ರೆಸ್ಸಿಂಗ್ ರೂಂನಲ್ಲಿ ಟೀಮ್ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದರು.
ಟೀಮ್ ಇಂಡಿಯಾ ಗೆಲುವಿನ ಬಳಿಕ ಲಾರಾ ಭಾರತೀಯ ಆಟಗಾರರನ್ನು ಕುಶಲೋಪರಿ ನಡೆಸಿದರು. ಏತನ್ಮಧ್ಯೆ, ಶಿಖರ್ ಧವನ್ ಮತ್ತು ಶ್ರೇಯಸ್ ಅಯ್ಯರ್ ವೆಸ್ಟ್ ಇಂಡೀಸ್ ದಂತಕಥೆಯೊಂದಿಗೆ ವಿಶೇಷ ಸಂವಾದ ನಡೆಸಿದರು. ಇವರೊಂದಿಗೆ ಯುಜುವೇಂದ್ರ ಚಾಹಲ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ಕಾಣಿಸಿಕೊಂಡರು. ಈ ವಿಶೇಷ ವಿಡಿಯೋವನ್ನು ಬಿಸಿಸಿಐ ಟ್ವೀಟ್ ಮಾಡಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಕೂಡ ಲಾರಾ ಅವರನ್ನು ಭೇಟಿಯಾಗಿದ್ದರು.
Look who came visiting the #TeamIndia dressing room ? ?
The legendary Brian Charles Lara! ? ?#WIvIND | @BrianLara pic.twitter.com/ogjJkJ2m4q
— BCCI (@BCCI) July 23, 2022
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಶಿಖರ್ ಧವನ್ 97 ರನ್‌ಗಳ ಅದ್ಭುತ ಇನ್ನಿಂಗ್ಸ್‌ನೊಂದಿಗೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ ಕೇವಲ 3 ರನ್ಗಳಿಂದ ಶತಕ ವಂಚಿತರಾಗಿದ್ದರು. ಇನ್ನು ಶುಭಮನ್ ಗಿಲ್ 64 ರನ್, ಶ್ರೇಯಸ್ ಅಯ್ಯರ್ 54 ರನ್ ಗಳಿಸಿ ಮಿಂಚಿದರು. ಭಾರತದ ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಹಾಗೂ ಚಹಾಲ್ ತಲಾ ಎರಡು ವಿಕೆಟ್ ಪಡೆದು ಭಾರತ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.
ಇದೀಗ ಈ ಸರಣಿಯ 2ನೇ ಪಂದ್ಯವು ಭಾನುವಾರ (ಜುಲೈ 22) ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ಭಾರತದ ಪಾಲಾಗಲಿದೆ. ಹೀಗಾಗಿ ವೆಸ್ಟ್ ಇಂಡೀಸ್ ತಂಡಕ್ಕೆ 2ನೇ ಪಂದ್ಯವು ನಿರ್ಣಾಯಕವಾಗಿದೆ.
ವೆಸ್ಟ್ ಇಂಡೀಸ್ ಏಕದಿನ ತಂಡ ಹೀಗಿದೆ: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮ್ರಾ ಬ್ರೂಕ್ಸ್, ಕೆಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರೆಂಡನ್ ಕಿಂಗ್, ಕೈಲ್ ಮೈಯರ್ಸ್, ಗುಡಕೇಶ್ ಮೋತಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್ ಮತ್ತು ಜೇಡನ್ ಸೀಲ್ಸ್.
ಮೀಸಲು ಆಟಗಾರರು: ರೊಮಾರಿಯೊ ಶೆಫರ್ಡ್, ಹೇಡನ್ ವಾಲ್ಷ್ ಜೂನಿಯರ್.
ಭಾರತ ಏಕದಿನ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
Published On - 10:55 am, Sun, 24 July 22